AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾರ್​​​ನಲ್ಲಿ ಕಿರಿಕ್; ನಟ ನಿರಂಜನ್​ ಮೇಲೆ ಬಿಯರ್ ಬಾಟಲ್​​ನಿಂದ ಹಲ್ಲೆ

ನಟ ನಿರಂಜನ್ ಮೇಲೆ ಬೆಂಗಳೂರಿನ ಬಾರ್‌ನಲ್ಲಿ ಅಪರಿಚಿತರಿಂದ ಬಿಯರ್ ಬಾಟಲಿಯಿಂದ ಹಲ್ಲೆ ನಡೆದಿದೆ. ಮಾರ್ಚ್ 28ರಂದು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಸುಬ್ರಹ್ಮಣ್ಯಪುರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. 'ಒಡೆಯ' ಸಿನಿಮಾದ ಮೂಲಕ ಖ್ಯಾತಿ ಗಳಿಸಿದ್ದ ನಿರಂಜನ್, ನಟ ಎಂದು ಗೊತ್ತಾಗುತ್ತಿದ್ದಂತೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ.

ಬಾರ್​​​ನಲ್ಲಿ ಕಿರಿಕ್; ನಟ ನಿರಂಜನ್​ ಮೇಲೆ ಬಿಯರ್ ಬಾಟಲ್​​ನಿಂದ ಹಲ್ಲೆ
ನಿರಂಜನ್
ರಾಚಪ್ಪಾಜಿ ನಾಯ್ಕ್
| Edited By: |

Updated on: Apr 06, 2026 | 10:53 AM

Share

ಕನ್ನಡ ಚಿತ್ರರಂಗದಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿರುವ ನಟ ನಿರಂಜನ್ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ಮಾಡಿದ್ದಾರೆ. ಬೆಂಗಳೂರಿನ ಬಾರ್ ಒಂದರಲ್ಲಿ ನಡೆದ ಕಿರಿಕ್​ ಮಿತಿ ಮೀರಿದ್ದು, ಬಿಯರ್ ಬಾಟಲಿಯಿಂದ ನಟನ ಮೇಲೆ ಹಲ್ಲೆ ಮಾಡಲಾಗಿದೆ. ಘಟನೆ ಸಂಬಂಧ ಸುಬ್ರಹ್ಮಣ್ಯಪುರ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಮಾರ್ಚ್ 28ರಂದು ನಡೆದಿರುವ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ದರ್ಶನ್ ಅಭಿನಯದ ‘ಒಡೆಯ’ (2019) ಸಿನಿಮಾದಲ್ಲಿ ನಿರಂಜನ್ ನಟಿಸಿದ್ದರು. ಈ ಸಿನಿಮಾದಲ್ಲಿ ದರ್ಶನ್ ಸಹೋದರನ ಪಾತ್ರದಲ್ಲಿ ಅವರು ಕಾಣಿಸಿಕೊಂಡರು. ಈ ಪಾತ್ರ ಅವರ ವೃತ್ತಿ ಜೀವನಕ್ಕೆ ಸಾಕಷ್ಟು ಮೈಲೇಜ್ ನೀಡಿತು. ಈಗ ಅವರು ವಿವಾದದ ಮೂಲಕ ಸುದ್ದಿ ಆಗಿದ್ದಾರೆ.

ಕೆಲಸದ ನಿಮಿತ್ತ ನಟ ಯಶಸ್ ಸೂರ್ಯ ನಿವಾಸಕ್ಕೆ ನಿರಂಜನ್ ತೆರಳಿದ್ದರು. ಭೇಟಿ ಬಳಿಕ ಮಂತ್ರಿ ಅಲೈಯನ್ಸ್ ಬಳಿಯ ಬಾರ್​ಗೆ ನಿರಂಜನ್ ಬಂದಿದ್ದರು. ನೀರು‌ ಕುಡಿಯಲೆಂದು ಬಾರ್​ಗೆ ಬಂದಿದ್ದಾಗಿ ನಿರಂಜನ್ ಹೇಳಿಕೊಂಡಿದ್ದಾರೆ. ಈ ವೇಳೆ ಬಾರ್​ ಅಲ್ಲಿ ಇದ್ದ ವ್ಯಕ್ತಿಯೋರ್ವ ನಿರಂಜನ್​ ತಳ್ಳಿದ್ದಕ್ಕೆ ಗಲಾಟೆ ಶುರುವಾಗಿದೆ.

ಇದನ್ನೂ ಓದಿ: ಇದು ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ನಿರ್ದೇಶಕರ ಸ್ಪಷ್ಟನೆ

ಈ ವೇಳೆ ನಿರಂಜನ್ ನಟ ಎಂಬ ವಿಷಯ ಅಪರಿಚಿತ ವ್ಯಕ್ತಿಗೆ ಗೊತ್ತಾಗಿದೆ. ‘ನೀನು ನಟನಾದರೆ ನನಗೇನು’ ಎಂದು ಅಪರಿಚಿತ ವ್ಯಕ್ತಿ ಬೈದಿದ್ದ. ಈ ವಿಷಯದ ಬಗ್ಗೆ ಬಾರ್ ಮಾಲೀಕರ ಜೊತೆ ಮಾತನಾಡುವಾಗ ಬಂದ ನಾಲ್ವರು ನಿರಂಜನ್​ ಜೊತೆ ಮತ್ತೆ ಕಿರಿಕ್ ಮಾಡಿಕೊಂಡಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಬಿಯರ್​ ಬಾಟಲಿಯಿಂದ ನಟನ ತಲೆಗೆ ಹೊಡೆದು ಹಲ್ಲೆ ಮಾಡಿದ್ದಾರೆ. ಘಟನೆ ಸಂಬಂಧ ಸುಬ್ರಹ್ಮಣ್ಯಪುರ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. 2017ರ ‘ಜಲ್ಸಾ’ (2017) ಚಿತ್ರದ ಮೂಲಕ ನಿರಂಜನ್ ಬಣ್ಣದ ಲೋಕಕ್ಕೆ ಕಾಲಿಟ್ಟರು. ನಂತರ ಕೆಲ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ‘ಒಡೆಯ’ ಚಿತ್ರದ ಪಾತ್ರಕ್ಕೆ ಮೆಚ್ಚುಗೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಚಪ್ಪಾಜಿ ನಾಯ್ಕ್
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ