Ramya Divya Spandana: ಚೇತನಾ ರಾಜ್​ ನಿಧನದ ಬಗ್ಗೆ ರಮ್ಯಾ ಪ್ರತಿಕ್ರಿಯೆ; ಚಿತ್ರರಂಗದ ಕಹಿ ಸತ್ಯದ ಕುರಿತು ಮೌನ ಮುರಿದ ನಟಿ

Chetana Raj Death: ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿರುವ ರಮ್ಯಾ ಅವರು ಹಲವು ವಿಷಯಗಳ ಕುರಿತು ಪ್ರತಿಕ್ರಿಯಿಸುತ್ತಾರೆ. ಚೇತನಾ ರಾಜ್​ ನಿಧನದ ವಿಚಾರ ಅವರನ್ನು ಬಹುವಾಗಿ ಕಾಡಿದೆ.

Ramya Divya Spandana: ಚೇತನಾ ರಾಜ್​ ನಿಧನದ ಬಗ್ಗೆ ರಮ್ಯಾ ಪ್ರತಿಕ್ರಿಯೆ; ಚಿತ್ರರಂಗದ ಕಹಿ ಸತ್ಯದ ಕುರಿತು ಮೌನ ಮುರಿದ ನಟಿ
ಚೇತನಾ ರಾಜ್​, ರಮ್ಯಾ
Follow us
TV9 Web
| Updated By: ಮದನ್​ ಕುಮಾರ್​

Updated on:May 18, 2022 | 9:30 AM

ಚಿತ್ರರಂಗದಲ್ಲಿ ಮಿಂಚಬೇಕು ಎಂದು ಕನಸು ಕಂಡಿದ್ದ 22ರ ಪ್ರಾಯದ ನಟಿ ಚೇತನಾ ರಾಜ್ (Chetana Raj) ಅವರು ನಿಧನರಾಗಿದ್ದು ನೋವಿನ ಸಂಗತಿ. ಮೇ 17ರಂದು ಅವರು ಫ್ಯಾಟ್​ ಸರ್ಜರಿ ವೈಫಲ್ಯದಿಂದ ಕೊನೆಯುಸಿರೆಳೆದರು. ಈ ಘಟನೆ ಕುರಿತು ನಟಿ ರಮ್ಯಾ (Ramya Divya Spandana) ಅವರು ಪ್ರತಿಕ್ರಿಯೆ ನೀಡಿದ್ದಾರೆ. ಚಿತ್ರರಂಗದಲ್ಲಿ ಸೌಂದರ್ಯದ ಕುರಿತಂತೆ ನಟಿಯರ ಮೇಲೆ ಯಾವ ರೀತಿ ಒತ್ತಡ ಹೇರಲಾಗುತ್ತದೆ ಎಂಬುದನ್ನು ಅವರು ವಿವರಿಸಿದ್ದಾರೆ. ಅಲ್ಲದೇ, ಈ ರೀತಿಯ ಒತ್ತಡಗಳನ್ನು ತೆಗೆದುಹಾಕಬೇಕು ಎಂದು ರಮ್ಯಾ ಹೇಳಿದ್ದಾರೆ. ಒಟ್ಟಾರೆ ಘಟನೆಯ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ರಮ್ಯಾ ಹೇಳಿದ ಮಾತಿಗೆ ಅನೇಕರು ಸಹಮತ ಸೂಚಿಸಿದ್ದಾರೆ. ಅವರು ಕನ್ನಡದಲ್ಲಿ ಟ್ವೀಟ್​ ಮಾಡಿಲ್ಲ ಎಂದು ಕೆಲವರು ತಕರಾರು ತೆಗೆದಿದ್ದಾರೆ. ಅದೇನೇ ಇರಲಿ, ಒಂದು ಮುಖ್ಯ ವಿಚಾರದ ಬಗ್ಗೆ ರಮ್ಯಾ (Ramya) ಧ್ವನಿ ಎತ್ತಿರುವುದು ಚರ್ಚೆಗೆ ಕಾರಣ ಆಗಿರುವುದಂತೂ ನಿಜ. ನಟನೆಯಿಂದ ದೂರ ಉಳಿದುಕೊಂಡಿದ್ದರೂ ಕೂಡ ಅವರು ಚಿತ್ರರಂಗದ ಆಗುಹೋಗುಗಳನ್ನು ಗಮನಿಸುತ್ತಾ ಇರುತ್ತಾರೆ. ಈಗ ಚೇತನಾ ರಾಜ್​ ಸಾವಿಗೆ ಮರುಕ ವ್ಯಕ್ತಪಡಿಸುವುದರ ಜೊತೆಯಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿರುವ ರಮ್ಯಾ ಅವರು ಹಲವು ವಿಷಯಗಳ ಕುರಿತು ಪ್ರತಿಕ್ರಿಯಿಸುತ್ತಾರೆ. ಚೇತನಾ ರಾಜ್​ ನಿಧನದ ವಿಚಾರ ಅವರನ್ನು ಬಹುವಾಗಿ ಕಾಡಿದೆ. ‘ಪ್ಲಾಸ್ಟಿಕ್​ ಸರ್ಜರಿ ಬಳಿಕ ಮೃತರಾದ ಯುವ ನಟಿಯ ಬಗ್ಗೆ ಸುದ್ದಿ ಓದಿ ತಿಳಿದುಕೊಂಡೆ. ಮಹಿಳೆಯರ ಮೇಲೆ ಅಸಹಜವಾದ ಬ್ಯೂಟಿ ಸ್ಟ್ಯಾಂಡರ್ಡ್​ಗಳನ್ನು ಹೇರಲಾಗುತ್ತದೆ. ಯಾವ ರೀತಿ ಕಾಣಬೇಕು ಎಂಬ ಬಗ್ಗೆ ಮಹಿಳೆಯರ ಮೇಲೆ ತೀವ್ರ ಒತ್ತಡ ಇದೆ. 2018ರಲ್ಲಿ ಕಾಲಿನ ಟ್ಯೂಮರ್​ ರಿಮೂವಲ್​ ಬಳಿಕ ನಾನು ಕೂಡ ದೇಹದ ತೂಕದ ಸಮಸ್ಯೆಯಿಂದ ಕಷ್ಟ ಅನುಭವಿಸಿದೆ. ನಾನು ನನ್ನದೇ ಆದಂತಹ ಮಾರ್ಗದ ಮೂಲಕ ತೂಕ ಕಡಿಮೆ ಮಾಡಿಕೊಂಡೆ. ಅನೇಕ ಶೀಘ್ರ ಪರಿಹಾರಗಳಿಗೆ ಆಕರ್ಷಿತರಾಗುವುದು ಸುಲಭ’ ಎಂದು ರಮ್ಯಾ ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ
Image
ನಟಿ ಚೇತನಾ ರಾಜ್ ಅಂತ್ಯಕ್ರಿಯೆ: ಮುಗಿಲುಮುಟ್ಟಿದ ಕುಟುಂಬದವರ ಆಕ್ರಂದನ
Image
ಚೇತನಾ ನಮ್ಮ ಮಾತು ಕೇಳುತ್ತಿರಲಿಲ್ಲ, ಫ್ರೆಂಡ್ಸ್ ಮಾತುಗಳೇ ಅವಳಿಗೆ ಮುಖ್ಯವಾಗಿತ್ತು: ಚೇತನಾ ರಾಜ್ ಅಜ್ಜಿ
Image
ಫ್ಯಾಟ್​ ಸರ್ಜರಿ ವೈಫಲ್ಯದಿಂದ ನಟಿ ಚೇತನಾ ರಾಜ್​ ನಿಧನ: ಪುತ್ರಿಯ ನೆನೆದು ಬಿಕ್ಕಿ ಬಿಕ್ಕಿ ಅತ್ತ ಅಪ್ಪ-ಅಮ್ಮ
Image
ನಟಿ ಚೇತನಾ ರಾಜ್​ ನಿಧನ: ‘ತಾಳ್ಮೆ ಇಲ್ಲದವರು ಈ ಕ್ಷೇತ್ರಕ್ಕೆ ಬರಲೇಬೇಡಿ’; ರೂಪಿಕಾ ಕಿವಿಮಾತು

ಇದನ್ನೂ ಓದಿ: Chetana Raj Death: ಫ್ಯಾಟ್​ ಸರ್ಜರಿಗೆ ಚೇತನಾ ರಾಜ್​ ಕಟ್ಟಿದ್ದ ಹಣ ಎಷ್ಟು? ಸತ್ತ ಮೇಲೂ ಹೆಚ್ಚಿತು ಆಸ್ಪತ್ರೆ ಬಿಲ್​

‘ಪುರುಷರಿಗೆ ಈ ಬ್ಯೂಟಿ ಸ್ಟ್ಯಾಂಡರ್ಡ್​​ ಅನ್ವಯ ಆಗಲ್ಲ. (ಯಾರಿಗೂ ಕೂಡ ಅನ್ವಯ ಆಗಬಾರದು). ಡೊಳ್ಳುಹೊಟ್ಟೆ ಇಟ್ಟುಕೊಂಡು, ತಲೆಗೆ ವಿಗ್​ ಹಾಕಿಕೊಂಡಿರುವ 65 ವರ್ಷ ವಯಸ್ಸಿನ ನಟನನ್ನು ಈಗಲೂ ಹೀರೋ ಅಂತ ಪರಿಗಣಿಸಲಾಗುತ್ತದೆ. ಆದರೆ ಮಹಿಳೆಯ ವಿಚಾರದಲ್ಲಿ ಹಾಗಿಲ್ಲ. ಆಕೆಯ ದೇಹದ ತೂಕ ಸ್ವಲ್ಪ ಹೆಚ್ಚಿದರೂ ಕೂಡ ಅವಳನ್ನು ಆಂಟಿ, ಅಜ್ಜಿ ಅಂತ ಟ್ರೋಲ್​ ಮಾಡಲಾಗುತ್ತದೆ. ಮಹಿಳೆಯರು ಹೇಗಿರಬೇಕು ಎಂಬುದನ್ನು ಜಗತ್ತು ಹೇಳುವುದು ಬೇಡ. ಚಿತ್ರರಂಗ ಬದಲಾಗಬೇಕಿರುವ ಕಾಲ ಇದು. ಸಂಭಾವನೆ ತಾರತಮ್ಯ, ಬ್ಯೂಟಿ ಸ್ಟ್ಯಾಂಡರ್ಡ್​, ಪಾತ್ರಗಳ ತಾರತಮ್ಯದ ವಿರುದ್ಧ ಮಹಿಳೆಯರು ಮತ್ತು ಪುರುಷರು ಒಟ್ಟಾಗಿ ಹೋರಾಡಬೇಕು’ ಎಂದು ರಮ್ಯಾ ಟ್ವೀಟ್​ ಮಾಡಿದ್ದಾರೆ.

ಚೇತನಾ ರಾಜ್ ಸಾವಿನ ಕುರಿತು ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಆರಂಭ ಆಗಿದೆ. ಮೇ 17ರ ಸಂಜೆ ಅವರ ಅಂತ್ಯಕ್ರಿಯೆ ನೆರವೇರಿದೆ. ನಿಜಕ್ಕೂ ಚೇತನಾ ರಾಜ್​ ಸಾವಿಗೆ ಕಾರಣವಾಗಿದ್ದು ಏನು? ವೈದ್ಯರು ಎಡವಿದ್ದು ಎಲ್ಲಿ ಎಂಬ ಪ್ರಶ್ನೆಗೆ ಉತ್ತರ ಇನ್ನಷ್ಟೇ ತಿಳಿದುಬರಬೇಕಿದೆ. ಎಂ.ಎಸ್​. ರಾಮಯ್ಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಅದರ ವರದಿಗಾಗಿ ನಿರೀಕ್ಷಿಸಲಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:22 am, Wed, 18 May 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ