Kantara Movie: ‘ಕಾಂತಾರ ಚಿತ್ರದ ಕ್ಲೈಮ್ಯಾಕ್ಸ್ ಅದ್ಭುತ’; ರಿಷಬ್ ಸಿನಿಮಾಗೆ ಪ್ರಭಾಸ್​ ಹೊಗಳಿಕೆ

‘ಕೆಜಿಎಫ್’, ‘ಕೆಜಿಎಫ್​ 2’, ‘ಯುವರತ್ನ’ ಮುಂತಾದ ಹಿಟ್ ಚಿತ್ರಗಳನ್ನು ನಿರ್ಮಿಸಿರುವ ‘ಹೊಂಬಾಳೆ ಫಿಲ್ಮ್ಸ್​​’ನ ವಿಜಯ್ ಕಿರಗಂದೂರು ಅವರು ‘ಕಾಂತಾರ’ ಚಿತ್ರವನ್ನು ನಿರ್ಮಿಸಿದ್ದಾರೆ.

Kantara Movie: ‘ಕಾಂತಾರ ಚಿತ್ರದ ಕ್ಲೈಮ್ಯಾಕ್ಸ್ ಅದ್ಭುತ’; ರಿಷಬ್ ಸಿನಿಮಾಗೆ ಪ್ರಭಾಸ್​ ಹೊಗಳಿಕೆ
ರಿಷಬ್-ಪ್ರಭಾಸ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Oct 01, 2022 | 2:40 PM

ಟಾಲಿವುಡ್ (Tollywood News) ನಟ ಪ್ರಭಾಸ್ ಅವರು ಹಲವು ಸಿನಿಮಾಗಳಿಗೆ ಬೆಂಬಲ ಸೂಚಿಸಿದ ಉದಾಹರಣೆ ಇದೆ. ‘ಕೆಜಿಎಫ್ 2’ (KGF chapter 2) ಚಿತ್ರವನ್ನು ನೋಡಿ ಅವರು ಮೆಚ್ಚಿಕೊಂಡಿದ್ದರು. ಈಗ ರಿಷಬ್​ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಚಿತ್ರವನ್ನು ಪ್ರಭಾಸ್ ಹೊಗಳಿದ್ದಾರೆ. ‘ಕಾಂತಾರ’ ಚಿತ್ರದ ಕ್ಲೈಮ್ಯಾಕ್ಸ್ ಬಗ್ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರಭಾಸ್​​ಗೂ ಸಿನಿಮಾದ ಕ್ಲೈಮ್ಯಾಕ್ಸ್ ಹಿಡಿಸಿದೆ. ಈ ಬಗ್ಗೆ ಇನ್​​ಸ್ಟಾಗ್ರಾಮ್​​ನಲ್ಲಿ ಬರೆದುಕೊಂಡಿದ್ದಾರೆ. ಇದರಿಂದ ಸಿನಿಮಾಗೆ ಮತ್ತಷ್ಟು ಬೂಸ್ಟ್ ಸಿಕ್ಕಂತೆ ಆಗಿದೆ.

ರಿಷಬ್ ಶೆಟ್ಟಿ ನಟನೆ ಹಾಗೂ ನಿರ್ದೇಶನ ಎರಡರಲ್ಲೂ ಭೇಷ್ ಎನಿಸಿಕೊಂಡಿದ್ದಾರೆ. ಅವರ ನಿರ್ದೇಶನದ ‘ಕಿರಿಕ್ ಪಾರ್ಟಿ’, ‘ಸ.ಹಿ.ಪ್ರಾ. ಶಾಲೆ ಕಾಸರಗೋಡು’ ಚಿತ್ರಗಳು ಸೂಪರ್ ಹಿಟ್ ಆಗಿವೆ. ಈಗ ಆ ಸಾಲಿಗೆ ‘ಕಾಂತಾರ’ ಕೂಡ ಸೇರ್ಪಡೆ ಆಗಿದೆ. ಓರ್ವ ನಟನಾಗಿಯೂ ರಿಷಬ್ ಸಾಕಷ್ಟು ಇಷ್ಟವಾಗಿದ್ದಾರೆ. ಪ್ರಭಾಸ್​ಗೂ ಈ ಚಿತ್ರ ರುಚಿಸಿದೆ.

ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಪ್ರಭಾಸ್, ‘ಕಾಂತಾರ ಚಿತ್ರ ನೋಡಿ ಬಹಳ ಎಂಜಾಯ್ ಮಾಡಿದೆ. ಅದರಲ್ಲೂ ಕ್ಲೈಮ್ಯಾಕ್ಸ್ ಅದ್ಭುತವಾಗಿತ್ತು. ಇಂಥದ್ದೊಂದು ಚಿತ್ರವನ್ನು ಕಟ್ಟಿಕೊಟ್ಟ ಚಿತ್ರತಂಡಕ್ಕೆ ಶುಭವಾಗಲಿ ಮತ್ತು ಚಿತ್ರ ದೊಡ್ಡ ಯಶಸ್ಸು ಗಳಿಸಲಿ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
Kantara: ರಿಷಬ್​ ಶೆಟ್ಟಿ ಕಂಬಳದ ಕೋಣ ಓಡಿಸುವುದು ಕಲಿತಿದ್ದು ಹೇಗೆ? ಇಲ್ಲಿದೆ ಮೇಕಿಂಗ್​ ವಿಡಿಯೋ
Image
Kantara: ‘ಕಾಂತಾರ’ ಚಿತ್ರಕ್ಕೆ ಪುನೀತ್​ ಹೀರೋ ಆಗ್ಬೇಕಿತ್ತು; ಆ ಸ್ಥಾನಕ್ಕೆ ರಿಷಬ್ ಶೆಟ್ಟಿ ಬಂದಿದ್ದು ಹೇಗೆ? ಇಲ್ಲಿದೆ ಉತ್ತರ
Image
‘ಸಿಂಗಾರ ಸಿರಿಯೆ..’ ಹಾಡಿಗೆ ತಲೆದೂಗಿದ ಪ್ರೇಕ್ಷಕರು; ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಚಿತ್ರಕ್ಕೆ ಸಿಕ್ತು ಮೈಲೇಜ್
Image
Rishab Shetty: ರಿಷಬ್​ ಶೆಟ್ಟಿ-ಪ್ರಗತಿ ಫ್ಯಾಮಿಲಿಯ ಸುಂದರ ಫೋಟೋ ಗ್ಯಾಲರಿ; ರಣ್ವಿತ್​ ಕ್ಯೂಟ್​ ನಗುವಿಗೆ ಎಲ್ಲರೂ ಫಿದಾ

‘ಕೆಜಿಎಫ್’, ‘ಕೆಜಿಎಫ್​ 2’, ‘ಯುವರತ್ನ’ ಮುಂತಾದ ಹಿಟ್ ಚಿತ್ರಗಳನ್ನು ನಿರ್ಮಿಸಿರುವ ‘ಹೊಂಬಾಳೆ ಫಿಲ್ಮ್ಸ್​​’ನ ವಿಜಯ್ ಕಿರಗಂದೂರು ಅವರು ‘ಕಾಂತಾರ’ ಚಿತ್ರವನ್ನು ನಿರ್ಮಿಸಿದ್ದಾರೆ. ಸಿನಿಮಾ ಅದ್ದೂರಿಯಾಗಿ ಮೂಡಿ ಬರಬೇಕು ಎಂಬ ಕಾರಣಕ್ಕೆ ಅವರು ಎಲ್ಲಿಯೂ ರಾಜಿ ಮಾಡಿಕೊಂಡಿಲ್ಲ. ಹೀಗಾಗಿ ಸಿನಿಮಾ ಅದ್ದೂರಿಯಾಗಿ ಮೂಡಿ ಬಂದಿದೆ. ಇದೇ ಬ್ಯಾನರ್​ನ ಅಡಿಯಲ್ಲಿ ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ಕೂಡ ನಿರ್ಮಾಣ ಆಗುತ್ತಿದೆ. ಈ ಕಾರಣಕ್ಕೆ ಪ್ರಭಾಸ್​​ಗೆ ವಿಶೇಷ ಶೋ ಏರ್ಪಡಿಸಲಾಗಿತ್ತು ಎನ್ನಲಾಗಿದೆ. ‘ಸಲಾರ್​’ಗೆ ಪ್ರಶಾಂತ್ ನೀಲ್ ಅವರು ನಿರ್ದೇಶನ ಮಾಡುತ್ತಿದ್ದಾರೆ.

ಪ್ರಭಾಸ್ ಮಾತ್ರವಲ್ಲದೆ ಕನ್ನಡದ ಅನೇಕರು ‘ಕಾಂತಾರ’ ಚಿತ್ರವನ್ನು ಹೊಗಳಿದ್ದಾರೆ. ನಟಿ ರಮ್ಯಾ, ರಕ್ಷಿತ್ ಶೆಟ್ಟಿ, ಸೇರಿದಂತೆ ಹಲವಾರು ಸೆಲೆಬ್ರಿಟಿಗಳು ಈ ಚಿತ್ರದ ಪ್ರೀಮಿಯರ್ ವೀಕ್ಷಿಸಿದ್ದು, ಮೆಚ್ಚುಗೆ ಸೂಚಿಸಿದ್ದಾರೆ. ಕರಾವಳಿ ಭಾಗದ ವಿಶಿಷ್ಟ ಆಚರಣೆ, ಸಂಸ್ಕೃತಿಗಳನ್ನು ಈ ಸಿನಿಮಾ ಒಳಗೊಂಡಿದೆ.  ಮನುಷ್ಯ ಹಾಗೂ ಪ್ರಕೃತಿಯ ನಡುವಿನ ಸಂಘರ್ಷದ ಕಥೆ ಕೂಡ ಈ ಸಿನಿಮಾದಲ್ಲಿದೆ.

ಇದನ್ನೂ ಓದಿ: ‘ಅಲ್ಟಿಮೇಟ್​, ಸೂಪರ್, ಬೆಂಕಿ ಫಿಲ್ಮ್​’; ‘ಕಾಂತಾರ’ ನೋಡಿದವರ ಫಸ್ಟ್ ರಿಯಾಕ್ಷನ್

ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಮತ್ತು ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ.

Published On - 2:33 pm, Sat, 1 October 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ