ಪುನೀತ್​ ಅಭಿನಯದ ‘ಜೇಮ್ಸ್’ ಟೀಸರ್​ ನೋಡಿ ವಿಶೇಷ ಸಾಲುಗಳನ್ನು ಬರೆದುಕೊಂಡ ನಟ ಪ್ರಭಾಸ್

ಅಲ್ಲು ಅರ್ಜುನ್​, ರಾಮ್​ ಚರಣ್​ ಸೇರಿ ಅನೇಕರು ಪುನೀತ್​ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದರು. ಸೋಶಿಯಲ್​ ಮೀಡಿಯಾದಲ್ಲೂ ಸಾಕಷ್ಟು ನಟರು ಶ್ರದ್ಧಾಂಜಲಿ ಅರ್ಪಿಸಿದ್ದರು. ಈಗ ಪ್ರಭಾಸ್​ ಅವರು ಪುನೀತ್​ ಅವರನ್ನು ನೆನಪಿಸಿಕೊಂಡಿದ್ದಾರೆ.

ಪುನೀತ್​ ಅಭಿನಯದ ‘ಜೇಮ್ಸ್’ ಟೀಸರ್​ ನೋಡಿ ವಿಶೇಷ ಸಾಲುಗಳನ್ನು ಬರೆದುಕೊಂಡ ನಟ ಪ್ರಭಾಸ್
ಪ್ರಭಾಸ್​-ಪುನೀತ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Feb 12, 2022 | 3:16 PM

ಪುನೀತ್​ ರಾಜ್​ಕುಮಾರ್ (Puneeth Rajkumar)​ ಹೀರೋ ಆಗಿ ನಟಿಸಿರುವ ಕೊನೆಯ ಸಿನಿಮಾ ‘ಜೇಮ್ಸ್​’ (James Movie). ಚೇತನ್​ ಕುಮಾರ್​ ನಿರ್ದೇಶನ ಮಾಡಿರುವ ಈ ಸಿನಿಮಾ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈ ಚಿತ್ರದ ಟೀಸರ್ ರಿಲೀಸ್​ ಆದ ಒಂದೇ ದಿನಕ್ಕೆ ಒಂದು ಕೋಟಿ ಜನರು ವೀಕ್ಷಿಸಿದ್ದಾರೆ. ಈ ವಿಚಾರ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಈ ಟೀಸರ್​ಅನ್ನು ಫ್ಯಾನ್ಸ್​ ಇಷ್ಟಪಟ್ಟಿದ್ದಾರೆ. ಕಮೆಂಟ್​ ಬಾಕ್ಸ್​ನಲ್ಲಿ ಅಪ್ಪು ಅವರನ್ನು ನೆನಪಿಸಿಕೊಂಡು ಅಭಿಮಾನಿಗಳು ಬೇಸರ ಹೊರಹಾಕುತ್ತಿದ್ದಾರೆ. ಪರ ಭಾಷೆಯಲ್ಲೂ ‘ಜೇಮ್ಸ್​’ ಚಿತ್ರದ ಟೀಸರ್​ಗೆ ಅದ್ಭುತ ರೆಸ್ಪಾನ್ಸ್​ ಬರುತ್ತಿದೆ. ಈ ಟೀಸರ್​ ಪರ ಭಾಷೆಯಲ್ಲೂ ಮಿಲಿಯನ್​ಗಟ್ಟಲೆ ವೀಕ್ಷಣೆ ಕಂಡಿರುವುದು ಇದಕ್ಕೆ ಸಾಕ್ಷಿ. ಪರಭಾಷೆಯ ಅನೇಕ ಸ್ಟಾರ್​ಗಳು ಪುನೀತ್​ ಅವರನ್ನು ನೆನಪಿಸಿಕೊಳ್ಳುತ್ತಿದ್ದಾರೆ. ತೆಲುಗಿನ ಖ್ಯಾತ ನಟ ಪ್ರಭಾಸ್ (Actor Prabhas)​ ಅವರು ‘ಜೇಮ್ಸ್​’ ಚಿತ್ರದ ಟೀಸರ್ ನೋಡಿ ಖುಷಿಪಟ್ಟಿದ್ದಾರೆ. ಅವರು ಅಪ್ಪು ಅವರನ್ನು ನೆನಪಿಸಿಕೊಂಡಿದ್ದಾರೆ.

ಬೇರೆ ಇಂಡಸ್ಟ್ರಿಯ ನಾಯಕರು ರಾಜ್​ಕುಮಾರ್​ ಕುಟುಂಬದ ಜತೆ ಒಳ್ಳೆಯ ಒಡನಾಟ ಹೊಂದಿದ್ದಾರೆ. ಪುನೀತ್​ ಅಂತಿಮ ದರ್ಶನ ಪಡೆಯಲು ಜ್ಯೂ.ಎನ್​ಟಿಆರ್​ ಸೇರಿ ಸಾಕಷ್ಟು ಸ್ಟಾರ್​ಗಳು ಆಗಮಿಸಿದ್ದರು. ಅಲ್ಲು ಅರ್ಜುನ್​, ರಾಮ್​ ಚರಣ್​ ಸೇರಿ ಅನೇಕರು ಪುನೀತ್​ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದರು. ಸೋಶಿಯಲ್​ ಮೀಡಿಯಾದಲ್ಲೂ ಸಾಕಷ್ಟು ನಟರು ಶ್ರದ್ಧಾಂಜಲಿ ಅರ್ಪಿಸಿದ್ದರು. ಈಗ ಪ್ರಭಾಸ್​ ಅವರು ಪುನೀತ್​ ಅವರನ್ನು ನೆನಪಿಸಿಕೊಂಡಿದ್ದಾರೆ.

‘ಜೇಮ್ಸ್​’ ಟೀಸರ್ ವಿಡಿಯೋ ಲಿಂಕ್ ಹಂಚಿಕೊಂಡಿರುವ ಪ್ರಭಾಸ್, ‘ಜೇಮ್ಸ್ ರೂಪದಲ್ಲಿ ನಾವು ಒಂದು ಮಾಸ್ಟರ್​ಪೀಸ್​​ಅನ್ನು ನೋಡಲಿದ್ದೇವೆ. ಪವರ್​ಸ್ಟಾರ್ ಪುನೀತ್ ರಾಜ್​ಕುಮಾರ್ ಸರ್ ಅವರನ್ನು ಮೆಚ್ಚುವ ಲಕ್ಷಾಂತರ ಜನರಿಗೆ ಈ ಚಿತ್ರ ಯಾವಾಗಲೂ ವಿಶೇಷವಾಗಿರುತ್ತದೆ. ವಿ ಮಿಸ್​ ಯೂ’ ಎಂದು ಬರೆದುಕೊಂಡಿದ್ದಾರೆ ಪ್ರಭಾಸ್​.

‘ರಾಧೆ ಶ್ಯಾಮ್​’ ಚಿತ್ರದ ಪ್ರಚಾರದಲ್ಲಿ ಪ್ರಭಾಸ್​ ಬ್ಯುಸಿ ಇದ್ದಾರೆ. ರಾಧಾಕೃಷ್ಣ ಕುಮಾರ್​ ಅವರು ನಿರ್ದೇಶನ ಮಾಡಿದ್ದಾರೆ. ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ‘ರಾಧೆ ಶ್ಯಾಮ್​’ ತೆರೆಕಾಣಲಿದೆ. ರೊಮ್ಯಾಂಟಿಕ್​ ಲವ್​ ಸ್ಟೋರಿ ಹೊಂದಿರುವ ಈ ಸಿನಿಮಾ ಪ್ರಭಾಸ್​ ವೃತ್ತಿಜೀವನದ ಡಿಫರೆಂಟ್ ಚಿತ್ರ ಎನ್ನಲಾಗುತ್ತಿದೆ. ಪ್ರಭಾಸ್​ಗೆ ಜತೆಯಾಗಿ ಪೂಜಾ ಹೆಗ್ಡೆ ಕಾಣಿಸಿಕೊಂಡಿದ್ದಾರೆ.

ಪುನೀತ್ ‘ಜೇಮ್ಸ್​’ ಸಿನಿಮಾದ ಡಬ್ಬಿಂಗ್​ ಕೆಲಸ ಮಾಡಿರಲಿಲ್ಲ. ಹೀಗಾಗಿ, ಈ ಕೆಲಸವನ್ನು ಅವರ ಸಹೋದರ ಶಿವರಾಜ್​ಕುಮಾರ್ ಮಾಡಿದ್ದಾರೆ. ‘ನನಗೆ ರೆಕಾರ್ಡ್​ ಬ್ರೇಕ್​ ಮಾಡಿಯೇ’ ಅಭ್ಯಾಸ ಎನ್ನುವ ಡೈಲಾಗ್​ ಪ್ರೇಕ್ಷಕರಿಗೆ ಖುಷಿ ನೀಡಿದೆ. ಇಂತಹ ಹಲವು ಡೈಲಾಗ್​ಗಳು ಸಿನಿಮಾದಲ್ಲಿದೆ ಎನ್ನಲಾಗಿದೆ. ಈ ಡೈಲಾಗ್​ಗಳಿಗೆ ಚಿತ್ರಮಂದಿರಗಳಲ್ಲಿ ಸಿಳ್ಳೆ ಬೀಳೋದು ಪಕ್ಕಾ. ಟೀಸರ್​ನಲ್ಲಿ ಚಿತ್ರದ ರಿಲೀಸ್​ ದಿನಾಂಕವನ್ನೂ ಉಲ್ಲೇಖ ಮಾಡಲಾಗಿದೆ. ಮಾರ್ಚ್​ 17ರಂದು ಈ ಸಿನಿಮಾ ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ.

ಇದನ್ನೂ ಓದಿ: ‘ಪುನೀತ್​ ಸರ್ ಫೋಟೋ ಹಾಕಿಲ್ಲ, ತುಂಬ ಬೇಜಾರಾಯ್ತು’: ತಮ್ಮದೇ ಚಿತ್ರತಂಡದ ವಿರುದ್ಧ ವಿನೋದ್​ ಪ್ರಭಾಕರ್​ ಗರಂ

ಹೊಸ ಬಿಡುಗಡೆ ದಿನಾಂಕ ಘೋಷಿಸಿದ ರಾಧೆ ಶ್ಯಾಮ್ ಚಿತ್ರ ತಂಡ; ಪ್ರಭಾಸ್ ಅಭಿಮಾನಿಗಳು ಫುಲ್ ಖುಷ್

Published On - 3:14 pm, Sat, 12 February 22

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ