Raghavendra Rajkumar ನಟ ರಾಘವೇಂದ್ರ ರಾಜ್​ಕುಮಾರ್​ ಆಸ್ಪತ್ರೆಗೆ ದಾಖಲು

Raghavendra Rajkumar health update: ನಟ ರಾಘವೇಂದ್ರ ರಾಜ್​ಕುಮಾರ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಯಶವಂತಪುರದಲ್ಲಿರುವ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ರಾಘಣ್ಣರನ್ನು ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Raghavendra Rajkumar ನಟ ರಾಘವೇಂದ್ರ ರಾಜ್​ಕುಮಾರ್​ ಆಸ್ಪತ್ರೆಗೆ ದಾಖಲು
ರಾಘವೇಂದ್ರ ರಾಜ್​ಕುಮಾರ್
Follow us
KUSHAL V
|

Updated on:Feb 16, 2021 | 8:28 PM

ಬೆಂಗಳೂರು: ನಟ ರಾಘವೇಂದ್ರ ರಾಜ್​ಕುಮಾರ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಯಶವಂತಪುರದಲ್ಲಿರುವ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ರಾಘಣ್ಣರನ್ನು ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ರಾಘವೇಂದ್ರ ರಾಜ್​ಕುಮಾರ್​ ಸಂಜೆ 6 ಗಂಟೆಗೆ ಆರೋಗ್ಯ ತಪಾಸಣೆಗೆಂದು ಆಸ್ಪತ್ರೆಗೆ ಬಂದಿದ್ದರು. ಈ ವೇಳೆ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯದ ಮಾಹಿತಿ ಪ್ರಕಾರ ರಾಘಣ್ಣರಿಗೆ ಯಾವುದೇ ಗಂಭೀರ ಸಮಸ್ಯೆಯಿಲ್ಲ ಎಂದು ಹೇಳಲಾಗಿದೆ.

ಆದ್ರೆ ತಡರಾತ್ರಿ ಅಥವಾ ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗುವ ಸಾಧ್ಯತೆಯಿದೆ. ಈ ನಡುವೆ, ಆಸ್ಪತ್ರೆಗೆ ಭೇಟಿ ನೀಡಿ ನಟ ಶಿವಣ್ಣ ಸಹೋದರನ ಆರೋಗ್ಯ ವಿಚಾರಿಸಿದರು.

ಅಂದ ಹಾಗೆ, ರಾಘಣ್ಣ ಮೊದಲು ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಬೆಳಗ್ಗೆಯಿಂದ ಶೂಟಿಂಗ್​ನಲ್ಲಿ ಬ್ಯುಸಿಯಾಗಿದ್ದ ಹಿನ್ನೆಲೆಯಲ್ಲಿ ರಾಘಣ್ಣ ಸಾಯಂಕಾಲ ಆಸ್ಪತ್ರೆಗೆ ತೆರಳಿದ್ದರು.

ಈ ವೇಳೆ, ಇಂದು ಶೂಟಿಂಗ್​ನಲ್ಲಿ ಭಾಗಿಯಾಗಿದ್ದ ರಾಘವೇಂದ್ರ ರಾಜ್​ಕುಮಾರ್ ಸಂಜೆ 4.30 ಕ್ಕೆ ಆಸ್ಪತ್ರಗೆ ಹೋಗ್ತಿನಿ ಅಂತಾ ಹೋಗಿದ್ರು. ಆದರೆ, ಬೆಳಗ್ಗೆಯಿಂದ ಆರಾಮಾಗಿದ್ರು ಎಂದು ಟಿವಿ9ಗೆ ಬೆಳಕು ಸಿನಿಮಾ ನಿರ್ದೇಶಕ ಮಂಜುನಾಥ್ ಮಾಹಿತಿ ನೀಡಿದ್ದಾರೆ.

ನಟ ಇಂದು ಬೆಳಕು ಚಿತ್ರದ ಶೂಟಿಂಗ್​ನಲ್ಲಿ ಭಾಗಿಯಾಗಿದ್ದರು. ಶೂಟಿಂಗ್ ನಡುವೆ ಮಾಧ್ಯಮಗಳೊಂದಿಗೂ ಮಾತನಾಡಿದ್ರು. ಆದರೆ, ಸಾಯಂಕಾಲ ಸ್ವಲ್ಪ ಎದೆ ನೋವು ಕಾಣಿಸಿಕೊಂಡಿತ್ತು, ಕೊಂಚ ಬೆವರುತ್ತಿದ್ರು. ಹಾಗಾಗಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಈ ವೇಳೆ, ಶಿವ ರಾಜ್​ಕುಮಾರ್ ಮತ್ತು ಪುನೀತ್ ರಾಜ್​ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಸದ್ಯ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಇನ್ಮುಂದೆ ಒಟಿಟಿಗೂ ಬರಲಿದೆ ಕಟ್ಟುಪಾಡು: ಕೇಂದ್ರದ ಮಹತ್ವದ ಘೋಷಣೆ

Published On - 8:02 pm, Tue, 16 February 21