ಸರಿಗಮ ವಿಜಿ ಆರೋಗ್ಯ ಹೇಗಿದೆ? ಭೇಟಿಯಾದವರು ನೀಡಿದ್ದಾರೆ ಮಾಹಿತಿ

Sarigama Viji health update: ಕನ್ನಡ ಚಿತ್ರರಂಗದ ಜನಪ್ರಿಯ ಹಿರಿಯ ನಟ ಸರಿಗಮ ವಿಜಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಕೆಲ ದಿನಗಳಿಂದಲೂ ಆಸ್ಪತ್ರೆಯಲ್ಲಿದ್ದಾರೆ. ಆಸ್ಪತ್ರೆಯಲ್ಲಿ ಅವರನ್ನು ಭೇಟಿ ಮಾಡಿರುವ ಅವರ ಆಪ್ತರು ಕೆಲವರು ಟಿವಿ9 ಜೊತೆ ಮಾತನಾಡಿದ್ದು, ವಿಜಿ ಅವರ ಆರೋಗ್ಯ ಈಗ ಹೇಗಿದೆ ಎಂಬ ಮಾಹಿತಿ ಹಂಚಿಕೊಂಡಿದ್ದಾರೆ.

ಸರಿಗಮ ವಿಜಿ ಆರೋಗ್ಯ ಹೇಗಿದೆ? ಭೇಟಿಯಾದವರು ನೀಡಿದ್ದಾರೆ ಮಾಹಿತಿ
Viji (1)
Follow us
ಮಂಜುನಾಥ ಸಿ.
|

Updated on: Jan 13, 2025 | 12:46 PM

ಕನ್ನಡ ಚಿತ್ರರಂಗ ಮತ್ತು ಟಿವಿ ಲೋಕದ ಜನಪ್ರಿಯ ನಟ ಸರಿಗಮ ವಿಜಿ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ವಿಜಿ ಅವರ ಆರೋಗ್ಯ ಕ್ಷೀಣಿಸುತ್ತಿದೆ ಎಂಬ ಸುದ್ದಿ ಹರಿದಾಡುತ್ತಿತ್ತು. ಇದೀಗ ವಿಜಿ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಚಿತ್ರರಂಗದ ಪ್ರಮುಖರು ಅವರ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ನರಸಿಂಹರಾಜು ಅವರ ಪುತ್ರಿ ಸುಧಾ ನರಸಿಂಹರಾಜು ಹಾಗೂ ಇನ್ನೂ ಕೆಲವರು ಆಸ್ಪತ್ರೆಗೆ ಹೋಗಿ ಸರಿಗಮ ವಿಜಿ ಅವರನ್ನು ಭೇಟಿಯಾಗಿದ್ದು, ಅವರ ಆರೋಗ್ಯದ ಬಗ್ಗೆ ಟಿವಿ9 ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ.

ಸುಧಾ ನರಸಿಂಹರಾಜು ಅವರು ಹೇಳಿರುವಂತೆ, ವಿಜಿ ಅವರ ಆರೋಗ್ಯ ಸುಧಾರಿಸುತ್ತಿದೆ. ತಾವು ಭೇಟಿ ನೀಡಿ ಮಾತನಾಡಿಸಿದಾಗ ಮಾತುಗಳಿಗೆ ಸ್ಪಂದಿಸಿದರು ಎಂದಿದ್ದಾರೆ. ‘ನಾವು ಭೇಟಿ ನೀಡಿದಾಗ ಕೆಲ ಸಮಯ ನಮ್ಮೊಟ್ಟಿಗೆ ಮಾತನಾಡಿದರು. ನೀರು ಕುಡಿದರು. ನಮ್ಮ ಮಾತುಗಳಿಗೆ ತಲೆ ಆಡಿಸಿ ಉತ್ತರಗಳನ್ನು ನೀಡಿದರು. ಅವರ ಆರೋಗ್ಯ ಚೇತರಿಕೆ ಆಗುತ್ತಿದೆ. ಅನವಶ್ಯಕವಾಗಿ ಯಾರೂ ಸುಳ್ಳು ಸುದ್ದಿಗಳನ್ನು ಹಬ್ಬಿಸುವುದು ಬೇಡ. ಸುದ್ದಿಗಳನ್ನು ಕೇಳಿ ನಾವು ಆತಂಕಗೊಂಡಿದ್ದೆವು ಹಾಗಾಗಿ ನಾವು ಆಸ್ಪತ್ರೆಗೆ ಹೋಗಿದ್ದೆವು ಆದರೆ ವಿಜಿ ಅವರ ಆರೋಗ್ಯ ಸುಧಾರಣೆ ಆಗುತ್ತಿದೆ’ ಎಂದಿದ್ದಾರೆ.

ವಿಜಿ ಅವರನ್ನು ಭೇಟಿಯಾಗಿರುವ ಅವರ ಆಪ್ತರೊಬ್ಬರು ಮಾತನಾಡಿ, ‘ಇಂದಷ್ಟೆ ಅವರನ್ನು ಭೇಟಿ ಮಾಡಿದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ದಿನೇ ದಿನೇ ಉತ್ತಮಗೊಳ್ಳುತ್ತಿದ್ದಾರೆ ಎಂದು ವೈದ್ಯರು ಸಹ ಹೇಳಿದ್ದಾರೆ. ನಾನು ಮಾತನಾಡಿಸಿದಾಗ ಮಾತನಾಡುವ ಪ್ರಯತ್ನ ಮಾಡಿದರು. ತಲೆ ಆಡಿಸಿ ಉತ್ತರಗಳನ್ನು ನೀಡಿದರು. ದೇವರ ದಯದಿಂದ ಅವರು ಆದಷ್ಟು ಬೇಗ ಗುಣಮುಖರಾಗಿ ಬರಲಿದ್ದಾರೆ’ ಎಂದಿದ್ದಾರೆ. ‘ಕೆಲವರು ಅವರ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ, ಯಾರೂ ಸಹ ಅವುಗಳನ್ನು ನಂಬುವುದು ಬೇಡ’ ಎಂದು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ದರ್ಶನ್ ಚಿತ್ರವೊಂದಕ್ಕೆ ₹ 22 ಕೋಟಿ ಸಂಭಾವನೆ ಪಡೆಯುತ್ತಿರುವುದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ

ವಿಜಿ ಅವರು ಕನ್ನಡ ಚಿತ್ರರಂಗದ ಜನಪ್ರಿಯ ನಟರಾಗಿದ್ದು ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಶ್ವಾಸಕೋಶದಲ್ಲಿ ಸಮಸ್ಯೆ ಎದುರಾಗಿದೆ. ಕಫದ ಸಮಸ್ಯೆಯಿಂದ ಅವರು ಬಳಲುತ್ತಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾಶ್ಮೀರದಲ್ಲಿಂದು ಝಡ್​-ಮೋಡ್​ ಸುರಂಗ ಮಾರ್ಗ​ ಉದ್ಘಾಟಿಸಲಿದ್ದಾರೆ ಮೋದಿ
ಕಾಶ್ಮೀರದಲ್ಲಿಂದು ಝಡ್​-ಮೋಡ್​ ಸುರಂಗ ಮಾರ್ಗ​ ಉದ್ಘಾಟಿಸಲಿದ್ದಾರೆ ಮೋದಿ
ಚನ್ನಪಟ್ಟಣದದಲ್ಲಿ ನಿಖಿಲ್ ಸೋಲಿನಿಂದ ವಿಚಲಿತರಾಗಿರುವ ಜೆಡಿಎಸ್ ನಾಯಕರು
ಚನ್ನಪಟ್ಟಣದದಲ್ಲಿ ನಿಖಿಲ್ ಸೋಲಿನಿಂದ ವಿಚಲಿತರಾಗಿರುವ ಜೆಡಿಎಸ್ ನಾಯಕರು
ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು 7 ಮಂದಿಗೆ ಗಂಭೀರ ಗಾಯ
ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು 7 ಮಂದಿಗೆ ಗಂಭೀರ ಗಾಯ
ಮಿಡ್ ವೀಕ್ ಬಗ್ಗೆ ಘೋಷಣೆ ಮಾಡಿದ ಬಿಗ್ ಬಾಸ್; ರಜತ್​ಗೆ ಸ್ಕೆಚ್ ಇಟ್ಟ ಭವ್ಯಾ
ಮಿಡ್ ವೀಕ್ ಬಗ್ಗೆ ಘೋಷಣೆ ಮಾಡಿದ ಬಿಗ್ ಬಾಸ್; ರಜತ್​ಗೆ ಸ್ಕೆಚ್ ಇಟ್ಟ ಭವ್ಯಾ
ಬಸ್​ನಲ್ಲಿ ನಿವೃತ್ತ ಐಎಎಸ್ ಅಧಿಕಾರಿಯನ್ನು ಥಳಿಸಿದ ಬಸ್ ಕಂಡಕ್ಟರ್​
ಬಸ್​ನಲ್ಲಿ ನಿವೃತ್ತ ಐಎಎಸ್ ಅಧಿಕಾರಿಯನ್ನು ಥಳಿಸಿದ ಬಸ್ ಕಂಡಕ್ಟರ್​
ಬಿಗ್ ಶೋ ಬಿಗ್ಗೆಸ್ಟ್ ಸಿಕ್ಸ್: ರಾಕೆಟ್ ಸಿಕ್ಸ್ ಸಿಡಿಸಿದ ಮ್ಯಾಕ್ಸ್​ವೆಲ್
ಬಿಗ್ ಶೋ ಬಿಗ್ಗೆಸ್ಟ್ ಸಿಕ್ಸ್: ರಾಕೆಟ್ ಸಿಕ್ಸ್ ಸಿಡಿಸಿದ ಮ್ಯಾಕ್ಸ್​ವೆಲ್
Daily Devotional: ಹಣೆ ಬರಹ ಬದಲಿಸಲು ಸಾಧ್ಯವೆ? ಇಲ್ಲಿದೆ ಉತ್ತರ
Daily Devotional: ಹಣೆ ಬರಹ ಬದಲಿಸಲು ಸಾಧ್ಯವೆ? ಇಲ್ಲಿದೆ ಉತ್ತರ
ಇಂದು ಬನದ ಹುಣ್ಣಿಮೆ, ಈ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಇಂದು ಬನದ ಹುಣ್ಣಿಮೆ, ಈ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಜಗದೀಶ್ ಬೆಳ್ಯಪ್ಪ, ಎಂ ಶ್ರೀಕಾಂತ್​ಗೆ ಬೆಂಗಳೂರು ಪ್ರೆಸ್​ಕ್ಲಬ್​ ಪ್ರಶಸ್ತಿ
ಜಗದೀಶ್ ಬೆಳ್ಯಪ್ಪ, ಎಂ ಶ್ರೀಕಾಂತ್​ಗೆ ಬೆಂಗಳೂರು ಪ್ರೆಸ್​ಕ್ಲಬ್​ ಪ್ರಶಸ್ತಿ
ಹಸುಗಳ ಮಾಲೀಕರಿಗೆ ವೈಯಕ್ತಿಕ ಪರಿಹಾರ ಕೊಡುತ್ತೇನೆ ಎಂದ ಸಚಿವ ಜಮೀರ್
ಹಸುಗಳ ಮಾಲೀಕರಿಗೆ ವೈಯಕ್ತಿಕ ಪರಿಹಾರ ಕೊಡುತ್ತೇನೆ ಎಂದ ಸಚಿವ ಜಮೀರ್