Shivarajkumar: ನಂದಿನಿ ಉತ್ಪನ್ನಗಳ ರಾಯಭಾರಿ ಆದ ನಟ ಶಿವರಾಜ್​ಕುಮಾರ್

ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹಾಗೂ ಎಂಡಿ ಜಗದೀಶ್ ಶಿವರಾಜ್​ಕುಮಾರ್ ಬಳಿ ಈ ಬಗ್ಗೆ ಮನವಿ ಮಾಡಿದ್ದರು. ಶಿವರಾಜ್​ಕುಮಾರ್ ಅವರು ಈ ಮನವಿಗೆ ಸ್ಪಂದಿಸಿದ್ದಾರೆ.

Shivarajkumar: ನಂದಿನಿ ಉತ್ಪನ್ನಗಳ ರಾಯಭಾರಿ ಆದ ನಟ ಶಿವರಾಜ್​ಕುಮಾರ್
ಶಿವರಾಜ್​ಕುಮಾರ್
Follow us
Shivaraj
| Updated By: ರಾಜೇಶ್ ದುಗ್ಗುಮನೆ

Updated on: Aug 01, 2023 | 2:34 PM

ನಟ ಶಿವರಾಜ್​ಕುಮಾರ್ ಅವರು ನಂದಿನಿ ಉತ್ಪನ್ನಗಳ ರಾಯಭಾರಿ ಆಗಲು ಒಪ್ಪಿಗೆ ಸೂಚಿಸಿದ್ದಾರೆ. ಈ ವಿಚಾರವನ್ನು ಕೆಎಂಎಫ್​ ಅಧ್ಯಕ್ಷ ಭೀಮಾ ನಾಯ್ಕ್ ಅವರು ಖಚಿಪಡಿಸಿದ್ದಾರೆ. ಈ ವಿಚಾರ ಕೇಳಿ ಶಿವರಾಜ್​ಕುಮಾರ್ (Shivarajkumar) ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಶಿವರಾಜ್​ಕುಮಾರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಜನರಿಗೆ ಹೆಚ್ಚು ಇಷ್ಟವಾಗುತ್ತಾರೆ. ಈ ಕಾರಣಕ್ಕೆ ಅವರನ್ನು ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿ ಆಗಿ ಕರೆತರಲಾಗಿದೆ ಎಂದು ತಿಳಿದು ಬಂದಿದೆ. ಪುನೀತ್ ರಾಜ್​ಕುಮಾರ್ (Puneeth Rajkumar) ಅವರು ಈ ಮೊದಲು ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿ ಆಗಿದ್ದರು.

ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹಾಗೂ ಎಂಡಿ ಜಗದೀಶ್ ಶಿವರಾಜ್​ಕುಮಾರ್ ಬಳಿ ಈ ಬಗ್ಗೆ ಮನವಿ ಮಾಡಿದ್ದರು. ಶಿವರಾಜ್​ಕುಮಾರ್ ಅವರು ಈ ಮನವಿಗೆ ಸ್ಪಂದಿಸಿದ್ದಾರೆ. ನಂದಿನಿ ಉತ್ಪನ್ನಗಳ ಜಾಹೀರಾತಿನಲ್ಲಿ ಶಿವರಾಜ್​ಕುಮಾರ್ ಅವರು ಕಾಣಿಸಿಕೊಳ್ಳಲಿದ್ದಾರೆ. ಶಿವಣ್ಣಗೆ ಹೂಗುಚ್ಛ ನೀಡಿ ಭೀಮಾನಾಯ್ಕ್ ಅಭಿನಂದಿಸಿದ್ದಾರೆ.

ಶಿವರಾಜ್​ಕುಮಾರ್ ಅವರು ಹತ್ತಕ್ಕೂ ಅಧಿಕ ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ತಮಿಳು ಚಿತ್ರಗಳನ್ನು ಒಪ್ಪಿಕೊಂಡಿರುವುದರಿಂದ ಅವರು ಬೇರೆ ರಾಜ್ಯಗಳಿಗೂ ತೆರಳಬೇಕಾಗುತ್ತದೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ‘ಜೈಲರ್’ ಚಿತ್ರದ ಆಡಿಯೋ ಲಾಂಚ್​ನಲ್ಲಿ ಅವರು ಭಾಗಿ ಆಗಿದ್ದರು. ಅವರು ವೇದಿಕೆ ಏರಿದ ವೇಳೆ ಸಿಳ್ಳೆಗಳು ಬಿದ್ದಿದ್ದವು. ಈ ಮೂಲಕ ಪರಭಾಷೆಯಲ್ಲೂ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ ಎಂಬುದು ಸಾಬೀತಾಗಿತ್ತು. ಇಷ್ಟೆಲ್ಲ ಕೆಲಸಗಳ ಮಧ್ಯೆ ಅವರು ನಂದಿನಿ ಉತ್ಪನ್ನಗಳ ಪ್ರಚಾರಕ್ಕೆ ಮುಂದಾಗಿರುವುದು ಅನೇಕರಿಗೆ ಖುಷಿ ನೀಡಿದೆ.

ಇದನ್ನೂ ಓದಿ: ‘ಯು ಆರ್​ ಸೋ ಕ್ಯೂಟ್​’; ನವಾಜ್​ ಡೈಲಾಗ್​ಗೆ ಫಿದಾ ಆದ ಶಿವರಾಜ್​ಕುಮಾರ್

ಈ ಮೊದಲು ರಾಜ್​ಕುಮಾರ್ ಅವರು ಕೂಡ ನಂದಿನಿ ಉತ್ಪನ್ನದ ರಾಯಭಾರಿ ಆಗಿದ್ದರು. ಅವರು ಪ್ರಚಾರಕ್ಕೆ ಯಾವುದೇ ಸಂಭಾವನೆ ಪಡೆದಿರಲಿಲ್ಲ. ರೈತರಿಗೆ ಸಹಕಾರಿ ಆಗುತ್ತದೆ ಎಂಬ ಉದ್ದೇಶ ರಾಜ್​ಕುಮಾರ್ ಸಂಭಾವನೆ ಪಡೆದಿರಲಿಲ್ಲ.  ಅವರ ಹಾದಿಯಲ್ಲಿ ಪುನೀತ್ ಸಾಗಿದ್ದರು. ಅವರು ಹಲವು ವರ್ಷಗಳ ಕಾಲ ನಂದಿನಿ ಪ್ರಾಡಕ್ಟ್​​ಗಳ ಪ್ರಚಾರದಲ್ಲಿ ಭಾಗಿ ಆಗಿದ್ದರು. ಇದಕ್ಕಾಗಿ ಅವರು ಯಾವುದೇ ಸಂಭಾವನೆ ಪಡೆದಿರಲಿಲ್ಲ ಎಂಬ ಸುದ್ದಿ ಅವರ ಸಾವಿನ ಬಳಿಕ ಕೇಳಿ ಬಂದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ