Shivaram Death: ನಟ ಶಿವರಾಂ ನಿಧನ; ಹಿರಿಯ ಕಲಾವಿದನ ಅಗಲಿಕೆಗೆ ಕಂಬನಿ ಮಿಡಿಯುತ್ತಿರುವ ಗಣ್ಯರು

Actor Shivaram: ಚಿತ್ರರಂಗದಲ್ಲಿ ಎಲ್ಲರಿಗೂ ಶಿವರಾಂ ಆಪ್ತರಾಗಿದ್ದರು. ಅಂಥ ಕಲಾವಿದನನ್ನು ಸ್ಯಾಂಡಲ್​ವುಡ್​ ಇಂದು (ಡಿ.4) ಕಳೆದುಕೊಂಡಿದೆ. ಅವರ ನಿಧನಕ್ಕೆ ಚಿತ್ರರಂಗ ಮತ್ತು ರಾಜಕೀಯ ಕ್ಷೇತ್ರದ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.

Shivaram Death: ನಟ ಶಿವರಾಂ ನಿಧನ; ಹಿರಿಯ ಕಲಾವಿದನ ಅಗಲಿಕೆಗೆ ಕಂಬನಿ ಮಿಡಿಯುತ್ತಿರುವ ಗಣ್ಯರು
ಶಿವರಾಂ
Follow us
TV9 Web
| Updated By: ಮದನ್​ ಕುಮಾರ್​

Updated on:Dec 04, 2021 | 3:33 PM

ಕನ್ನಡ ಚಿತ್ರರಂಗಕ್ಕೆ ಶಿವರಾಂ (Shivaram) ಅವರು ನೀಡಿದ ಕೊಡುಗೆ ಅಪಾರ. ನಟನಾಗಿ, ನಿರ್ಮಾಪಕನಾಗಿ, ನಿರ್ದೇಶಕನಾಗಿಯೂ ಅವರು ಕೆಲಸ ಮಾಡಿದ್ದರು. ಹಲವಾರು ಬಗೆಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದರು. ಸಿನಿಮಾ ಮಾತ್ರವಲ್ಲದೇ ಕಿರುತೆರೆಯಲ್ಲಿ ಅಭಿನಯಿಸಿದ್ದರು. ಬಣ್ಣದ ಲೋಕದಲ್ಲಿ ಅವರ ಅನುಭವ 6 ದಶಕಗಳಿಗೂ ಹೆಚ್ಚು. ಅಂಥ ಕಲಾವಿದನನ್ನು ಚಿತ್ರರಂಗ ಇಂದು (ಡಿ.4) ಕಳೆದುಕೊಂಡಿದೆ. ಅವರ ನಿಧನಕ್ಕೆ (Shivaram Death) ಚಿತ್ರರಂಗ ಮತ್ತು ರಾಜಕೀಯ ಕ್ಷೇತ್ರದ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಶಿವರಾಂ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ‘ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ಕಲಾವಿದ ಶಿವರಾಂ ಅವರ ನಿಧನ ತುಂಬಾ ದುಃಖದ ವಿಷಯ. ಶಿವರಾಂ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ’ ಸಿಎಂ ಟ್ವೀಟ್​ ಮಾಡಿದ್ದಾರೆ.

ಪುಟ್ಟಣ್ಣ ಕಣಗಾಲ್​ ಅವರಿಗೆ ಶಿವರಾಂ ಆಪ್ತರಾಗಿದ್ದರು. ಇಬ್ಬರೂ ಜೊತೆಯಾಗಿ ಹಲವು ಸಿನಿಮಾಗಳಿಗೆ ಕೆಲಸ ಮಾಡಿದ್ದರು. ಚಿತ್ರರಂಗದಲ್ಲಿ ಎಲ್ಲರಿಗೂ ಶಿವರಾಂ ಆಪ್ತರಾಗಿದ್ದರು. ಅವರ ನಿಧನದ ಬಗ್ಗೆ ಮಗ ಲಕ್ಷ್ಮೀಶ್​ ಹೇಳಿಕೆ ನೀಡಿದ್ದಾರೆ. ‘ನಮ್ಮ ತಂದೆ ಶಿವರಾಮ್ ​ಇನ್ನು ನಮ್ಮ ಜತೆ ಇಲ್ಲ. ಶಿವರಾಂ ಅವರು ಭಗವಂತನ ಪಾದ ಸೇರಿದ್ದಾರೆ. ಆಸ್ಪತ್ರೆ ವತಿಯಿಂದ ಎಲ್ಲಾ ರೀತಿ ಚಿಕಿತ್ಸೆ ನೀಡಿದ್ದಾರೆ. ಆದರೆ ಶಿವರಾಂ ಅವ​ರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಇದನ್ನು ನಾವು ಒಪ್ಪಿಕೊಳ್ಳಲೇ ಬೇಕು’ ಎಂದು ಮಾಹಿತಿ ನೀಡಿದರು.

ಮಾಜಿ ಸಿಎಂ ಯಡಿಯೂರಪ್ಪ ಕೂಡ ಶಿವರಾಂ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ‘ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶಿವರಾಂ ಅವರು ನಿಧನರಾದ ಸುದ್ದಿ ಅತೀವ ನೋವನ್ನುಂಟು ಮಾಡಿದೆ. ಕನ್ನಡದ ದಿಗ್ಗಜ ಕಲಾವಿದರೊಂದಿಗೆ ನಟಿಸಿ ಸೈ ಎನಿಸಿಕೊಂಡಿದ್ದ ಅವರು, ನಿರ್ದೇಶಕ, ನಿರ್ಮಾಪಕರಾಗಿಯೂ ಕೆಲಸ ಮಾಡಿದ್ದರು. ಕಿರುತೆರೆಯ ಹಲವು ಧಾರಾವಾಹಿಗಳಲ್ಲಿಯೂ ಅಭಿನಯಿಸಿದ್ದರು. ಅವರ ನಿಧನದಿಂದ ನಾಡು ಹಿರಿಯ ಕಲಾವಿದರನ್ನು ಕಳೆದುಕೊಂಡಂತಾಗಿದೆ. ಅನೇಕ ಸಂದರ್ಭಗಳಲ್ಲಿ ಅವರನ್ನು ಭೇಟಿ ಮಾಡಿದ್ದು, ಅವರು ಇಂದು ನಮ್ಮೊಂದಿಗೆ ಇಲ್ಲ ಎನ್ನುವುದು ಅತೀವ ನೋವನ್ನು ತಂದಿದೆ. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ, ಕುಟುಂಬ, ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಕೋರುತ್ತೇನೆ. ಓಂ ಶಾಂತಿ’ ಎಂದು ಯಡಿಯೂರಪ್ಪ ಪೋಸ್ಟ್​ ಮಾಡಿದ್ದಾರೆ.

ಶಾಸಕ ರೇಣುಕಾಚಾರ್ಯ ಅವರು ಸಹ ಶ್ರದ್ಧಾಂಜಲಿ ಕೋರಿದ್ದಾರೆ. ‘ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದರಾದ ಶಿವರಾಂ ಅವರ ಅಗಲಿಕೆಯ ವಿಷಯ ಕೇಳಿ ದುಃಖವಾಯಿತು. ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿಯನ್ನು ನೀಡಿ ಅವರ ಕುಟುಂಬಕ್ಕೆ ಮತ್ತು ಅಭಿಮಾನಿ ಬಳಗಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ:

Shivaram: ‘ಇದನ್ನು ನಾವು ಒಪ್ಪಿಕೊಳ್ಳಲೇ ಬೇಕು’; ಶಿವರಾಂ ಸಾವಿನ ಬಗ್ಗೆ ಪುತ್ರ ಲಕ್ಷ್ಮೀಶ್ ಮಾತು

Shivaram Obituary: ಗುಬ್ಬಿ ವೀರಣ್ಣ ನಾಟಕಗಳಿಂದ ಸ್ಫೂರ್ತಿ ಪಡೆದಿದ್ದ ಶಿವರಾಂ; ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆ ಅಪಾರ

Published On - 3:04 pm, Sat, 4 December 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ