ಕನ್ನಡ ಚಿತ್ರರಂಗಕ್ಕೆ ಶಿವರಾಂ (Shivaram) ಅವರು ನೀಡಿದ ಕೊಡುಗೆ ಅಪಾರ. ನಟನಾಗಿ, ನಿರ್ಮಾಪಕನಾಗಿ, ನಿರ್ದೇಶಕನಾಗಿಯೂ ಅವರು ಕೆಲಸ ಮಾಡಿದ್ದರು. ಹಲವಾರು ಬಗೆಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದರು. ಸಿನಿಮಾ ಮಾತ್ರವಲ್ಲದೇ ಕಿರುತೆರೆಯಲ್ಲಿ ಅಭಿನಯಿಸಿದ್ದರು. ಬಣ್ಣದ ಲೋಕದಲ್ಲಿ ಅವರ ಅನುಭವ 6 ದಶಕಗಳಿಗೂ ಹೆಚ್ಚು. ಅಂಥ ಕಲಾವಿದನನ್ನು ಚಿತ್ರರಂಗ ಇಂದು (ಡಿ.4) ಕಳೆದುಕೊಂಡಿದೆ. ಅವರ ನಿಧನಕ್ಕೆ (Shivaram Death) ಚಿತ್ರರಂಗ ಮತ್ತು ರಾಜಕೀಯ ಕ್ಷೇತ್ರದ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಶಿವರಾಂ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ‘ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ಕಲಾವಿದ ಶಿವರಾಂ ಅವರ ನಿಧನ ತುಂಬಾ ದುಃಖದ ವಿಷಯ. ಶಿವರಾಂ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ’ ಸಿಎಂ ಟ್ವೀಟ್ ಮಾಡಿದ್ದಾರೆ.
ಪುಟ್ಟಣ್ಣ ಕಣಗಾಲ್ ಅವರಿಗೆ ಶಿವರಾಂ ಆಪ್ತರಾಗಿದ್ದರು. ಇಬ್ಬರೂ ಜೊತೆಯಾಗಿ ಹಲವು ಸಿನಿಮಾಗಳಿಗೆ ಕೆಲಸ ಮಾಡಿದ್ದರು. ಚಿತ್ರರಂಗದಲ್ಲಿ ಎಲ್ಲರಿಗೂ ಶಿವರಾಂ ಆಪ್ತರಾಗಿದ್ದರು. ಅವರ ನಿಧನದ ಬಗ್ಗೆ ಮಗ ಲಕ್ಷ್ಮೀಶ್ ಹೇಳಿಕೆ ನೀಡಿದ್ದಾರೆ. ‘ನಮ್ಮ ತಂದೆ ಶಿವರಾಮ್ ಇನ್ನು ನಮ್ಮ ಜತೆ ಇಲ್ಲ. ಶಿವರಾಂ ಅವರು ಭಗವಂತನ ಪಾದ ಸೇರಿದ್ದಾರೆ. ಆಸ್ಪತ್ರೆ ವತಿಯಿಂದ ಎಲ್ಲಾ ರೀತಿ ಚಿಕಿತ್ಸೆ ನೀಡಿದ್ದಾರೆ. ಆದರೆ ಶಿವರಾಂ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಇದನ್ನು ನಾವು ಒಪ್ಪಿಕೊಳ್ಳಲೇ ಬೇಕು’ ಎಂದು ಮಾಹಿತಿ ನೀಡಿದರು.
ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ಕಲಾವಿದ ಶಿವರಾಂ ಅವರ ನಿಧನ ತುಂಬಾ ದುಃಖದ ವಿಷಯ. ಶಿವರಾಂ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ. pic.twitter.com/U5X3ccsNoD
— Basavaraj S Bommai (@BSBommai) December 4, 2021
ಮಾಜಿ ಸಿಎಂ ಯಡಿಯೂರಪ್ಪ ಕೂಡ ಶಿವರಾಂ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ‘ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶಿವರಾಂ ಅವರು ನಿಧನರಾದ ಸುದ್ದಿ ಅತೀವ ನೋವನ್ನುಂಟು ಮಾಡಿದೆ. ಕನ್ನಡದ ದಿಗ್ಗಜ ಕಲಾವಿದರೊಂದಿಗೆ ನಟಿಸಿ ಸೈ ಎನಿಸಿಕೊಂಡಿದ್ದ ಅವರು, ನಿರ್ದೇಶಕ, ನಿರ್ಮಾಪಕರಾಗಿಯೂ ಕೆಲಸ ಮಾಡಿದ್ದರು. ಕಿರುತೆರೆಯ ಹಲವು ಧಾರಾವಾಹಿಗಳಲ್ಲಿಯೂ ಅಭಿನಯಿಸಿದ್ದರು. ಅವರ ನಿಧನದಿಂದ ನಾಡು ಹಿರಿಯ ಕಲಾವಿದರನ್ನು ಕಳೆದುಕೊಂಡಂತಾಗಿದೆ. ಅನೇಕ ಸಂದರ್ಭಗಳಲ್ಲಿ ಅವರನ್ನು ಭೇಟಿ ಮಾಡಿದ್ದು, ಅವರು ಇಂದು ನಮ್ಮೊಂದಿಗೆ ಇಲ್ಲ ಎನ್ನುವುದು ಅತೀವ ನೋವನ್ನು ತಂದಿದೆ. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ, ಕುಟುಂಬ, ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಕೋರುತ್ತೇನೆ. ಓಂ ಶಾಂತಿ’ ಎಂದು ಯಡಿಯೂರಪ್ಪ ಪೋಸ್ಟ್ ಮಾಡಿದ್ದಾರೆ.
ಅವರ ನಿಧನದಿಂದ ನಾಡು ಹಿರಿಯ ಕಲಾವಿದರನ್ನು ಕಳೆದುಕೊಂಡಂತಾಗಿದೆ. ಅನೇಕ ಸಂದರ್ಭಗಳಲ್ಲಿ ಅವರನ್ನು ಭೇಟಿ ಮಾಡಿದ್ದು, ಅವರು ಇಂದು ನಮ್ಮೊಂದಿಗೆ ಇಲ್ಲ ಎನ್ನುವುದು ಅತೀವ ನೋವನ್ನು ತಂದಿದೆ. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ, ಕುಟುಂಬ, ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಕೋರುತ್ತೇನೆ. ಓಂ ಶಾಂತಿ (2/2)
— B.S. Yediyurappa (@BSYBJP) December 4, 2021
ಶಾಸಕ ರೇಣುಕಾಚಾರ್ಯ ಅವರು ಸಹ ಶ್ರದ್ಧಾಂಜಲಿ ಕೋರಿದ್ದಾರೆ. ‘ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದರಾದ ಶಿವರಾಂ ಅವರ ಅಗಲಿಕೆಯ ವಿಷಯ ಕೇಳಿ ದುಃಖವಾಯಿತು. ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿಯನ್ನು ನೀಡಿ ಅವರ ಕುಟುಂಬಕ್ಕೆ ಮತ್ತು ಅಭಿಮಾನಿ ಬಳಗಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.
ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದರಾದ ಶಿವರಾಂ ಅವರ ಅಗಲಿಕೆಯ ವಿಷಯ ಕೇಳಿ ದುಃಖವಾಯಿತು
ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದೆ
ದೇವರು ಅವರ ಆತ್ಮಕ್ಕೆ ಶಾಂತಿಯನ್ನು ನೀಡಿ ಅವರ ಕುಟುಂಬಕ್ಕೆ ಮತ್ತು ಅಭಿಮಾನಿ ಬಳಗಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿ ? pic.twitter.com/HQ2csQ0NPk
— M P Renukacharya (@MPRBJP) December 4, 2021
ವೈಯಕ್ತಿಕವಾಗಿ ಶಿವರಾಂ ಅವರ ನಿಧನ ನನಗೆ ತೀವ್ರ ನೋವು ಉಂಟು ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗದವರು, ಅಭಿಮಾನಿಗಳು, ಚಿತ್ರರಂಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ಪ್ರಾರ್ಥನೆ ಮಾಡುತ್ತೇನೆ. 3/3
— H D Kumaraswamy (@hd_kumaraswamy) December 4, 2021
ಇದನ್ನೂ ಓದಿ:
Shivaram: ‘ಇದನ್ನು ನಾವು ಒಪ್ಪಿಕೊಳ್ಳಲೇ ಬೇಕು’; ಶಿವರಾಂ ಸಾವಿನ ಬಗ್ಗೆ ಪುತ್ರ ಲಕ್ಷ್ಮೀಶ್ ಮಾತು
Published On - 3:04 pm, Sat, 4 December 21