Shivaram Obituary: ಗುಬ್ಬಿ ವೀರಣ್ಣ ನಾಟಕಗಳಿಂದ ಸ್ಫೂರ್ತಿ ಪಡೆದಿದ್ದ ಶಿವರಾಂ; ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆ ಅಪಾರ

1938ರಲ್ಲಿ ಚೂಡಸಂದ್ರ ಹಳ್ಳಿಯಲ್ಲಿ ಎಸ್.ಶಿವರಾಂ ಜನಿಸಿದರು. 6 ದಶಕಗಳ ಕಾಲ ನೂರಾರು ಚಿತ್ರಗಳಲ್ಲಿ ಅಭಿನಯಿಸಿದ ಹೆಚ್ಚುಗಾರಿಕೆ ಅವರದ್ದು. ಅವರು ಶಿವರಾಮಣ್ಣ ಅಂತಲೇ ಫೇಮಸ್ ಆಗಿದ್ದರು. ಪೋಷಕ ನಟನಾಗಿ, ಹಾಸ್ಯನಟನಾಗಿ ಶಿವರಾಂ ನಟಿಸಿದ್ದರು.

Shivaram Obituary: ಗುಬ್ಬಿ ವೀರಣ್ಣ ನಾಟಕಗಳಿಂದ ಸ್ಫೂರ್ತಿ ಪಡೆದಿದ್ದ ಶಿವರಾಂ; ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆ ಅಪಾರ
ಶಿವರಾಂ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Dec 04, 2021 | 3:15 PM

ಹಿರಿಯ ನಟ ಶಿವರಾಂ ಅವರು ಇಂದು (ಡಿಸೆಂಬರ್​ 4) ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಮನೆಗೆ ಮರಳಿದ್ದರು. ನಂತರ ಅವರ ಆರೋಗ್ಯ ಮತ್ತೆ ಗಂಭೀರವಾಗಿತ್ತು. ಹೀಗಾಗಿ ಮತ್ತೆ ಆಸ್ಪತ್ರೆ ದಾಖಲು ಮಾಡಲಾಗಿತ್ತು. ಈಗ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆ ಅಪಾರ. ಹಿರಿತೆರೆ ಹಾಗೂ ಕಿರುತೆರೆ ಎರಡರಲ್ಲೂ ಶಿವರಾಂ ಗುರುತಿಸಿಕೊಂಡಿದ್ದರು.

1938ರಲ್ಲಿ ಚೂಡಸಂದ್ರ ಹಳ್ಳಿಯಲ್ಲಿ ಎಸ್.ಶಿವರಾಂ ಜನಿಸಿದರು. 6 ದಶಕಗಳ ಕಾಲ ನೂರಾರು ಚಿತ್ರಗಳಲ್ಲಿ ಅಭಿನಯಿಸಿದ ಹೆಚ್ಚುಗಾರಿಕೆ ಅವರದ್ದು. ಅವರು ಶಿವರಾಮಣ್ಣ ಅಂತಲೇ ಫೇಮಸ್ ಆಗಿದ್ದರು. ಪೋಷಕ ನಟನಾಗಿ, ಹಾಸ್ಯನಟನಾಗಿ ಶಿವರಾಂ ನಟಿಸಿದ್ದರು. ನಿರ್ದೇಶಕ, ನಿರ್ಮಾಪಕರಾಗಿಯೂ ಚಿತ್ರರಂಗಕ್ಕೆ ಕೊಡುಗೆ ನೀಡಿದ್ದಾರೆ. ‘ರಾಶಿ ಬ್ರದರ್ಸ್‌’ ಸಂಸ್ಥೆಯಡಿ ಹಲವು ಚಿತ್ರ ನಿರ್ಮಿಸಿದ್ದರು. ಪುಟ್ಟಣ್ಣ ಕಣಗಾಲ್ ಜತೆಯೂ ಶಿವರಾಂ ಕೆಲಸ ಮಾಡಿದ್ದರು. ಹಲವು ದಿಗ್ಗಜ ನಟರೊಂದಿಗೆ ಶಿವರಾಂ ಅಭಿನಯಿಸಿದ್ದರು.

ಆರಂಭಿಕ ಜೀವನ

ಅಂದಿನ ಮದ್ರಾಸ್ ಪ್ರಾಂತ್ಯದಲ್ಲಿದ್ದ ಚೂಡಸಂದ್ರ ಗ್ರಾಮದಲ್ಲಿ ಶಿವರಾಂ ಜನಿಸಿದರು. ಪ್ರಾಥಮಿಕ ಶಿಕ್ಷಣ ಮುಗಿಸಿದ ನಂತರ ಅವರು ಬೆಂಗಳೂರಿಗೆ ಬಂದರು. ಶಿವರಾಂ ಸೋದರ ಟೈಪ್‌ ರೈಟಿಂಗ್ ಇನ್ಸಿಟಿಟ್ಯೂಟ್ ನಡೆಸುತ್ತಿದ್ದರು. ಗುಬ್ಬಿ ವೀರಣ್ಣ ಅವರ ನಾಟಕಗಳಿಂದ ಶಿವರಾಂ ಅವರು ತುಂಬಾನೇ ಪ್ರೇರಣೆಗೆ ಒಳಗಾಗಿದ್ದರು. ಅವರು ನಾಟಕಗಳಲ್ಲಿ ಬಣ್ಣ ಹಚ್ಚೋಕೆ ಆರಂಭಿಸಿದರು. ನಂತರ ಅವರಿಗೆ ಚಿತ್ರರಂಗದಿಂದ ಆಫರ್ ಬಂತು. 1965ರಲ್ಲಿ ಕನ್ನಡ ಚಿತ್ರರಂಗಕ್ಕೆ ಶಿವರಾಂ ಪದಾರ್ಪಣೆ ಮಾಡಿದರು. ‘ಬೆರೆತ ಜೀವ’ ಅವರ ಮೊದಲ ಚಿತ್ರ. ಕು.ರಾ ಸೀತಾರಾಮಶಾಸ್ತ್ರಿಯಂತಹ ಖ್ಯಾತ ನಿರ್ದೇಶಕರ ಜತೆ ಅವರು ಕೆಲಸ ಮಾಡಿದ್ದರು.

ಸಿನಿಮಾ ನಿರ್ಮಾಣದಲ್ಲೂ ಆಸಕ್ತಿ

ಚಿತ್ರ ನಿರ್ಮಾಣದಲ್ಲೂ ಶಿವರಾಂ ಆಸಕ್ತಿ ಬೆಳೆಸಿಕೊಂಡರು. 1970ರಲ್ಲಿ ತೆರೆಗೆ ಬಂದ ‘ಗೆಜ್ಜೆ ಪೂಜೆ’, ‘ಉಪಾಸನೆ (1970)’, ‘ನಾನೊಬ್ಬ ಕಳ್ಳ (1979)’ ಮೊದಲಾದ ಸಿನಿಮಾಗಳನ್ನು ನಿರ್ಮಾಣ ಮಾಡಿದರು. ಈ ಮೂಲಕ ಸಿನಿಮಾ ನಿರ್ಮಾಣಕ್ಕೂ ಕೊಡುಗೆ ನೀಡಿದರು.

ನಟಿಸಿದ ಚಿತ್ರಗಳು

ಬೆರೆತ ಜೀವ (1965), ಮಾವನ ಮಗಳು (1965), ದುಡ್ಡೇ ದೊಡ್ಡಪ್ಪ (1966), ಲಗ್ನಪತ್ರಿಕೆ (1967),  ಶರಪಂಜರ (1971), ಮುಕ್ತಿ(1971), ಭಲೇ ಅದೃಷ್ಟವೋ ಅದೃಷ್ಟ(1971), ಸಿಪಾಯಿ ರಾಮು (1972), ನಾಗರಹಾವು(1972), ನಾ ಮೆಚ್ಚಿದ ಹುಡುಗ (1972), ಹೃದಯಸಂಗಮ (1972), ಕಿಲಾಡಿ ಕಿಟ್ಟು (1978), ನಾನೊಬ್ಬ ಕಳ್ಳ (1979), ಹಾಲುಜೇನು (1982), ಪಲ್ಲವಿ ಅನುಪಲ್ಲವಿ (1983), ಭಜರಂಗಿ (2013), ಬಂಗಾರ s / O ಬಂಗಾರದ ಮನುಷ್ಯ (2017) ಮೊದಲಾದ ಸಿನಿಮಾಗಳಲ್ಲಿ ಶಿವರಾಂ ನಟಿಸಿದ್ದರು. ಮಕ್ಕಳ ಸೈನ್ಯ ಸೇರಿ ಅನೇಕ ಚಿತ್ರಗಳಲ್ಲಿ ಹಾಸ್ಯ ಪಾತ್ರಗಳಲ್ಲಿ ಬಣ್ಣ ಹಚ್ಚಿದ್ದರು. 1980ರಲ್ಲಿ ‘ಡ್ರೈವರ್ ಹನುಮಂತು’ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದರು. ಇವರ ಸಾಧನೆಗೆ ಕೆಲ ಪ್ರಶಸ್ತಿಗಳು ಕೂಡ ಒಲಿದಿವೆ.

ಧಾರಾವಾಹಿಯಲ್ಲೂ ನಟನೆ

ಹಿರಿತೆರೆ ಮಾತ್ರವಲ್ಲದೆ ಶಿವರಾಂ ಅವರು ಕಿರುತೆರೆಯಲ್ಲೂ ನಟಿಸಿದ್ದಾರೆ. ‘ಗೃಹಭಂಗ’ ಮತ್ತು ‘ಬದುಕು’ ಧಾರವಾಹಿಯಲ್ಲೂ ಅದ್ಭುತವಾಗಿ ಅವರು ನಟಿಸಿದ್ದರು.

ಇದನ್ನೂ ಓದಿ: ಹಿರಿಯ ನಟ ಶಿವರಾಂ​ ಅವರಿಗೆ ಆಗಿದ್ದೇನು? ಇಂಚಿಂಚೂ ವಿವರ ನೀಡಿದ ವೈದ್ಯರು

Published On - 2:31 pm, Sat, 4 December 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್