ಶಿವರಾಂ ಅಂತಿಮ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ; ಬನಶಂಕರಿ ಚಿತಾಗಾರದಲ್ಲಿ ನಡೆಯಲಿದೆ ಅಂತ್ಯಕ್ರಿಯೆ

Actor Shivaram: ಬೆಳಗ್ಗೆ 7.30ರ ಸುಮಾರಿಗೆ ಶಿವರಾಂ ಅವರು ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರಕ್ಕೆ ತರಲಾಗಿದೆ. ಬೆಳಗ್ಗೆ 10 ಗಂಟೆವರೆಗೂ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ.

ಶಿವರಾಂ ಅಂತಿಮ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ; ಬನಶಂಕರಿ ಚಿತಾಗಾರದಲ್ಲಿ ನಡೆಯಲಿದೆ ಅಂತ್ಯಕ್ರಿಯೆ
ರವೀಂದ್ರ ಕಲಾಕ್ಷೇತ್ರದಲ್ಲಿ ಶಿವರಾಂ ಅಂತಿಮ ದರ್ಶನ
Follow us
TV9 Web
| Updated By: ಮದನ್​ ಕುಮಾರ್​

Updated on:Dec 05, 2021 | 8:07 AM

ಒಂದು ತಿಂಗಳ ಹಿಂದೆ ಪುನೀತ್​ ರಾಜ್​ಕುಮಾರ್​ ಅವರನ್ನು ಕಳೆದುಕೊಂಡು ಬಡವಾಗಿದ್ದ ಕನ್ನಡ ಚಿತ್ರರಂಗಕ್ಕೆ ಈಗ ಶಿವರಾಂ (Actor Shivaram) ಅವರ ಅಗಲಿಕೆಯಿಂದ ಮತ್ತೆ ಆಘಾತ ಆಗಿದೆ. ಬೆಂಗಳೂರಿನ ಸೀತಾ ಸರ್ಕಲ್​ ಬಳಿ ಇರುವ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ (ಡಿ.4) ಶಿವರಾಂ ನಿಧನರಾದರು. ಇಂದು (ಡಿ.5) ರವೀಂದ್ರ ಕಲಾಕ್ಷೇತ್ರದಲ್ಲಿ (Ravindra Kalakshetra) ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 7.30ರ ಸುಮಾರಿಗೆ ಶಿವರಾಂ ಅವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರಕ್ಕೆ ತರಲಾಗಿದೆ. ಬೆಳಗ್ಗೆ 10 ಗಂಟೆವರೆಗೂ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. ಅದಕ್ಕಾಗಿ ಪೊಲೀಸರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ನಂತರ ತ್ಯಾಗರಾಜ ನಗರದ ನಿವಾಸಕ್ಕೆ ಪಾರ್ಥಿವ ಶರೀರ ರವಾನೆ ಆಗಲಿದೆ. ಬೆಳಗ್ಗೆ 11 ಗಂಟೆ ನಂತರ ಬನಶಂಕರಿ ಚಿತಾಗಾರದಲ್ಲಿ (Banashankari Crematorium) ಶಿವರಾಂ ಅವರ ಅಂತ್ಯಕ್ರಿಯೆ ನಡೆಯಲಿದೆ.  

ಶನಿವಾರ ಕೂಡ ಶಿವರಾಂ ಅವರ ತ್ಯಾಗರಾಜ ನಗರದ ನಿವಾಸಕ್ಕೆ ಬಂದು ಅನೇಕ ಸೆಲೆಬ್ರಿಟಿಗಳು ಅಂತಿಮ ದರ್ಶನ ಪಡೆದುಕೊಂಡರು. ಶಿವರಾಜ್​ಕುಮಾರ್​, ಎಸ್​. ನಾರಾಯಣ್​, ಅನಿರುದ್ಧ, ದ್ವಾರಕೀಶ್​, ಜಗ್ಗೇಶ್​, ಪ್ರೊ. ದೊಡ್ಡರಂಗೇಗೌಡ, ಉಮಾಶ್ರೀ, ಯೋಗರಾಜ್​ ಭಟ್​, ಅನುಪ್ರಭಾಕರ್​, ದೇವರಾಜ್​, ಗಿರಿಜಾ ಲೋಕೇಶ್​ ಸೇರಿದಂತೆ ಅನೇಕರು ಅಂತಿಮ ದರ್ಶನ ಪಡೆದು ಶಿವರಾಂ ಅವರ ಜತೆಗಿನ ಒಡನಾಟವನ್ನು ಮೆಲುಕು ಹಾಕಿದ್ದಾರೆ.

ನಟ ಶಿವರಾಂ ಅವರ ನೆನಪನ್ನು ಚಿರಸ್ಥಾಯಿಯಾಗಿಸುವ ಕೆಲಸ ಮಾಡಲಾಗುವುದು ಎಂದು ಸಚಿವ ಆರ್. ಅಶೋಕ್ ನುಡಿದಿದ್ದಾರೆ. ಶನಿವಾರವೇ ಶಿವರಾಂ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಅವರು ಮಾತನಾಡಿದರು. ‘ಶಿವರಾಂ ಅವರ ನಿಧನ ಕರ್ನಾಟಕಕ್ಕೆ ಶೋಕ ತಂದೊಡ್ಡಿದ್ದು, ನಮ್ಮವರನ್ನು ಕಳೆದುಕೊಂಡಿದ್ದರಿಂದ ನಮಗೆ ನೋವಾಗಿದೆ. ಅವರ ಹೆಸರು ಚಿರಸ್ಥಾಯಿಯಾಗಿರುವಂತೆ ಕೆಲಸ ಮಾಡುತ್ತೇವೆ. ನನ್ನ ಕ್ಷೇತ್ರದಲ್ಲಿ ಅವರ ನೆನಪು ಉಳಿಸುವ ಕೆಲಸ ಮಾಡುತ್ತೇವೆ. ಯಾವುದಾದರೂ ಕಟ್ಟಡ, ರಸ್ತೆಗೆ ಶಿವರಾಂ ಹೆಸರಿಡುತ್ತೇವೆ. ತಿಂಗಳಿಗೆ ಒಮ್ಮೆಯಾದರೂ ಬಂದು ನನ್ನ ಜತೆ ಮಾತನಾಡುತ್ತಿದ್ದರು. ತುಂಬಾ ಸಂಭಾವಿತ ಕಲಾವಿದರು, ಹಿರಿಯ ಕಲಾವಿದರು. ಪುನೀತ್​ ನಿಧನದ ಬೆನ್ನಲ್ಲೇ ರಾಜ್ಯಕ್ಕೆ ಮತ್ತೊಂದು ಆಘಾತವಾಗಿದೆ’ ಎಂದು ಅಶೋಕ್​ ಹೇಳಿದ್ದಾರೆ.

ಇದನ್ನೂ ಓದಿ:

‘ದೇವ್ರನ್ನ ನಂಬಬೇಕೋ ಬೇಡವೋ ಎಂಬಂತಾಗಿದೆ’; ಅಯ್ಯಪ್ಪ ಭಕ್ತ ಶಿವರಾಂ ನಿಧನಕ್ಕೆ ಬೆಂಗಳೂರು ನಾಗೇಶ್​ ಕಂಬನಿ

ಅಯ್ಯಪ್ಪ ಸ್ವಾಮಿ ಪೂಜೆ ವೇಳೆ ಶಿವರಾಂ ಮಾಡಿದ ಆ ಒಂದು ಕೆಲಸವೇ ಅವರ ಪ್ರಾಣಕ್ಕೆ ಮುಳುವಾಯ್ತಾ?

Published On - 7:53 am, Sun, 5 December 21

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ