AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಪಡೆದ ಶ್ರೀಮುರಳಿ; ಅಭಿಮಾನಿಗಳಿಗೆ ಕೊಟ್ರು ವಿಶೇಷ ಸಂದೇಶ

ನಟಿ ಆಶಿಕಾ ರಂಗನಾಥ್ ಕೂಡ ಇಂದು ಕೊವಿಡ್ ಲಸಿಕೆ ಪಡೆದಿದ್ದಾರೆ. ಅಯೋಗ್ಯ ಸಿನಿಮಾ ಖ್ಯಾತಿಯ ನಿರ್ದೇಶಕ ಮಹೇಶ್ ಕುಮಾರ್ ಕೂಡ ವ್ಯಾಕ್ಸಿನ್ ಹಾಕಿಸಿಕೊಂಡಿದ್ದಾರೆ.

ಕೊರೊನಾ ಲಸಿಕೆ ಪಡೆದ ಶ್ರೀಮುರಳಿ; ಅಭಿಮಾನಿಗಳಿಗೆ ಕೊಟ್ರು ವಿಶೇಷ ಸಂದೇಶ
ಕೊವಿಡ್​ ಲಸಿಕೆ ಪಡೆದ ಶ್ರೀಮುರಳಿ
ರಾಜೇಶ್ ದುಗ್ಗುಮನೆ
|

Updated on:May 10, 2021 | 8:20 PM

Share

ನಟ ಶ್ರೀಮುರಳಿ ಇಂದು ಕೊವಿಡ್ ಲಸಿಕೆ ಪಡೆದಿದ್ದಾರೆ. ಲಸಿಕೆ ಪಡೆಯುತ್ತಿರುವ ಫೋಟೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ನನ್ನ ಮೊದಲ ವಾಕ್ಸಿನೇಶನ್ ಆಯ್ತ. ಆಗದೆ ಇರುವವರು ತಡ ಮಾಡಬೇಡಿ. ನಿಮ್ಮ ವಾಕ್ಸಿನೇಶನ್ ಮುಗಿಸಿಕೊಳ್ಳಿ ಎಂದು ಕೋರಿದ್ದಾರೆ.

ನಟಿ ಆಶಿಕಾ ರಂಗನಾಥ್ ಕೂಡ ಇಂದು ಕೊವಿಡ್ ಲಸಿಕೆ ಪಡೆದಿದ್ದಾರೆ. ಅಯೋಗ್ಯ ಸಿನಿಮಾ ಖ್ಯಾತಿಯ ನಿರ್ದೇಶಕ ಮಹೇಶ್ ಕುಮಾರ್ ಕೂಡ ವ್ಯಾಕ್ಸಿನ್ ಹಾಕಿಸಿಕೊಂಡಿದ್ದಾರೆ. ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಆಂದೋಲನಕ್ಕೆ ಮೇ 1ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿವಾಜಿನಗರದ ವಾಜಪೇಯಿ ಮೆಡಿಕಲ್ ಕಾಲೇಜಿನಲ್ಲಿ ಸಾಂಕೇತಿಕ ಚಾಲನೆ ನೀಡಿದ್ದರು. ಆದರೆ, ಲಸಿಕೆ ನೀಡುವ ಕಾರ್ಯ ಆರಂಭವಾಗಿರಲಿಲ್ಲ.

ಈಗ 3.5 ಲಕ್ಷ ಡೋಸ್ ಲಸಿಕೆ ರಾಜ್ಯಕ್ಕೆ ತಲುಪಿದೆ. ಕೇಂದ್ರ ಸರ್ಕಾರದಿಂದ 99,58,190 ಡೋಸ್ ಕೊವಿಶೀಲ್ಡ್, 10,91,280 ಡೋಸ್ ಕೊವ್ಯಾಕ್ಸಿನ್ ಲಸಿಕೆ ರಾಜ್ಯಕ್ಕೆ ಪೂರೈಕೆಯಾಗಿದೆ. ಹೀಗಾಗಿ, ಸೋಮವಾರದಿಂದ (ಮೇ 10) 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ.

ಈ ಸಂಕಷ್ಟದ ಸಮಯದಲ್ಲಿ ಹಗಲಿರುಳು ಕರೊನಾ ಸೋಂಕಿತರ ಸೇವೆ ಮಾಡುತ್ತಿರುವ 5 ಸರ್ಕಾರಿ ಆಸ್ಪತ್ರೆಯ ಡಾಕ್ಟರ್ಸ್, ನರ್ಸ್ ಹಾಗೂ ಆಸ್ಪತ್ರೆಯ ಸಿಬ್ಬಂದಿಗೆ ಶ್ರೀಮುರಳಿ ಊಟದ ವ್ಯವಸ್ಥೆ ಮಾಡುತ್ತಿದ್ದಾರೆ. ಅವರ ಈ ಸೇವೆಗೆ ಎಲ್ಲ ಕಡೆಗಳಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ:  Madhagaja: ‘ಮದಗಜ’ ಶ್ರೀಮುರಳಿಯ ಇನ್ನೊಂದು ಮುಖ ಬಹಿರಂಗ! ಆಶಿಕಾ ಜೊತೆಗಿನ ರೊಮ್ಯಾಂಟಿಕ್​ ವಿಡಿಯೋ​ ವೈರಲ್​

Sri Murali: ಕೊವಿಡ್​ ಸಂಕಷ್ಟದಲ್ಲಿ 5 ಸರ್ಕಾರಿ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗೆ ಊಟ ನೀಡುತ್ತಿರುವ ನಟ ಶ್ರೀಮುರಳಿ

Published On - 8:05 pm, Mon, 10 May 21

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?