ಮತ್ತೊಂದು ಕೇಸ್​ನಲ್ಲೂ ಉಪೇಂದ್ರಗೆ ರಿಲೀಫ್​; ಎರಡನೇ ಎಫ್​ಐಆರ್​​ಗೂ ತಡೆ ನೀಡಿದ‌ ಹೈಕೋರ್ಟ್

ಚನ್ನಮ್ಮನಕೆರೆ ಅಚ್ಚುಕಟ್ಟು ಹಾಗೂ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಉಪೇಂದ್ರ ವಿರುದ್ಧ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿತ್ತು. ಮೊದಲ ಎಫ್​ಐಆರ್​ಗೆ ಕೋರ್ಟ್​ ಮಧ್ಯಂತರ ತಡೆ ನೀಡಿತ್ತು. ಅದೇ ರೀತಿ ಎರಡನೇ ಎಫ್​​ಐಆರ್​ಗೂ ಕೋರ್ಟ್ ತಡೆ ಕೊಟ್ಟಿದೆ.

ಮತ್ತೊಂದು ಕೇಸ್​ನಲ್ಲೂ ಉಪೇಂದ್ರಗೆ ರಿಲೀಫ್​; ಎರಡನೇ ಎಫ್​ಐಆರ್​​ಗೂ ತಡೆ ನೀಡಿದ‌ ಹೈಕೋರ್ಟ್
ಉಪೇಂದ್ರರನ್ನು ಚಿತ್ರರಂಗದಿಂದ 5 ವರ್ಷ ಬ್ಯಾನ್ ಮಾಡಲು ಮನವಿ ಮಾಡಿದ ಸಾಮಾಜಿಕ ಕಾರ್ಯಕರ್ತ
Follow us
Ramesha M
| Updated By: ರಾಜೇಶ್ ದುಗ್ಗುಮನೆ

Updated on:Aug 17, 2023 | 1:00 PM

ನಟ ಉಪೇಂದ್ರ (Upendra) ನೀಡಿದ ಆಕ್ಷೇಪಾರ್ಹ ಹೇಳಿಕೆ ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ದಲಿತ ಸಂಘಟನೆಯವರು ಈ ಹೇಳಿಕೆ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಉಪೇಂದ್ರ ಅವರ ಬಂಧನಕ್ಕೂ ಆಗ್ರಹಿಸಲಾಗಿತ್ತು. ಚನ್ನಮ್ಮನಕೆರೆ ಅಚ್ಚುಕಟ್ಟು ಹಾಗೂ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಉಪೇಂದ್ರ ವಿರುದ್ಧ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿತ್ತು. ಮೊದಲ ಎಫ್​ಐಆರ್​ಗೆ ಕೋರ್ಟ್​ ಮಧ್ಯಂತರ ತಡೆ ನೀಡಿತ್ತು. ಅದೇ ರೀತಿ ಎರಡನೇ ಎಫ್​​ಐಆರ್​ಗೂ ಕೋರ್ಟ್ ತಡೆ ಕೊಟ್ಟಿದೆ.

ಏನಿದು ಪ್ರಕರಣ?

ಕಳೆದ ವಾರ ಪ್ರಜಾಕೀಯದ ಬಗ್ಗೆ ಮಾತನಾಡಲು ಉಪೇಂದ್ರ ಅವರು ಸೋಶಿಯಲ್​ ಮೀಡಿಯಾದಲ್ಲಿ ಲೈವ್​ ಬಂದಿದ್ದರು. ಈ ವೇಳೆ ಉಪೇಂದ್ರ ಆಕ್ಷೇಪಾರ್ಹ ಪದಬಳಕೆ ಮಾಡಿದ್ದರು. ಹೀಗಾಗಿ ಅವರ ವಿರುದ್ಧ ಬೆಂಗಳೂರಿನ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಕೇಸ್ ದಾಖಲಾಯಿತು. ಅದೇ ರೀತಿ ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಭೈರಪ್ಪ ಹರೀಶ್ ಕುಮಾರ್ ಕೂಡ ದೂರು ದಾಖಲು ಮಾಡಿದ್ದರು. ಈ ದೂರನ್ನು ಆಧರಿಸಿ ಹಲಸೂರು ಗೇಟ್​ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು.

ಹೆಚ್ಚಿದ ಬಿಸಿ

ಮೊದಲ ಪ್ರಕರಣದಲ್ಲಿ ಹೈಕೋರ್ಟ್ ತಡೆ ಕೊಟ್ಟ ಬೆನ್ನಲ್ಲೇ ಹರೀಶ್ ಕುಮಾರ್ ಅವರು ಆ್ಯಕ್ಟೀವ್ ಆದರು. ‘ಮೊದಲ ಪ್ರಕರಣದಲ್ಲಿ ಮಾತ್ರ ತಡೆ ಕೊಡಲಾಗಿದೆ. ಎರಡನೇ ಪ್ರಕರಣ ಹಾಗೆಯೇ ಉಳಿದುಕೊಂಡಿದೆ. ಹೀಗಾಗಿ, ಪೊಲೀಸರು ಉಪೇಂದ್ರ ಅವರನ್ನು ಬಂಧಿಸಬೇಕು’ ಎಂದು ಹರೀಶ್ ಕುಮಾರ್ ಪ್ರತಿಭಟನೆ ಮಾಡಿದರು. ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ನಿವಾಸಕ್ಕೆ ಮುತ್ತಿಗೆ ಹಾಕುವ ಪ್ರಯತ್ನವೂ ನಡೆಯಿತು.

ಇದನ್ನೂ ಓದಿ: ಉಪೇಂದ್ರ ಬೆನ್ನಲ್ಲೇ ಇದೀಗ ಸಚಿವ ಎಸ್​ಎಸ್​ ಮಲ್ಲಿಕಾರ್ಜುನ ವಿಡಿಯೋ ವೈರಲ್, ದೂರು ದಾಖಲು

ಅರ್ಜಿ ವಿಚಾರಣೆ ನಡೆಸಿದ ಕೋರ್ಟ್

ಹಿರಿಯ ವಕೀಲ ಉದಯ್ ಹೊಳ್ಳ ಅವರು ಎರಡನೇ ಎಫ್​ಐಆರ್​ಗೂ ತಡೆನೀಡುವಂತೆ ಹೈಕೋರ್ಟ್ ಮೊರೆ ಹೋದರು. ತಕ್ಷಣ ಅರ್ಜಿ ವಿಚಾರಣೆ ನಡೆಸುವಂತೆ ಕೋರಿದರು. ಇಂದು (ಆಗಸ್ಟ್ 17) ಕರ್ನಾಟಕ ಹೈಕೋರ್ಟ್​​ನಲ್ಲಿ ಅರ್ಜಿ ವಿಚಾರಣೆ ನಡೆದಿದೆ. ಒಂದೇ ಆರೋಪಕ್ಕೆ ಎರಡೆರಡು ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಎರಡನೇ ಎಫ್​ಐಆರ್​ಗೂ ಕೋರ್ಟ್​ ತಡೆ ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:44 pm, Thu, 17 August 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್