Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯಲ್ಲಿ ಸಿಗಾರ್​, ಕೈತುಂಬ ಚಿತ್ರ ವಿಚಿತ್ರ ಉಂಗುರ; ರಾ ಲುಕ್​ನಲ್ಲಿ ಉಪ್ಪಿ ಎಂಟ್ರಿ

ಅರ್ಜುನ್ ಜನ್ಯ ‘45’ ಚಿತ್ರಕ್ಕೆ ನಿರ್ದೇಶನ ಮಾಡುವ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ‘45’ ಚಿತ್ರವನ್ನು ಅವರೇ ನಿರ್ದೇಶನ ಮಾಡುತ್ತಿದ್ದಾರೆ. ಡೈರೆಕ್ಷನ್​ನಲ್ಲಿ ಇದು ಅವರಿಗೆ ಚೊಚ್ಚಲ ಅನುಭವ. ‘45’ ಚಿತ್ರದ ಬಗ್ಗೆ ಅವರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್, ಉಪೇಂದ್ರ ಹಾಗೂ ರಾಜ್​ ಬಿ. ಶೆಟ್ಟಿ ನಟಿಸುತ್ತಿದ್ದಾರೆ. ಇದರಲ್ಲಿ ಉಪೇಂದ್ರ ಲುಕ್ ರಿವೀಲ್ ಆಗಿದೆ.

ಬಾಯಲ್ಲಿ ಸಿಗಾರ್​, ಕೈತುಂಬ ಚಿತ್ರ ವಿಚಿತ್ರ ಉಂಗುರ; ರಾ ಲುಕ್​ನಲ್ಲಿ ಉಪ್ಪಿ ಎಂಟ್ರಿ
ಉಪೇಂದ್ರ
Follow us
ರಾಜೇಶ್ ದುಗ್ಗುಮನೆ
|

Updated on:Sep 18, 2024 | 2:39 PM

ಉಪೇಂದ್ರ ಸಿನಿಮಾ ಮಾಡುತ್ತಿದ್ದಾರೆ ಎಂದರೆ ಅದರಲ್ಲಿ ಒಂದು ವಿಶೇಷತೆ ಇದ್ದೇ ಇರುತ್ತದೆ. ಈ ಮೊದಲು ಉಪೇಂದ್ರ ಅವರು ಲುಕ್​ಗೆ ಸಾಕಷ್ಟು ಪ್ರಾಮುಖ್ಯತೆ ಕೊಡುತ್ತಿದ್ದರು. ಚಿತ್ರ ವಿಚಿತ್ರ ಲುಕ್​ನಲ್ಲಿ ಉಪ್ಪಿ ಎಂಟ್ರಿ ಆಗುತ್ತಿತ್ತು. ಆದರೆ, ಇತ್ತೀಚೆಗೆ ಅವರು ಈ ಟ್ರೆಂಡ್ ಕಡಿಮೆ ಮಾಡಿದ್ದಾರೆ. ಇತ್ತೀಚೆಗಿನ ವರ್ಷಗಳಲ್ಲಿ ಅವರು ಸರಳ ಲುಕ್​ನಲ್ಲಿ ಕಾಣಿಸಿಕೊಂಡಿದ್ದೇ ಹೆಚ್ಚು. ಈಗ ಉಪೇಂದ್ರ ಜನ್ಮದಿನಕ್ಕ ‘45’ ಚಿತ್ರದ ಪೋಸ್ಟರ್ ರಿಲೀಸ್ ಆಗಿದೆ. ರಾ ಲುಕ್​ನಲ್ಲಿ ಉಪ್ಪಿಯ ಎಂಟ್ರಿ ಆಗಿದೆ.

ಕನ್ನಡದಲ್ಲಿ ಹಲವು ಸೂಪರ್ ಹಿಟ್ ಹಾಡುಗಳನ್ನು ಸಂಯೋಜನೆ ಮಾಡಿದವರು ಅರ್ಜುನ್ ಜನ್ಯ. ಅವರ ಇಂಪಾದ ಮ್ಯೂಸಿಕ್​ಗೆ ಮನಸೋಲದವರೇ ಇಲ್ಲ. ಈಗ ಅವರು ನಿರ್ದೇಶನ ಮಾಡುವ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ‘45’ ಚಿತ್ರವನ್ನು ಅವರೇ ನಿರ್ದೇಶನ ಮಾಡುತ್ತಿದ್ದಾರೆ. ಡೈರೆಕ್ಷನ್​ನಲ್ಲಿ ಇದು ಅವರಿಗೆ ಚೊಚ್ಚಲ ಅನುಭವ. ‘45’ ಚಿತ್ರದ ಬಗ್ಗೆ ಅವರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್, ಉಪೇಂದ್ರ ಹಾಗೂ ರಾಜ್​ ಬಿ. ಶೆಟ್ಟಿ ನಟಿಸುತ್ತಿದ್ದಾರೆ. ಇದರಲ್ಲಿ ಉಪೇಂದ್ರ ಲುಕ್ ರಿವೀಲ್ ಆಗಿದೆ.

ಉಪೇಂದ್ರ ಅವರು ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿದ್ದಾರೆ. ಬಾಯಲ್ಲಿ ಸಿಗಾರ್ ಹಚ್ಚುತ್ತಿದ್ದಾರೆ. ಅವರ ಹೇರ್​ಸ್ಟೈಲ್ ಕೂಡ ಭಿನ್ನವಾಗಿದೆ. ಕೈಯಲ್ಲಿ ಚಿತ್ರ ವಿಚಿತ್ರ ಉಂಗುರ ಇದೆ. ಅಷ್ಟೇ ಅಲ್ಲ, ಹಿಂಭಾಗದಲ್ಲಿ ಕೋಡು ಕೂಡ ಹೈಲೈಟ್ ಆಗಿದೆ. ಈ ಲುಕ್ ನೋಡಿದ ಬಳಿಕ ನಿರೀಕ್ಷೆ ಮತ್ತಷ್ಟು ಹೆಚ್ಚುವಂತೆ ಆಗಿದೆ.

ಇದನ್ನೂ ಓದಿ: ‘ಅಕ್ಟೋಬರ್​​ನಲ್ಲಿ ಸಿನಿಮಾನೇ ಬಿಡುಗಡೆ ಮಾಡ್ತೀವಿ ಎಂದಿಲ್ಲ’; ‘ಯುಐ’ ಬಿಡುಗಡೆ ಬಗ್ಗೆ ಶಾಕ್ ಕೊಟ್ಟ ಉಪ್ಪಿ

ಸ್ಯಾಂಡಲ್​ವುಡ್​ನಲ್ಲಿ ಸದಭಿರುಚಿಯ ಚಿತ್ರಗಳನ್ನು ನೀಡಿರುವ ‘ಸೂರಜ್ ಪ್ರೊಡಕ್ಷನ್ಸ್’ ಮೂಲಕ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ‘45’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಭರ್ಜರಿ ಕ್ಲೈಮ್ಯಾಕ್ಸ್ ಇರಲಿದೆ ಎನ್ನಲಾಗಿದೆ. ಈ ಸಿನಿಮಾ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಸದ್ಯ ಉಪ್ಪಿ ಅವರು ‘ಯುಐ’ ಚಿತ್ರದಲ್ಲೂ ನಟಿಸಿದ್ದಾರೆ. ಈ ಸಿನಿಮಾ ಅಕ್ಟೋಬರ್​ನಲ್ಲಿ ರಿಲೀಸ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:19 pm, Wed, 18 September 24

ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ