ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ ಬೆಂಗಳೂರು ನಗರ ವಿವಿ ​

ಸೆಂಟ್ರಲ್ ಕಾಲೇಜ್​ನ ಜ್ಞಾನಜ್ಯೋತಿ ಆಡಿಟೋರಿಯಂನಲ್ಲಿ ನಡೆದ ಬೆಂಗಳೂರು ನಗರ ವಿವಿ ವಾರ್ಷಿಕ ಘಟಿಕೋತ್ಸವದಲ್ಲಿ ವಿ. ರವಿಚಂದ್ರನ್​ಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ ಬೆಂಗಳೂರು ನಗರ ವಿವಿ ​
ರವಿಚಂದ್ರನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Apr 11, 2022 | 1:40 PM

ನಟ ರವಿಚಂದ್ರನ್​ ( V Ravichandran) ಅವರು ಕನ್ನಡ ಚಿತ್ರರಂಗದಲ್ಲಿ ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಗುರುತಿಸಿಕೊಂಡಿದ್ದಾರೆ. ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು. ಚಿತ್ರರಂಗದಲ್ಲಿ ಮಾಡಿದ ಸಾಧನೆಗೆ ಅನೇಕ ಪ್ರಶಸ್ತಿಗಳು ರವಿಚಂದ್ರನ್​ ಅವರನ್ನು ಹುಡುಕಿ ಬಂದಿವೆ. ಈಗ ಅವರ ಹಿರಿಮೆಗೆ ಮತ್ತೊಂದು ಗರಿ ಸೇರ್ಪಡೆಯಾಗಿದೆ. ಕನ್ನಡ ಚಿತ್ರರಂಗಕ್ಕೆ ರವಿಚಂದ್ರನ್ ನೀಡಿದ ಕೊಡುಗೆಯನ್ನು ಪರಿಗಣಿಸಿ ಇತ್ತೀಚೆಗೆ ಬೆಂಗಳೂರು ನಗರ ವಿಶ್ವವಿದ್ಯಾನಿಲಯ (Bangalore City University) ಅವರಿಗೆ ಗೌರವ ಡಾಕ್ಟರೇಟ್​ ನೀಡುವ ಘೋಷಣೆ ಮಾಡಿತ್ತು. ಇಂದು (ಏಪ್ರಿಲ್​ 11) ಕ್ರೇಜಿಸ್ಟಾರ್​ಗೆ ಗೌರವ ಡಾಕ್ಟರೇಟ್​ ಪ್ರದಾನ ಮಾಡಲಾಗಿದೆ.

ರವಿಚಂದ್ರನ್​ ಅವರು ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಲು ಆರಂಭಿಸಿ 4 ದಶಕ ಕಳೆದಿದೆ. ಈ ಅವಧಿಯಲ್ಲಿ ಅವರು ಹಲವು ಉತ್ತಮ ಸಿನಿಮಾಗಳನ್ನು ನೀಡಿದ್ದಾರೆ. ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿ ಭೇಷ್ ಎನಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ಸಂಪೂರ್ಣವಾಗಿ ಅವರು ನಟನೆಯಲ್ಲೇ ತೊಡಗಿಕೊಂಡಿದ್ದಾರೆ. ಕಳೆದ ವರ್ಷಾಂತ್ಯಕ್ಕೆ ತೆರೆಗೆ ಬಂದ ಅವರ ಅಭಿನಯದ ‘ದೃಶ್ಯ 2’ ಸಿನಿಮಾ ಗಮನ ಸೆಳೆಯಿತು. ಇತ್ತೀಚೆಗೆ ಅವರಿಗೆ ಗೌರವ ಡಾಕ್ಟರೇಟ್​ ಕೊಡುವ ಬಗ್ಗೆ ಘೋಷಣೆ ಆದಾಗ ಅವರ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದರು.

ಸೆಂಟ್ರಲ್ ಕಾಲೇಜ್​ನ ಜ್ಞಾನಜ್ಯೋತಿ ಆಡಿಟೋರಿಯಂನಲ್ಲಿ ನಡೆದ ಬೆಂಗಳೂರು ನಗರ ವಿವಿ ವಾರ್ಷಿಕ ಘಟಿಕೋತ್ಸವದಲ್ಲಿ ವಿ. ರವಿಚಂದ್ರನ್​ಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರವಿಚಂದ್ರನ್​ ಅವರನ್ನು ಗೌರವಿಸಿದರು. ಈ ಕಾರ್ಯಕ್ರಮದಲ್ಲಿ ರವಿಚಂದ್ರನ್ ಸೇರಿ ಮೂರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. 2019ರಲ್ಲಿ ರವಿಚಂದ್ರನ್​ ಅವರಿಗೆ ಸಿಎಂಆರ್​ ವಿಶ್ವ ವಿದ್ಯಾನಿಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು.

2016ರಲ್ಲಿ ತೆರೆಗೆ ಬಂದ ‘ಅಪೂರ್ವ’ ಅವರ ನಿರ್ದೇಶನದ ಕೊನೆಯ ಸಿನಿಮಾ. ಈ ಚಿತ್ರಕ್ಕೆ ಅವರೇ ಬಂಡವಾಳ ಕೂಡ ಹಾಕಿದ್ದರು. ಆ ಬಳಿಕ ಅವರು ನಟನೆಯತ್ತ ಸಂಪೂರ್ಣ ಗಮನವನ್ನು ಹರಿಸಿದರು. 1987ರಲ್ಲಿ ತೆರೆಗೆ ಬಂದ ‘ಪ್ರೇಮಲೋಕ’ ಚಿತ್ರವನ್ನು ಈಗಲೂ ಜನರು ನೆನಪು ಮಾಡಿಕೊಳ್ಳುತ್ತಾರೆ. ರವಿಚಂದ್ರನ್ ಅವರು ಈ ಚಿತ್ರವನ್ನು ನಿರ್ದೇಶನ, ನಿರ್ಮಾಣ ಮಾಡಿ ನಟಿಸಿದ್ದರು. ಈ ಸಿನಿಮಾ ಸೂಪರ್​ ಡೂಪರ್​ ಹಿಟ್ ಆಯಿತು. ಈ ಚಿತ್ರ ತಮಿಳಲ್ಲೂ ತೆರೆಕಂಡಿತ್ತು.

ಇದನ್ನೂ ಓದಿ: ‘ಅಮ್ಮ ಇಲ್ಲದಿದ್ದರೆ ಎಷ್ಟು ಕಷ್ಟ ಅಂತ ನಮಗೆ ಗೊತ್ತು’: ರವಿಚಂದ್ರನ್​ ತಾಯಿಯ ಅಂತಿಮ ದರ್ಶನ ಪಡೆದ ರಾಘಣ್ಣ

ರವಿಚಂದ್ರನ್​ ಬಳಿಕ ರಚಿತಾ ರಾಮ್​ ಕಿಡ್ನಾಪ್​; ಈ ಡ್ರಾಮಾದ ಹೊಣೆ ಹೊತ್ತುಕೊಂಡ ಹಿರಿಯ ನಟಿ ಲಕ್ಷ್ಮೀ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು