Sign In

By signing in or creating an account, you agree with Associated Broadcasting Company's Terms & Conditions and Privacy Policy.

Vishal: ವೃದ್ಧಾಶ್ರಮಗಳಲ್ಲಿ ಅನ್ನದಾನ ನಡೆಸಿ ಪುನೀತ್​ಗೆ ಅರ್ಥಪೂರ್ಣ ನಮನ ಸಲ್ಲಿಸಿದ ವಿಶಾಲ್

Puneeth Rajkumar: ಪುನೀತ್ ರಾಜ್​ಕುಮಾರ್ ಸ್ನೇಹಿತ, ತಮಿಳು ನಟ ವಿಶಾಲ್ ನೆಚ್ಚಿನ ಗೆಳೆಯನ ಜನ್ಮದಿನವನ್ನು ಆಚರಿಸಿದ್ದಾರೆ. ಈ ಸಂದರ್ಭದ ವಿಡಿಯೋಗಳನ್ನು ನಟ ಹಂಚಿಕೊಂಡಿದ್ದಾರೆ.

Vishal: ವೃದ್ಧಾಶ್ರಮಗಳಲ್ಲಿ ಅನ್ನದಾನ ನಡೆಸಿ ಪುನೀತ್​ಗೆ ಅರ್ಥಪೂರ್ಣ ನಮನ ಸಲ್ಲಿಸಿದ ವಿಶಾಲ್
ವಿಶಾಲ್- ಪುನೀತ್ ರಾಜ್​ಕುಮಾರ್ (ಸಂಗ್ರಹ ಚಿತ್ರ), ಪುನೀತ್ ಜನ್ಮದಿನದಂದು ಅವರನ್ನು ಸ್ಮರಿಸುತ್ತಿರುವ ವಯೋವೃದ್ಧರು
Follow us
TV9 Web
| Updated By: shivaprasad.hs

Updated on: Mar 19, 2022 | 11:21 AM

ಮಾರ್ಚ್​​ 17ರಂದು ಪುನೀತ್ ರಾಜ್​ಕುಮಾರ್ ಜನ್ಮದಿನವನ್ನು (Puneeth Rajkumar Birth Anniversary) ಅವರಿಲ್ಲ ಎಂಬ ಕೊರಗಿನ ನಡುವೆಯೂ ಸಾರ್ಥಕವಾಗಿ ಆಚರಿಸಲಾಯಿತು. ಕರ್ನಾಟಕದಲ್ಲಿ ಅವರ ಅಭಿಮಾನಿ ಸಂಘಟನೆಗಳು ಹಲವು ಸಾಮಾಜಿಕ ಕಾರ್ಯಗಳ ಮೂಲಕ ಮಾದರಿಯಾದರು. ರಕ್ತದಾನ ಸೇರಿದಂತೆ ಹಲವು ಶಿಬಿರಗಳನ್ನು ಆಯೋಜಿಸಲಾಗಿತ್ತು. ‘ಜೇಮ್ಸ್’ (James) ವೀಕ್ಷಿಸಿದ ನಂತರ ನೇತ್ರದಾನ ಹಾಗೂ ದೇಹದಾನಕ್ಕೆ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ತಮ್ಮ ಹೆಸರನ್ನು ನೋಂದಾಯಿಸಿದ್ದರು. ಈ ಮೂಲಕ ಎಲ್ಲೆಡೆ ಅಪ್ಪು ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಗಿತ್ತು. ಪುನೀತ್ ಸ್ನೇಹಿತ ನಟ ವಿಶಾಲ್ (Actor Vishal) ಕೂಡ ನೆಚ್ಚಿನ ಗೆಳೆಯನ ಜನ್ಮದಿನವನ್ನು ಆಚರಿಸಿದ್ದಾರೆ. ಈ ಸಂದರ್ಭದ ವಿಡಿಯೋವನ್ನು ನಟ ಹಂಚಿಕೊಂಡಿದ್ದಾರೆ. ಚೆನ್ನೈನ ಸುತ್ತಮುತ್ತಲಿನ ವೃದ್ಧಾಶ್ರಮಗಳಲ್ಲಿರುವ ಸುಮಾರು 200ಕ್ಕೂ ಹೆಚ್ಚು ವಯೋವೃದ್ಧರಿಗೆ ವಿಶಾಲ್ ಅನ್ನದಾನ ನಡೆಸಿದ್ದಾರೆ. ಈ ಮೂಲಕ ಸಾಮಾಜಿಕ ಕಾರ್ಯಗಳಲ್ಲಿ ಸದಾ ಮುಂಚೂಣಿಯಲ್ಲಿದ್ದ ಪವರ್​ಸ್ಟಾರ್​ಗೆ ಗೌರವ ಸಲ್ಲಿಸಿದ್ದಾರೆ.

ಈ ಕುರಿತು ಟ್ವಿಟರ್​ನಲ್ಲಿ ವಿಶಾಲ್ ಬರೆದುಕೊಂಡಿದ್ದು, ‘‘ಪುನೀತ್​ಗೆ ಗೌರವ ಹಾಗೂ ನಮನ ಸಲ್ಲಿಸಲು ಇದಕ್ಕಿಂತ ಉತ್ತಮ ವಿಧಾನ ಬೇರೇನಿದೆ?. ಹಿರಿಯರು ಅಪ್ಪುಗೆ ಆಶೀರ್ವಾದ ಮಾಡುವಾಗ ಖುಷಿಯಾಗುತ್ತದೆ’’ ಎಂದಿದ್ದಾರೆ. ಈ ಸಂದರ್ಭದ ವಿಡಿಯೋವನ್ನು ವಿಶಾಲ್ ಹಂಚಿಕೊಂಡಿದ್ದಾರೆ. ಆಶ್ರಮದಲ್ಲಿ ಪುನೀತ್​ಗೆ ವೃದ್ಧರು ಹಾರೈಸುವ ದೃಶ್ಯಗಳೂ ಇವೆ.

ವಿಶಾಲ್ ಹಂಚಿಕೊಂಡ ವಿಡಿಯೋ:

ಪುನೀತ್ ಕುರಿತು ವಿಶಾಲ್ ಭಾವನಾತ್ಮಕ ಟ್ವೀಟ್ ಒಂದನ್ನು ಜನ್ಮದಿನದಂದು ಹಂಚಿಕೊಂಡಿದ್ದರು. ‘‘ನೀವು ನಮ್ಮೊಡನೆ ಇಲ್ಲದಿದ್ದರೂ ನಿಮ್ಮ ನಗು, ನಿಮ್ಮ ಚಿಂತನೆಗಳು ಸದಾ ನಮ್ಮೊಂದಿಗಿರುತ್ತವೆ. ನಿಮ್ಮನ್ನು ದಿನವೂ ಮಿಸ್ ಮಾಡಿಕೊಳ್ಳುತ್ತೇವೆ. ನಿಮಗೆ ಸದಾ ನಮ್ಮ ಗೌರವಗಳು ಸಲ್ಲಿಕೆಯಾಗುತ್ತವೆ’’ ಎಂದು ವಿಶಾಲ್ ಬರೆದುಕೊಂಡಿದ್ದರು. ಜತೆಗೆ ಪುನೀತ್ ಜತೆಗಿರುವ ಅಪರೂಪದ ಫೋಟೋ ಹಂಚಿಕೊಂಡಿದ್ದರು.

ಪುನೀತ್ ಜನ್ಮದಿನದಂದು ರಿಲೀಸ್ ಆದ ‘ಜೇಮ್ಸ್’ ಎಲ್ಲೆಡೆಯಿಂದ ಭರ್ಜರಿ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಈಗಾಗಲೇ ಚಿತ್ರದ ಒಟ್ಟು ಗಳಿಕೆ 100 ಕೋಟಿ ರೂ ದಾಟಿದ್ದು, ಹೊಸ ದಾಖಲೆ ಬರೆದಿದೆ. ಚೇತನ್ ಕುಮಾರ್ ಆಕ್ಷನ್ ಕಟ್ ಹೇಳಿರುವ ಈ ಚಿತ್ರಕ್ಕೆ ಕಿಶೋರ್ ಪತ್ತಿಕೊಂಡ ಬಂಡವಾಳ ಹೂಡಿದ್ದಾರೆ. ಪ್ರಿಯಾ ಆನಂದ್ ನಾಯಕಿಯಾಗಿ ನಟಿಸಿದ್ದಾರೆ.

ಇದನ್ನೂ ಓದಿ:

Alia Bhatt: 29 ವರ್ಷದ ಆಲಿಯಾ ಬಹುಕೋಟಿಗಳ ಒಡತಿ! ನಟಿಯ ಒಟ್ಟು ಆಸ್ತಿ ಎಷ್ಟು?

ಚಿಕ್ಕಬಳ್ಳಾಪುರದಲ್ಲಿ RRR ಜಾತ್ರೆ; ಬೆಂಗಳೂರಿಗೆ ಬರುವ ವಾಹನಗಳ ಮಾರ್ಗ ಬದಲಾವಣೆ ಬಗ್ಗೆ ಇಲ್ಲಿದೆ ಮಾಹಿತಿ

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ