ವಿಷ್ಣುವರ್ಧನ್​ಗೆ ಆ ಒಂದು ವಿಚಾರದಲ್ಲಿ ಇತ್ತು ಕೊರಗು; ಕೊನೆಗೂ ಈಡೇರಲಿಲ್ಲ

ವಿಷ್ಣುವರ್ಧನ್ ಅವರಿಗೆ ಇಂದು (ಸೆಪ್ಟೆಂಬರ್ 18) ಜನ್ಮದಿನ. ಅವರಿಗೆ ಎಲ್ಲರೂ ವಿಶ್ ತಿಳಿಸುತ್ತಿದ್ದಾರೆ. ಅವರು ನಮ್ಮ ಜೊತೆ ಇಲ್ಲದೆ ಇದ್ದರೂ ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ. ವಿಷ್ಣುವರ್ಧನ್​ಗೆ ಒಂದು ಕೊರಗು ಇತ್ತು. ಆ ಕೊರಗಲ್ಲೇ ಅವರು ನಿಧನ ಹೊಂದಿದ್ದರು.

ವಿಷ್ಣುವರ್ಧನ್​ಗೆ ಆ ಒಂದು ವಿಚಾರದಲ್ಲಿ ಇತ್ತು ಕೊರಗು; ಕೊನೆಗೂ ಈಡೇರಲಿಲ್ಲ
ವಿಷ್ಣುವರ್ಧನ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Sep 18, 2024 | 7:58 AM

ವಿಷ್ಣುವರ್ಧನ್ ಅವರಿಗೆ ಇಂದು ಜನ್ಮದಿನ. ಅವರು ನಮ್ಮ ಜೊತೆ ಇದ್ದಿದ್ದರೆ ಫ್ಯಾನ್ಸ್ ಖುಷಿಪಡುತ್ತಿದ್ದರು. ಖುಷಿಯಿಂದ ಹುಟ್ಟುಹಬ್ಬ ಆಚರಿಸುತ್ತಿದ್ದರು. ಆದರೆ, ಅವರು ನಮ್ಮ ಜೊತೆ ಇಲ್ಲ ಅನ್ನೋದು ಬೇಸರದ ವಿಚಾರ. ವಿಷ್ಣುವರ್ಧನ್ ಅವರ ನೆನಪು ಎಂದಿಗೂ ಮರೆ ಆಗುವಂಥದ್ದಲ್ಲ. ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಅವರ ಸಿನಿಮಾಗಳು ಈಗಲೂ ಪ್ರೇಕ್ಷಕರನ್ನು ಕಾಡುತ್ತವೆ. ವಿಷ್ಣುವರ್ಧನ್​ಗೆ ಒಂದು ಕೊರಗು ಇತ್ತು. ಆ ಕೊರಗಲ್ಲೇ ಅವರು ನಿಧನ ಹೊಂದಿದ್ದರು.

ಅವಾರ್ಡ್ ಹಾಗೂ ಕೇಂದ್ರ ಸರ್ಕಾರದ ಕೆಲ ಅವಾರ್ಡ್​ಗಳನ್ನು ಪಡೆದರೆ ಯಾವುದೇ ಕಲಾವಿದನಾದರೂ ಹೆಮ್ಮೆ ಆಗುತ್ತದೆ. ಅದಕ್ಕಿಂತ ಹೆಮ್ಮೆಯ ವಿಚಾರ ಮತ್ತೊಂದು ಇರುವುದಿಲ್ಲ. ಆದರೆ, ವಿಷ್ಣುವರ್ಧನ್​ಗೆ ಯಾವುದೇ ರಾಷ್ಟ್ರ ಪ್ರಶಸ್ತಿ ಸಿಕ್ಕಿಲ್ಲ. ಪದ್ಮಶ್ರೀ, ಪದ್ಮವಿಭೂಷಣದಂಥ ಗೌರವ ಸಿಕ್ಕಿಲ್ಲ. ಈ ಬಗ್ಗೆ ಅವರಿಗೆ ಬೇಸರ ಇತ್ತು. ಸಂದರ್ಶನ ಒಂದರಲ್ಲಿ ಅವರು ಈ ಬಗ್ಗೆ ಹೇಳಿದ್ದರು.

‘ಆರ್ಟಿಸ್ಟ್​ಗೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಿಗುವ ಗೌರವ ಸಿಕ್ಕೇ ಇಲ್ಲ ಎಂದಾದರೆ ಅದಕ್ಕಿಂತ ದೌರ್ಭಾಗ್ಯ ಇನ್ನೇನಿದೆ? ನನ್ನತ್ರ ಹೇಳಿದ್ರೆ ನಾನೇನು ಮಾಡಲಿ? ಏನು ಸಿಕ್ಕಿದೆ ಅದಕ್ಕೆ ಖುಷಿ ಇದೆ. ಪದ್ಮಶ್ರೀ ಮತ್ತೊಂದು, ಮಗದೊಂದು ಇದೆಯಲ್ಲ, ಅದೆಲ್ಲ ಸಿಕ್ಕಿಲ್ಲ. ಶಿವಾಜಿ ಅವರು ನಿನಗೆ ಅವಾರ್ಡ್ ಏಕೆ ಎಂದು ಕೇಳಿದ್ದರು? ಅವರಿಗೂ ರಾಷ್ಟ್ರ ಪ್ರಶಸ್ತಿ ಸಿಕ್ಕಿರಲಿಲ್ಲ. ಜನರು ಗುರುತಿಸುವಾಗ ಅದೆಲ್ಲ ಗೌಣ ಆಗಿ ಬಿಡುತ್ತವೆ. ಜನರು ಸ್ಪಂದಿಸೋದು ಮುಖ್ಯ ಆಗುತ್ತದೆ’ ಎಂದಿದ್ದರು ವಿಷ್ಣವರ್ಧನ್.

ಇದನ್ನೂ ಓದಿ: ವಿಷ್ಣುವರ್ಧನ್ ಸಸ್ಯಹಾರಿಯೋ, ಮಾಂಸಾಹಾರಿಯೋ? ಅಚ್ಚರಿಯ ವಿಚಾರ ತಿಳಿಸಿದ ಹಿರಿಯ ನಿರ್ದೇಶಕ

ವಿಷ್ಣುವರ್ಧನ್ ಅವರಿಗೆ ಅನೇಕ ಬಾರಿ ರಾಜ್ಯ ಪ್ರಶಸ್ತಿಗಳು ಸಿಕ್ಕಿವೆ. ‘ನಾಗರಹಾವು’ ಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿತ್ತು. ಮೊದಲ ಚಿತ್ರದಲ್ಲೇ ರಾಜ್ಯ ಪ್ರಶಸ್ತಿ ಪಡೆದರು. ‘ಹೊಂಬಿಸಿಲು’, ‘ಬಂಧನ’, ‘ಲಯನ್ ಜಗಪತಿ ರಾವ್’, ‘ಲಾಲಿ’ ಮೊದಲಾದ ಸಿನಿಮಾಗಳ ನಟನೆಗೆ ಅವರಿಗೆ ರಾಜ್ಯ ಪ್ರಶಸ್ತಿ ದೊರೆತಿದೆ. ವಿಷ್ಣುವರ್ಧನ್ ಅವರನ್ನು ಈಗಲೂ ಅನೇಕರು ನೆನಪು ಮಾಡಿಕೊಳ್ಳುತ್ತಾರೆ. ಸುದೀಪ್ ಸೇರಿ ಅನೇಕ ಹೀರೋಗಳಿಗೆ ವಿಷ್ಣುವರ್ಧನ್ ಅವರೇ ಸ್ಫೂರ್ತಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ