ರೇಣುಕಾಸ್ವಾಮಿ ಕೊಲೆ ಕೇಸ್: ಸಾಕ್ಷಿ ಹೇಳುವಾಗ ತಡಬಡಿಸಿದ ಚಿಕ್ಕಣ್ಣ; ಯಶಸ್ ಹೇಳಿದ್ದೇನು?

ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಸಿಸಿಎಚ್ ನ್ಯಾಯಾಲಯಕ್ಕೆ ನಟ ಚಿಕ್ಕಣ್ಣ ಹಾಗೂ ಯಶಸ್ ಸೂರ್ಯ ಸಾಕ್ಷಿಗಳಾಗಿ ಹಾಜರಾಗಿದ್ದಾರೆ. ಕಟಕಟೆಯಲ್ಲಿ ಸಾಕ್ಷಿ ನುಡಿಯುವಾಗ ಚಿಕ್ಕಣ್ಣ ಭಯದಿಂದ ತಡಬಡಿಸಿದರೆ, ಯಶಸ್ ಸೂರ್ಯ ಅವರು ಘಟನೆಯ ದಿನ ದರ್ಶನ್ ಜೊತೆ ಊಟ ಮಾಡಿ ಸಿನಿಮಾ ಚರ್ಚೆ ನಡೆಸಿದ್ದಾಗಿ ನ್ಯಾಯಾಲಯಕ್ಕೆ ಸ್ಪಷ್ಟನೆ ನೀಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್: ಸಾಕ್ಷಿ ಹೇಳುವಾಗ ತಡಬಡಿಸಿದ ಚಿಕ್ಕಣ್ಣ; ಯಶಸ್ ಹೇಳಿದ್ದೇನು?
ಚಿಕ್ಕಣ್ಣ, ದರ್ಶನ್, ಯಶಸ್

Updated on: Oct 13, 2026 | 1:08 PM

ಮುಖ್ಯಾಂಶಗಳು

  • ರೇಣುಕಾಸ್ವಾಮಿ ಕೊಲೆ ಪ್ರಕರಣ
  • ಕೋರ್ಟ್‌ಗೆ ಹಾಜರಾದ ಚಿಕ್ಕಣ್ಣ, ಯಶಸ್ ಸೂರ್ಯ
  • ನ್ಯಾಯಾಲಯದ ಕಟಕಟೆಯಲ್ಲಿ ಸಾಕ್ಷಿ ಹೇಳುವಾಗ ತಡಬಡಿಸಿದ ನಟ ಚಿಕ್ಕಣ್ಣ 

ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ತೀವ್ರ ಕುತೂಹಲ ಘಟ್ಟ ತಲುಪಿದ್ದು, ಪ್ರಕರಣದ ಪ್ರಮುಖ ಸಾಕ್ಷಿಗಳಾದ ನಟ ಚಿಕ್ಕಣ್ಣ ಹಾಗೂ ಯಶಸ್ ಸೂರ್ಯ ಸಿಸಿಎಚ್ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಘಟನೆ ನಡೆದ ದಿನದಂದು ದರ್ಶನ್ ಹಾಗೂ ತಂಡದೊಂದಿಗೆ ಪಾರ್ಟಿಯಲ್ಲಿದ್ದ ಕಾರಣಕ್ಕೆ ಇಬ್ಬರನ್ನೂ ಪ್ರಮುಖ ಸಾಕ್ಷಿಗಳನ್ನಾಗಿ ಪರಿಗಣಿಸಲಾಗಿದ್ದು, ಸಾಕ್ಷ್ಯ ನುಡಿಯಲು ಇಬ್ಬರೂ ಕೋರ್ಟ್ ಮೆಟ್ಟಿಲೇರಿದ್ದರು.

ನ್ಯಾಯಾಲಯದ ಕಟಕಟೆಯಲ್ಲಿ ಸಾಕ್ಷಿ ಹೇಳುವ ಸಂದರ್ಭದಲ್ಲಿ ನಟ ಚಿಕ್ಕಣ್ಣ ತೀವ್ರ ಭೀತಿಯಿಂದ ತಡಬಡಿಸಿದರು. ಅವರು ಮಾತನಾಡಲು ಕಷ್ಟಪಡುತ್ತಿದ್ದನ್ನು ಗಮನಿಸಿದ ನ್ಯಾಯಾಧೀಶರು, ಅವರಿಗೆ ವಿಶ್ರಾಂತಿ ಪಡೆಯಲು ಸೂಚನೆ ನೀಡಿದರು. ವೀಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಅವರ ಸಮ್ಮುಖದಲ್ಲೇ ಈ ಘಟನೆ ನಡೆದಿದೆ.

ಆ ಬಳಿಕ ಸಾಕ್ಷಿ ನುಡಿದ ನಟ ಯಶಸ್ ಸೂರ್ಯ, ದರ್ಶನ್ ಅವರೊಂದಿಗೆ ತಮಗಿದ್ದ ವರ್ಷಗಳ ಪರಿಚಯವನ್ನು ಹಂಚಿಕೊಂಡರು. 2010ರ ಚಿಂಗಾರಿ ಸಿನಿಮಾದಿಂದ ಹಿಡಿದು ಕುರುಕ್ಷೇತ್ರ, ಚಕ್ರವರ್ತಿ, ಒಡೆಯ ಹಾಗೂ ಗರಡಿ ಚಿತ್ರಗಳವರೆಗೆ ತಾವು ಒಂದಾಗಿ ಕೆಲಸ ಮಾಡಿರುವುದನ್ನು ನ್ಯಾಯಾಲಯಕ್ಕೆ ವಿವರಿಸಿದರು. ಘಟನೆಯ ದಿನದಂದು ಸ್ಟೋನಿಬ್ರೂಕ್ ರೆಸ್ಟೋರೆಂಟ್‌ನಲ್ಲಿ ಊಟ ಮಾಡಿದ್ದಾಗಿ ಅವರು ತಿಳಿಸಿದರು.

ಇದನ್ನೂ ಓದಿ: ರೇಣುಕಾಸ್ವಾಮಿ ಪ್ರಕರಣ: ನ್ಯಾಯಾಲಯದಲ್ಲಿ ದರ್ಶನ್‌ ಸಲ್ಲಿಸಿದ್ದ ಎರಡು ಅರ್ಜಿಗಳು ವಜಾ

ಸ್ಟೋನಿಬ್ರೂಕ್ ರೆಸ್ಟೋರೆಂಟ್‌ನಲ್ಲಿ ಊಟ ಮಾಡುವ ವೇಳೆ ಕೇವಲ ಸಿನಿಮಾ ವಿಚಾರಗಳ ಬಗ್ಗೆ ಮಾತ್ರ ಚರ್ಚೆ ನಡೆಸಿದ್ದಾಗಿ ಯಶಸ್ ಸೂರ್ಯ ಸ್ಪಷ್ಟಪಡಿಸಿದರು. ಊಟ ಮುಗಿದ ತಕ್ಷಣವೇ ತಾವು ಅಲ್ಲಿಂದ ಹೊರಟು ಹೋದದ್ದಾಗಿ ಅವರು ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ್ದಾರೆ. ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಎಚ್ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Published On - 1:04 pm, Tue, 13 October 26

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us