‘ಉತ್ತರಕಾಂಡ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದ ಐಶ್ವರ್ಯಾ ರಾಜೇಶ್

‘ಉತ್ತರಕಾಂಡ’ ಚಿತ್ರದಲ್ಲಿ ದೊಡ್ಡ ತಾರಾಗಣ ಇದೆ. ಶಿವರಾಜ್​ಕುಮಾರ್​, ಡಾಲಿ ಧನಂಜಯ್​ ಜೊತೆ ನಟಿ ಐಶ್ವರ್ಯಾ ರಾಜೇಶ್​ ಕೂಡ ಪಾತ್ರವರ್ಗಕ್ಕೆ ಸೇರ್ಪಡೆ ಆಗಿದ್ದಾರೆ. ಅವರ ಪೋಸ್ಟರ್​ ಸಹ ಅನಾವರಣ ಆಗಿದೆ. ಉತ್ತರ ಕರ್ನಾಟಕದಲ್ಲಿ ಈ ಸಿನಿಮಾಗೆ ಚಿತ್ರೀಕರಣ ನಡೆಯುತ್ತಿದೆ. ರೋಹಿತ್​ ಪದಕಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಆಡಿಷನ್​ ಮೂಲಕ ಅನೇಕ ಕಲಾವಿದರನ್ನು ಆಯ್ಕೆ ಮಾಡಲಾಗಿದೆ.

‘ಉತ್ತರಕಾಂಡ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದ ಐಶ್ವರ್ಯಾ ರಾಜೇಶ್
ಐಶ್ವರ್ಯಾ ರಾಜೇಶ್, ಡಾಲಿ ಧನಂಜಯ್​
Follow us
ಮದನ್​ ಕುಮಾರ್​
|

Updated on: Apr 23, 2024 | 7:55 PM

ಬಹುನಿರೀಕ್ಷಿತ ‘ಉತ್ತರಕಾಂಡ’ (Uttarakaanda) ಸಿನಿಮಾದ ಪಾತ್ರವರ್ಗ ದಿನದಿಂದ ದಿನಕ್ಕೆ ಹಿರಿದಾಗುತ್ತಿದೆ. ಈಗ ದಕ್ಷಿಣ ಭಾರತದ ಖ್ಯಾತ ನಟಿ ಐಶ್ವರ್ಯಾ ರಾಜೇಶ್ (Aishwarya Rajesh) ಅವರು ‘ಉತ್ತರಕಾಂಡ’ ಚಿತ್ರತಂಡಕ್ಕೆ ಸೇರ್ಪಡೆ ಆಗಿದ್ದಾರೆ. ಆ ಮೂಲಕ ಅವರು ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದಾರೆ. ಇದು ಅವರ ಮೊದಲ ಕನ್ನಡ ಸಿನಿಮಾ. ಈ ಚಿತ್ರದಲ್ಲಿ ನಟ ಡಾಲಿ ಧನಂಜಯ್​ (Daali Dhananjay) ಹಾಗೂ ‘ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್​ ಅವರು ಮುಖ್ಯ ಪಾತ್ರಗಳನ್ನು ನಿಭಾಯಿಸುತ್ತಿದ್ದಾರೆ. ಸಿನಿಮಾದ ಪಾತ್ರವರ್ಗದ ಬಗ್ಗೆ ಚಿತ್ರತಂಡದಿಂದ ಹೊಸ ಹೊಸ ಅಪ್​ಡೇಟ್​ಗಳು ಸಿಗುತ್ತಿವೆ.

‘ಉತ್ತರಕಾಂಡ’ ಸಿನಿಮಾದಲ್ಲಿ ನಟಿ ಐಶ್ವರ್ಯಾ ರಾಜೇಶ್​ ಅವರು ಡಾಲಿ ಧನಂಜಯ್​ಗೆ ಜೋಡಿಯಾಗಿ ನಟಿಸುತ್ತಿದ್ದಾರೆ. ಅವರ ಪಾತ್ರದ ಹೆಸರು ದುರ್ಗಿ. ಆ ಪಾತ್ರದ ಪೋಸ್ಟರ್​ ಕೂಡ ಬಿಡುಗಡೆ ಆಗಲಿದೆ. ಅಲ್ಲದೇ ಶೂಟಿಂಗ್​ ಸೆಟ್​ನಿಂದ ಒಂದು ಫೋಟೋ ಕೂಡ ಲಭ್ಯವಾಗಿದೆ. ವಿಜಯಪುರದಲ್ಲಿ ಈ ಸಿನಿಮಾಗೆ ಮೊದಲ ಹಂತದ ಚಿತ್ರೀಕರಣ ನಡೆಯುತ್ತಿದೆ. ಬಾಲಿವುಡ್​ನ ಅಮಿತ್ ತ್ರಿವೇದಿ ಅವರು ಈ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ. ಅದ್ವೈತ್​ ಗುರುಮೂರ್ತಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಪ್ರೊಡಕ್ಷನ್ ವಿನ್ಯಾಸ ವಿಶ್ವಾಸ್‌ ಕಶ್ಯಪ್ ಅವರದ್ದು.

ಐಶ್ವರ್ಯಾ ರಾಜೇಶ್​ ಅವರು ಈಗಾಗಲೇ ಅನೇಕ ಸಿನಿಮಾಗಳಲ್ಲಿ ನಟಿಸಿ ಜನಪ್ರಿಯತೆ ಗಳಿಸಿದ್ದಾರೆ. ‘ದಿ ಗ್ರೇಟ್ ಇಂಡಿಯನ್ ಕಿಚನ್’, ‘ವಡಾ‌ ಚೆನ್ನೈ’, ‘ದಿ ವರ್ಲ್ಡ್ ಫೇಮಸ್ ಲವರ್’, ‘ಟಕ್ ಜಗದೀಶ್’ ಮುಂತಾದ ಸಿನಿಮಾಗಳಿಂದ ಅವರ ಖ್ಯಾತಿ ಹೆಚ್ಚಾಗಿದೆ. ಐಶ್ವರ್ಯಾ ರಾಜೇಶ್​ ಅವರು ಈಗ ‘ಉತ್ತರಕಾಂಡ’ ಸಿನಿಮಾದ ಮೂಲಕ ಕನ್ನಡದ ಪ್ರೇಕ್ಷಕರಿಗೂ ಪರಿಚಯಗೊಳ್ಳುತ್ತಿದ್ದಾರೆ.

ಇದನ್ನೂ ಓದಿ: ದೂದ್​ ಪೇಡಾ ಈಗ ‘ಮಿರ್ಚಿ ಮಲ್ಲಿಗೆ’; ‘ಉತ್ತರಕಾಂಡ’ ಸಿನಿಮಾದಲ್ಲಿ ದಿಗಂತ್ ಹೊಸ ಅವತಾರ

ಆ್ಯಕ್ಷನ್ ಡ್ರಾಮಾ ಶೈಲಿಯ ‘ಉತ್ತರಕಾಂಡ’ ಸಿನಿಮಾಗೆ ರೋಹಿತ್ ಪದಕಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಕಾರ್ತಿಕ್ ಗೌಡ ಹಾಗೂ ಯೋಗಿ‌ ಜಿ. ರಾಜ್ ಅವರು ‘ಕೆಆರ್​ಜಿ ಸ್ಟೂಡಿಯೋಸ್‌’ ಮೂಲಕ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚೈತ್ರಾ ಜೆ. ಆಚಾರ್, ರಂಗಾಯಣ ರಘು, ಯೋಗರಾಜ್ ಭಟ್, ಉಮಾಶ್ರೀ, ದಿಗಂತ್ ಮಂಚಾಲೆ, ಗೋಪಾಲಕೃಷ್ಣ ದೇಶಪಾಂಡೆ, ಮಲಯಾಳಂ ನಟ ವಿಜಯ್ ಬಾಬು ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸುತ್ತಿದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್