AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amulya: ಮೊದಲ ಸಲ ರೀಲ್ಸ್​ ಮಾಡಿದ ಅಮೂಲ್ಯ; ಲಂಗ ದಾವಣಿ ಧರಿಸಿ ವಿಶೇಷ ಹಾಡಿಗೆ ಹೆಜ್ಜೆ ಹಾಕಿದ ನಟಿ

Ane Madi Helutini song: ‘ಆಣೆ ಮಾಡಿ ಹೇಳುತೀನಿ..’ ಹಾಡು ಯೂಟ್ಯೂಬ್​ನಲ್ಲಿ 25 ಲಕ್ಷಕ್ಕಿಂತಲೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಈ ಹಾಡನ್ನು ಆಯ್ಕೆ ಮಾಡಿಕೊಂಡು ನಟಿ ಅಮೂಲ್ಯ ರೀಲ್ಸ್​ ಮಾಡಿದ್ದಾರೆ.

Amulya: ಮೊದಲ ಸಲ ರೀಲ್ಸ್​ ಮಾಡಿದ ಅಮೂಲ್ಯ; ಲಂಗ ದಾವಣಿ ಧರಿಸಿ ವಿಶೇಷ ಹಾಡಿಗೆ ಹೆಜ್ಜೆ ಹಾಕಿದ ನಟಿ
ಅಮೂಲ್ಯ
TV9 Web
| Edited By: |

Updated on:Jul 17, 2022 | 6:37 PM

Share

ಎಲ್ಲ ಸೆಲೆಬ್ರಿಟಿಗಳು ಸೋಶಿಯಲ್​ ಮೀಡಿಯಾದಲ್ಲಿ ಸಕ್ರಿಯವಾಗಿ ಇರುತ್ತಾರೆ. ತಮ್ಮ ದಿನಚರಿಯ ಬಗ್ಗೆ ಮಾಹಿತಿ ನೀಡಲು, ಹೊಸ ಸಿನಿಮಾ ಬಗ್ಗೆ ಅಪ್​ಡೇಟ್​ ಹಂಚಿಕೊಳ್ಳಲು, ನೆಚ್ಚಿನ ವ್ಯಕ್ತಿಗಳಿಗೆ ಶುಭಾಶಯ ಕೋರಲು ಸಾಮಾಜಿಕ ಜಾಲತಾಣವನ್ನು ನಟ-ನಟಿಯರು ಬಳಸುತ್ತಾರೆ. ನಟಿಯರು ಪ್ರತಿ ದಿನ ರೀಲ್ಸ್​ (Instagram Reels) ಮಾಡುವ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಾರೆ. ಆದರೆ ಅಮೂಲ್ಯ (Amulya) ಅವರು ರೀಲ್ಸ್​ ವಿಚಾರದಲ್ಲಿ ಕೊಂಚ ಹಿಂದುಳಿದುಕೊಂಡಿದ್ದರು. ಈಗ ಅವರು ಮೊದಲ ಬಾರಿಗೆ ಇನ್​ಸ್ಟಾಗ್ರಾಮ್​ನಲ್ಲಿ ರೀಲ್ಸ್​ ಮಾಡಿದ್ದಾರೆ. ಅದನ್ನು ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ‘ಗುರು ಶಿಷ್ಯರು’ ಸಿನಿಮಾದ ‘ಆಣೆ ಮಾಡಿ ಹೇಳುತೀನಿ..’ (Ane Madi Helutini song) ಹಾಡಿಗೆ ಅಮೂಲ್ಯ ಅವರು ರೀಲ್ಸ್​ ಮಾಡಿದ್ದಾರೆ. ಆ ಮೂಲಕ ಅವರು ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಲಂಗ ದಾವಣಿ ಧರಿಸಿ ಅವರು ಮನಮೋಹಕವಾಗಿ ಡ್ಯಾನ್ಸ್​ ಮಾಡಿದ್ದಾರೆ. ‘ಮೊದಲ ರೀಲ್ಸ್​ಗಾಗಿ ನನ್ನ ಫೇವರಿಟ್​ ಹಾಡು. ನಿರ್ಮಾಪಕ ತರುಣ್​ ಸುಧೀರ್​ ಹಾಗೂ ಇಡೀ ‘ಗುರು ಶಿಷ್ಯರು’ ಚಿತ್ರತಂಡಕ್ಕೆ ದೊಡ್ಡ ಯಶಸ್ಸು ಸಿಗಲು ಅಂತ ಹಾರೈಸುತ್ತೇನೆ’ ಎಂದು ಅಮೂಲ್ಯ ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
Amulya: ನಟಿ ಅಮೂಲ್ಯ ಅವರ ಕ್ಯೂಟ್ ಫೋಟೋಗಳ ಗ್ಯಾಲರಿ
Image
‘ಆಣೆ ಮಾಡಿ ಹೇಳುತೀನಿ..’ ಎಂದು ಲಂಗ ದಾವಣಿ ಚಾಲೆಂಜ್ ಸ್ವೀಕರಿಸಿದ ರಂಜನಿ ರಾಘವನ್
Image
ಮಗುವಿನ ಜತೆ ಮೊದಲ ಬಾರಿ ಫೋಟೋ ಹಂಚಿಕೊಂಡ ನಟಿ ಅಮೂಲ್ಯ; ಆದ್ರೂ ಫ್ಯಾನ್ಸ್ ಬೇಸರ
Image
ಅಮ್ಮ ಮತ್ತು ಅಜ್ಜಿ ಜತೆ ನಿವೇದಿತಾ ಗೌಡ ರೀಲ್ಸ್​; ಕಮೆಂಟ್​ ಮೂಲಕ ಅಚ್ಚರಿ ವ್ಯಕ್ತಪಡಿಸಿದ ಫ್ಯಾನ್ಸ್​

‘ಗುರು ಶಿಷ್ಯರು’ ಸಿನಿಮಾದಲ್ಲಿ ಶರಣ್​ ಹಾಗೂ ನಿಶ್ವಿಕಾ ನಾಯ್ಡು ಅವರು ಜೋಡಿಯಾಗಿ ನಟಿಸಿದ್ದಾರೆ. ಈ ಸಿನಿಮಾ ‘ಆಣೆ ಮಾಡಿ ಹೇಳುತೀನಿ ನಾನು ನಿನ್ನವಳು..’ ಹಾಡು ಜನಮನ ಗೆದ್ದಿದೆ. ಯೂಟ್ಯೂಬ್​ನಲ್ಲಿ ಈ ಹಾಡು ಈವರೆಗೂ 25 ಲಕ್ಷಕ್ಕಿಂತಲೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಅಜನೀಶ್​ ಬಿ. ಲೋಕನಾಥ್​ ಅವರ ಸಂಗೀತ ನಿರ್ದೇಶನದಲ್ಲಿ ಮೂಡಿಬಂದ ಈ ಗೀತೆ ಸೂಪರ್​ ಹಿಟ್​ ಆಗಿದೆ. ಅದೇ ಹಾಡನ್ನು ಆಯ್ಕೆ ಮಾಡಿಕೊಂಡು ಅಮೂಲ್ಯ ರೀಲ್ಸ್​ ಮಾಡಿದ್ದಾರೆ.

View this post on Instagram

A post shared by Amulya (@nimmaamulya)

ಈ ವರ್ಷ ಮಾರ್ಚ್​ ತಿಂಗಳಲ್ಲಿ ಅಮೂಲ್ಯ ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದರು. ತಾಯಿ ಆದ ಬಳಿಕ ಅವರು ಫಿಟ್ನೆಸ್​ ಕಡೆಗೆ ಹೆಚ್ಚು ಗಮನ ಹರಿಸಿದರು. ಈಗ ಅವರನ್ನು ನೋಡಿ ಫ್ಯಾನ್ಸ್​ ಅಚ್ಚರಿಪಟ್ಟಿದ್ದಾರೆ. ‘ನೀವು ಎರಡು ಮಕ್ಕಳ ತಾಯಿ ಅಂತ ನಂಬಲು ಸಾಧ್ಯವಾಗುತ್ತಿಲ್ಲ’ ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ. ಮದುವೆ ಬಳಿಕ ಅಮೂಲ್ಯ ಅವರು ನಟನೆಯಿಂದ ಕೊಂಚ ದೂರ ಉಳಿದುಕೊಂಡಿದ್ದಾರೆ. ಆದಷ್ಟು ಬೇಗ ಅವರು ಕಮ್​ಬ್ಯಾಕ್​ ಮಾಡಲಿ ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ.

Published On - 6:36 pm, Sun, 17 July 22

ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?