ಬಾಲನಟಿಯಾಗಿಯೇ ಚಿತ್ರರಂಗಕ್ಕೆ ಕಾಲಿಟ್ಟವರು ಅಮೂಲ್ಯ. ನಂತರ ಅವರು ‘ಚೆಲುವಿನ ಚಿತ್ತಾರ’ ಸಿನಿಮಾ ಮೂಲಕ ಹೀರೋಯಿನ್ ಆಗಿ ಬಡ್ತಿ ಪಡೆದುಕೊಂಡರು. ಚಿಕ್ಕ ವಯಸ್ಸಿನಲ್ಲಿಯೇ ಸ್ಟಾರ್ ಹೀರೋಯಿನ್ ಆಗಿ ಮಿಂಚಿದರು. ಗಣೇಶ್, ಯಶ್, ಲವ್ಲೀ ಸ್ಟಾರ್ ಪ್ರೇಮ್, ಕೃಷ್ಣ ಅಜಯ್ ರಾವ್, ದುನಿಯಾ ವಿಜಯ್ ಮುಂತಾದ ಸ್ಟಾರ್ ಕಲಾವಿದರಿಗೆ ಅವರು ಜೋಡಿಯಾಗಿ ನಟಿಸಿದರು. ‘ನಾನು ನನ್ನ ಕನಸು’ ಸಿನಿಮಾದಲ್ಲಿ ಬಹುಭಾಷಾ ಕಲಾವಿದ ಪ್ರಕಾಶ್ ರೈ ಜತೆ ತೆರೆಹಂಚಿಕೊಂಡು ಮೆಚ್ಚುಗೆ ಗಳಿಸಿದರು. ಹೀಗೆ ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇರುವಾಗಲೇ ಅವರು 2017ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ರಾಜಕೀಯ ಹಿನ್ನೆಲೆಯ ಕುಟುಂಬದವರಾದ ಜಗದೀಶ್ ಜತೆ ಅಮೂಲ್ಯ ಮದುವೆ 2017ರಲ್ಲಿ ನೆರವೇರಿತು. ಈಗ ಈ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ‘ನಾವೀಗ ಕೇವಲ ಇಬ್ಬರಲ್ಲ’ ಎಂಬ ಕ್ಯಾಪ್ಷನ್ ಮೂಲಕ ಅಮೂಲ್ಯ ಸಿಹಿ ಸುದ್ದಿ ನೀಡಿದ್ದಾರೆ. ಈ ಗುಡ್ ನ್ಯೂಸ್ ನೀಡಲು ಅವರು ಮಾಡಿಸಿರುವ ಫೋಟೋಶೂಟ್ ಗಮನ ಸೆಳೆಯುತ್ತಿದೆ.
2017ರ ಬಳಿಕ ಅಮೂಲ್ಯ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಸದ್ಯಕ್ಕೆ ಅವರು ಪೂರ್ಣ ಪ್ರಮಾಣದಲ್ಲಿ ಹೀರೋಯಿನ್ ಆಗಿ ನಟಿಸಿದ ಕೊನೇ ಸಿನಿಮಾ ‘ಮಾಸ್ತಿಗುಡಿ’. 2017ರಲ್ಲಿ ತೆರೆಕಂಡ ‘ಮುಗುಳು ನಗೆ’ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದ್ದರು.
ಇದನ್ನೂ ಓದಿ:
Kavya Gowda: ಮದುವೆ ಪೂರ್ವ ಶಾಸ್ತ್ರಗಳಲ್ಲಿ ಮಿಂಚಿದ ನಟಿ ಕಾವ್ಯಾ ಗೌಡ
4 ನಾಯಿ ಮರಿಗಳ ಕತ್ತು ಕೊಯ್ದು ಹತ್ಯೆ: ನಟಿ ಅಮೂಲ್ಯ ಪತಿ ಜಗದೀಶ್ ಆಕ್ರೋಶ, ಪಶುಸಂಗೋಪನೆ ಇಲಾಖೆ ಸ್ಪಂದನೆ