ನಟಿ ಎಸ್ತರ್ ನಿರ್ದೇಶಿಸಿ, ನಿರ್ಮಿಸಿರುವ ‘ದಿ ವೇಕೆಂಟ್ ಹೌಸ್’ ಬಿಡುಗಡೆಗೆ ರೆಡಿ

|

Updated on: Nov 16, 2023 | 7:05 PM

The Vacant House: ನಟಿಯಾಗಿ ಕನ್ನಡ ಸೇರಿದಂತೆ ತೆಲುಗು, ತುಳು ಸಿನಿಮಾಗಳಲ್ಲಿ ನಟಿಸಿರುವ ನಟಿ ಎಸ್ತರ್ ನರೋನ್ಹಾ ಸಿನಿಮಾ ಒಂದನ್ನು ನಿರ್ದೇಶಿಸಿ, ನಿರ್ಮಾಣವನ್ನೂ ಮಾಡಿದ್ದಾರೆ. ಸಿನಿಮಾದ ಹೆಸರು ‘ದಿ ವೇಕೆಂಟ್ ಹೌಸ್’ ಈ ಸಿನಿಮಾ ನವೆಂಬರ್ 17ರಂದು ಬಿಡುಗಡೆ ಆಗುತ್ತಿದೆ.

ನಟಿ ಎಸ್ತರ್ ನಿರ್ದೇಶಿಸಿ, ನಿರ್ಮಿಸಿರುವ ‘ದಿ ವೇಕೆಂಟ್ ಹೌಸ್’ ಬಿಡುಗಡೆಗೆ ರೆಡಿ
Follow us on

ಕನ್ನಡ ಸೇರಿದಂತೆ ಇತರೆ ಭಾಷೆಗಳ ಚಿತ್ರರಂಗದಲ್ಲಿಯೂ (Sandalwood) ನಿರ್ದೇಶಕಿಯರು ಇತ್ತೀಚೆಗೆ ಹೆಚ್ಚು-ಹೆಚ್ಚು ಮುನ್ನಲೆಗೆ ಬರುತ್ತಿದ್ದಾರೆ. ಕನ್ನಡದಲ್ಲಿ ಈಗಾಗಲೇ ಕೆಲವು ನಿರ್ದೇಶಕಿಯರು ತಮ್ಮ ಪ್ರತಿಭೆ ಪ್ರದರ್ಶಿಸಿದ್ದಾರೆ. ತಮಿಳಿನಲ್ಲಿ ಸುಧಾ ಕೊಂಗರ ಎರಡು ಅದ್ಭುತ ಸಿನಿಮಾಗಳನ್ನು ನೀಡಿದ್ದು, ಮೂರನೇ ಸಿನಿಮಾಕ್ಕೆ ಅಣಿಯಾಗಿದ್ದಾರೆ. ಹಿಂದಿಯಲ್ಲಿ ಫರ್ಹಾ ಖಾನ್, ಜೋಯಾ ಅಖ್ತರ್ ಇನ್ನೂ ಕೆಲವರು ಭಿನ್ನ ರೀತಿಯ ಸಿನಿಮಾಗಳನ್ನು ನೀಡುತ್ತಿದ್ದಾರೆ. ಇದೀಗ ಬಹುಭಾಷಾ ನಟಿಯಾಗಿದ್ದವರೊಬ್ಬರು ತಾವೇ ಸಿನಿಮಾ ನಿರ್ದೇಶಿಸಿ ಬಿಡುಗಡೆಗೆ ಸಿದ್ಧವಾಗಿದ್ದಾರೆ.

ದಕ್ಷಿಣದ ಕೆಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿರುವ ಎಸ್ತರ್ ನರೋನ್ಹಾ ‘ದಿ ವೆಕೆಂಟ್ ಹೌಸ್’ ಹೆಸರಿನ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ನವೆಂಬರ್ 17ಕ್ಕೆ ರಾಜ್ಯದಾದ್ಯಂತ ಬಿಡುಗಡೆ ಆಗಲಿದೆ. ಸಿನಿಮಾದ ಟ್ರೇಲರ್ ಹಾಗೂ ಹಾಡುಗಳು ಈಗಾಗಲೇ ಬಿಡುಗಡೆ ಆಗಿದ್ದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿ, ಪ್ರೇಕ್ಷಕರ ಗಮನಸೆಳೆದಿವೆ. ‘ನಾವಿಕ’, ‘ಅತಿರಥ’, ‘ನುಗ್ಗೇಕಾಯಿ’, ‘ಲೋಕಲ್ ಟ್ರೈನ್’, ‘ಲಂಕೆ’ ಇನಾಮ್ದಾರ್ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಎಸ್ತರ್ ನರೋನ್ಹಾ ‘ದಿ ವೆಕೆಂಟ್ ಹೌಸ್’ ಸಿನಿಮಾ ನಿರ್ದೇಶಿಸಿ, ನಟಿಸಿರುವುದರ ಜೊತೆಗೆ ಸಂಗೀತ ನಿರ್ದೇಶನ, ನಿರ್ಮಾಣದ ಜವಾಬ್ದಾರಿಯನ್ನು ಕೂಡ ನಿಭಾಯಿಸಿದ್ದಾರೆ.

ಇದನ್ನೂ ಓದಿ:‘‘ರೆಸ್ಟೋರೆಂಟ್​ನ ಟೇಬಲ್​ಗಳಿಗಿಂತಲೂ ಹೆಚ್ಚು ಸಂಖ್ಯೆಯ ನಟರು ಆ ನಿರ್ದೇಶಕಿಯ ಕತೆಯನ್ನು ಒಲ್ಲೆ ಎಂದಿದ್ದರು’’

‘ದಿ ವೆಕೆಂಟ್ ಹೌಸ್’ ಸಿನಿಮಾ ಕನ್ನಡ ಮಾತ್ರವೇ ಅಲ್ಲದೆ ಕೊಂಕಣಿ ಭಾಷೆಯಲ್ಲಿ ಮೂಡಿಬಂದಿದೆ. ಸಿನಿಮಾಕ್ಕೆ ನರೇಂದ್ರ ಗೌಡ ಕ್ಯಾಮೆರಾ ಮ್ಯಾನ್ ಆಗಿ ಕೆಲಸ ಮಾಡಿದ್ದಾರೆ. ಸಂಕಲನ ಮಾಡಿರುವುದು ವಿಜಯ್ ರಾಜ್. ‘ದಿ ವೆಕೆಂಟ್ ಹೌಸ್’ ಸಿನಿಮಾವನ್ನು ಬಹುತೇಕ ಮಂಗಳೂರಿನಲ್ಲಿ ಚಿತ್ರೀಕರಣ ಮಾಡಲಾಗಿದೆ. ಖಾಲಿ ಮನೆಯ ಸುತ್ತ ನಡೆಯುವ ಘಟನೆ ಆಧರಿತ ಸಿನಿಮಾ ಮಾಡಲಾಗಿದೆ. ಈ ಸಿನಿಮಾವು ನವೆಂಬರ್ 17ಕ್ಕೆ ಸುಮಾರು 75 ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ.

‘ದಿ ವೆಕೆಂಟ್ ಹೌಸ್’ ಸಿನಿಮಾದ ನಟಿ, ನಿರ್ದೇಶಕಿ ಎಸ್ತರ್‌ ನರೋನ್ಹಾ ಮೂಲತಃ ಮಂಗಳೂರಿನವರು ಆದರೆ ಬೆಳೆದಿದ್ದೆಲ್ಲ ಮುಂಬೈನಲ್ಲಿ. ‘ಉಸಿರಿಗಿಂತ ನೀನೇ ಹತ್ತಿರ’ ಎಂಬ ಕನ್ನಡ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಪ್ರವೇಶ ಮಾಡಿದ್ದಾರೆ. ಬಾಲಿವುಡ್‌ನ ಖ್ಯಾತ ನಟ ಅನುಪಮ್ ಖೇರ್ ನಟನಾ ಶಾಲೆಯಲ್ಲಿ ತರಬೇತಿ ಪಡೆದು ಹಿಂದಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಎಸ್ತರ್ ಬಳಿಕ ತೆಲುಗು, ತುಳು ಸಿನಿಮಾಗಳಲ್ಲೂ ನಟಿಸಿದರು. ನಟನೆ ಬಳಿಕ ಇದೀಗ ನಿರ್ದೇಶಕನ್ನೂ ಕೈ ಹಾಕಿರುವ ಎಸ್ತರ್ ‘ದಿ ವೆಕೆಂಟ್ ಹೌಸ್’ ಸಿನಿಮಾ ನಿರ್ದೇಶಿಸಿ ನಟಿಸಿ ತಮ್ಮದೇ ಜಾನೆಟ್ ನೊರೊನ್ಹಾ ಪ್ರೊಡಕ್ಷನ್ಸ್ ನಿರ್ಮಾಣ ಸಂಸ್ಥೆ ಮೂಲಕ ನಿರ್ಮಾಣ ಮಾಡಿದ್ದಾರೆ. ‘ದಿ ವೆಕೆಂಟ್ ಹೌಸ್’ ಸಿನಿಮಾವನ್ನು ಚಂದನ್ ಫಿಲ್ಮಂಸ್ ರಾಜ್ಯಾದ್ಯಂತ ಬಿಡುಗಡೆ ಮಾಡಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ