AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hariprriya: ‘ಅಮೃತಮತಿ’ ಚಿತ್ರದ ಪಾತ್ರಕ್ಕಾಗಿ ನಟಿ ಹರಿಪ್ರಿಯಾಗೆ ‘ಹಾಲಿವುಡ್’ ಪ್ರಶಸ್ತಿ

ಕನ್ನಡದ ಪ್ರಾಚೀನ ಕೃತಿಯಾದ ‘ಯಶೋಧರ ಚರಿತೆ'ಯ ಪ್ರಸಂಗವನ್ನು ಆಧರಿಸಿ ‘ಅಮೃತಮತಿ' ಚಿತ್ರ ಸಿದ್ಧವಾಗಿದೆ. ಬರಗೂರು ಅವರ ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶಿಸಿದ್ದಾರೆ.

Hariprriya: ‘ಅಮೃತಮತಿ’ ಚಿತ್ರದ ಪಾತ್ರಕ್ಕಾಗಿ ನಟಿ ಹರಿಪ್ರಿಯಾಗೆ ‘ಹಾಲಿವುಡ್’ ಪ್ರಶಸ್ತಿ
ಹರಿಪ್ರಿಯಾ
ರಾಜೇಶ್ ದುಗ್ಗುಮನೆ
|

Updated on:Jul 06, 2021 | 9:25 PM

Share

ನಟಿ ಹರಿಪ್ರಿಯಾ ತಮ್ಮ ನಟನೆ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈಗ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಅಮೃತಮತಿ’ ಚಿತ್ರ ‘ಹಾಲಿವುಡ್ ಅಂತರಾಷ್ಟ್ರೀಯ ಗೋಲ್ಡನ್ ಏಜ್ ಚಿತ್ರೋತ್ಸವ’ದಲ್ಲಿ ಪ್ರದರ್ಶನ ಕಂಡಿದ್ದು, ಹರಿಪ್ರಿಯಾಗೆ ಶ್ರೇಷ್ಠನಟಿ ಪ್ರಶಸ್ತಿ ಸಿಕ್ಕಿದೆ. ಈ ಮೂಲಕ ಕನ್ನಡದ ಮತ್ತೊಂದು ಸಿನಿಮಾ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ.  

‘ಅಮೃತಮತಿ’ ಚಿತ್ರ ಈ ಮೊದಲು ‘ಅಟ್ಲಾಂಟ ಅಂತರಾಷ್ಟ್ರೀಯ ಚಿತ್ರೋತ್ಸವ’ದಲ್ಲಿ ಶ್ರೇಷ್ಠ ವಿದೇಶಿ ಭಾಷೆಯ ಚಿತ್ರವೆಂಬ ಪ್ರಶಸ್ತಿ ಗಳಿಸಿತ್ತು. ಲಾಸ್ ಏಂಜಲೀಸ್ ಸನ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಶ್ರೇಷ್ಠ ಚಿತ್ರ ಮತ್ತು ಬರಗೂರರಿಗೆ ಶ್ರೇಷ್ಠ ಚಿತ್ರಕತೆ ಪ್ರಶಸ್ತಿ ಲಭಿಸಿತ್ತು. ಈಗ ಈ ಚಿತ್ರಕ್ಕೆ ಮತ್ತೊಂದು ಪ್ರಶಸ್ತಿ ಸಿಕ್ಕಂತಾಗಿದೆ. ಇಲ್ಲಿವರಗೆ ಈ ಚಿತ್ರವು ಹತ್ತಕ್ಕೂ ಹೆಚ್ಚು ಅಂತರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆಯಾಗಿ ಪ್ರದರ್ಶನ ಕಂಡಿರೋದು ವಿಶೇಷ.

ಕನ್ನಡದ ಪ್ರಾಚೀನ ಕೃತಿಯಾದ ‘ಯಶೋಧರ ಚರಿತೆ’ಯ ಪ್ರಸಂಗವನ್ನು ಆಧರಿಸಿ ‘ಅಮೃತಮತಿ’ ಚಿತ್ರ ಸಿದ್ಧವಾಗಿದೆ. ಬರಗೂರು ಅವರ ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶಿಸಿದ್ದಾರೆ.  ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಸಂಕಲನಕಾರರಾಗಿ ಸುರೇಶ ಅರಸು, ಛಾಯಾಗ್ರಾಹಕರಾಗಿ ನಾಗರಾಜ ಆದವಾನಿ, ಸಂಗೀತ ನಿರ್ದೇಶಕರಾಗಿ ಶಮಿತಾ ಮಲ್ನಾಡ್ ಕಾರ್ಯ ನಿರ್ವಹಿಸಿದ್ದಾರೆ. ಯಶೋಧರನ ಪಾತ್ರದಲ್ಲಿ ನಟ ಕಿಶೋರ್ ಅಭಿನಯಿಸಿದ್ದಾರೆ. ಸುಂದರರಾಜ್, ಪ್ರಮೀಳಾ ಜೋಷಾಯ್ ತಿಲಕ್, ಸುಪ್ರಿಯಾರಾವ್, ವತ್ಸಲಾಮೋಹನ್, ಅಂಬರೀಷ್​ ಸಾರಂಗಿ ಮೊದಲಾದವರು ಚಿತ್ರದಲ್ಲಿ ನಟಿಸಿದ್ದಾರೆ. ಶೀಘ್ರವೇ ಈ ಸಿನಿಮಾ ಚಿತ್ರಮಂದಿರಗಳಲ್ಲಿ ರಿಲೀಸ್​ ಆಗಲಿದೆ.

ನಟಿ ಹರಿಪ್ರಿಯಾ ಕೈಯಲ್ಲಿ ಸದ್ಯ ಸಾಲು ಸಾಲು ಸಿನಿಮಾಗಳಿವೆ. ಸತೀಶ್​ ನೀನಾಸಂ ನಟನೆಯ ‘ಪೆಟ್ರೋಮ್ಯಾಕ್ಸ್’ ಚಿತ್ರಕ್ಕೆ ಹರಿಪ್ರಿಯಾ ನಾಯಕಿ. ಬೆಲ್​ ಬಾಟಂ 2 ಸೇರಿ 7-8 ಪ್ರಾಜೆಕ್ಟ್​ಗಳಲ್ಲಿ ಅವರು ಬ್ಯುಸಿ ಇದ್ದಾರೆ. ಕೊವಿಡ್​ ಕಾರಣದಿಂದ ಸಿನಿಮಾ ಕೆಲsಗಳು ಅರ್ಧಕ್ಕೆ ನಿಂತಿದ್ದವು. ಈಗ ಕೊವಿಡ್​ ಕಡಿಮೆ ಆಗಿದ್ದು, ಹರಿಪ್ರಿಯಾ ಶೂಟಿಂಗ್​ನಲ್ಲಿ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ: ಉಗ್ರಂ ಹರಿಪ್ರಿಯಾ ಪಾತ್ರಕ್ಕೂ ಸಲಾರ್​ ಶ್ರುತಿ ಹಾಸನ್​ ಪಾತ್ರಕ್ಕೂ ಇದೆ ಅಜಗಜಾಂತರ ವ್ಯತ್ಯಾಸ

Published On - 7:38 pm, Tue, 6 July 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು