Meena: ಬಹುಭಾಷಾ ನಟಿ ಮೀನಾ ಪತಿ ವಿದ್ಯಾಸಾಗರ್​​ ಇನ್ನಿಲ್ಲ; ಶ್ವಾಸಕೋಶದ ಸೋಂಕಿನಿಂದ ನಿಧನ

Vidyasagar Death: ನಟಿ ಮೀನಾ ಪತಿ ವಿದ್ಯಾಸಾಗರ್​ ಅವರು ಚೆನ್ನೈನ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ. ಅನಾರೋಗ್ಯದಿಂದ ಅವರು ಮೃತಪಟ್ಟಿದ್ದಾರೆ.

Meena: ಬಹುಭಾಷಾ ನಟಿ ಮೀನಾ ಪತಿ ವಿದ್ಯಾಸಾಗರ್​​ ಇನ್ನಿಲ್ಲ; ಶ್ವಾಸಕೋಶದ ಸೋಂಕಿನಿಂದ ನಿಧನ
ಮೀನಾ, ವಿದ್ಯಾಸಾಗರ್
Follow us
TV9 Web
| Updated By: ಮದನ್​ ಕುಮಾರ್​

Updated on:Jun 29, 2022 | 7:28 AM

ಜನಪ್ರಿಯ ನಟಿ ಮೀನಾ (Meena) ಅವರ ಬಾಳಿನಲ್ಲಿ ಕತ್ತಲು ಆವರಿಸಿದೆ. ಅವರ ಪತಿ ವಿದ್ಯಾಸಾಗರ್ ನಿಧನರಾಗಿದ್ದಾರೆ. ಬಹುಭಾಷೆಯ ಸಿನಿಮಾಗಳಲ್ಲಿ ನಟಿಸಿ ಫೇಮಸ್​ ಆದ ಮೀನಾ ಅವರು 2009ರಲ್ಲಿ ಬೆಂಗಳೂರು ಮೂಲದ ಉದ್ಯಮಿ ವಿದ್ಯಾಸಾಗರ್​ ಅವರನ್ನು ವಿವಾಹವಾಗಿದ್ದರು. ಇತ್ತೀಚೆಗೆ ಶ್ವಾಸಕೋಶದ ಸೋಂಕಿಗೆ (Lung Infection) ಒಳಗಾಗಿದ್ದ ವಿದ್ಯಾಸಾಗರ್​ ಅವರು ಚೆನ್ನೈನ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ. ಅವರ ನಿಧನಕ್ಕೆ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ. ಪತ್ನಿ ಮತ್ತು ಮಗಳನ್ನು ಅವರು ಅಗಲಿದ್ದಾರೆ. ವಿದ್ಯಾಸಾಗರ್​ ಇನ್ನಿಲ್ಲ (Vidyasagar Death) ಎಂಬ ಸುದ್ದಿ ತಿಳಿದು ಅನೇಕ ಸೆಲೆಬ್ರಿಟಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸೋಶಿಯಲ್​ ಮೀಡಿಯಾ ಮೂಲಕ ಎಲ್ಲರೂ ಪ್ರಾರ್ಥಿಸಿದ್ದಾರೆ. ವೀನಾ ಕುಟುಂಬಕ್ಕೆ ಸಾಂತ್ವನ ಹೇಳಲಾಗುತ್ತಿದೆ.

ಮೀನಾ ಜೊತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಖ್ಯಾತ ನಟ ಶರತ್​ ಕುಮಾರ್​ ಅವರು ವಿದ್ಯಾಸಾಗರ್​ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ‘ಮೀನಾ ಪತಿ ವಿದ್ಯಾಸಾಗರ್​ ಅವರ ಅಕಾಲಿಕ ಮರಣದ ಸುದ್ದಿ ತಿಳಿದು ಆತಂಕ ಆಯಿತು. ಮೀನಾ ಅವರಿಗೆ ನಮ್ಮ ಕುಟುಂಬದಿಂದ ಸಾಂತ್ವನಗಳು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಶರತ್​ ಕುಮಾರ್​ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ
Image
ಖ್ಯಾತ ಹಾಸ್ಯ ನಟ ನರಸಿಂಹ ರಾಜು ಹಿರಿಯ ಪುತ್ರಿ ಧರ್ಮವತಿ ಇನ್ನಿಲ್ಲ; ಹೃದಯಾಘಾತದಿಂದ ನಿಧನ
Image
ಯೋಗರಾಜ್ ಭಟ್ ಮಾವ, ಸ್ಯಾಂಡಲ್​ವುಡ್ ಕಲಾವಿದ ಸತ್ಯ ನಾರಾಯಣ್ ಹೃದಯಾಘಾತದಿಂದ ನಿಧನ
Image
KK Death: ಸಾವಿಗಿಂತ ಕೆಲವೇ ನಿಮಿಷಗಳ ಮುನ್ನ ವೇದಿಕೆ ತೊರೆದಿದ್ದ ಗಾಯಕ ಕೆಕೆ; ಇಲ್ಲಿದೆ ವೈರಲ್​ ವಿಡಿಯೋ
Image
Edava Basheer Death: ಹಾಡುವಾಗಲೇ ವೇದಿಕೆಯಲ್ಲಿ ಕುಸಿದು ಬಿದ್ದು ಆರ್ಕೆಸ್ಟ್ರಾ ಗಾಯಕ ಎಡವ ಬಶೀರ್​ ನಿಧನ; ವಿಡಿಯೋ ವೈರಲ್​

ಕೊರೊನಾದಿಂದಲೇ ವಿದ್ಯಾಸಾಗರ್​ ಅವರಿಗೆ ಶ್ವಾಸಕೋಶದ ಸೋಂಕು ಉಂಟಾಗಿರಬಹುದೇ ಎಂಬ ಅನುಮಾನ ಮೂಡಿದೆ. ಯಾಕೆಂದರೆ, ಈ ವರ್ಷ ಆರಂಭದಲ್ಲಿ ಮೀನಾ ಅವರ ಇಡೀ ಕುಟುಂಬಕ್ಕೆ ಕೊವಿಡ್​ ತಗುಲಿತ್ತು. ಆ ಬಗ್ಗೆ ಅವರು ಸೋಶಿಯಲ್​ ಮೀಡಿಯಾಲ್ಲಿ ಬರೆದುಕೊಂಡಿದ್ದರು. ಕೊವಿಡ್​ ಬಂದುಹೋದ ಬೆನ್ನಲ್ಲೇ ಅವರಿಗೆ ಈ ರೀತಿ ಆರೋಗ್ಯ ಸಮಸ್ಯೆ ಎದುರಾಗಿದ್ದರಿಂದ ಅನುಮಾನ ಮೂಡಿದೆ.

‘2022ರಲ್ಲಿ ನಮ್ಮ ಮನೆಗೆ ಬಂದ ಮೊದಲ ಅತಿಥಿ ಮಿಸ್ಟರ್ ಕೊರೊನಾ. ಅದಕ್ಕೆ ನನ್ನ ಇಡೀ ಕುಟುಂಬ ಇಷ್ಟ ಆಗಿದೆ. ಆದರೆ ಅದು ಉಳಿದುಕೊಳ್ಳಲು ನಾನು ಬಿಡುತ್ತಿಲ್ಲ. ಎಚ್ಚರಿಕೆಯಿಂದಿರಿ ಜನಗಳೇ.. ಸುರಕ್ಷತೆ ಮತ್ತು ಆರೋಗ್ಯ ಕಾಪಾಡಿಕೊಳ್ಳಿ. ಜವಾಬ್ದಾರಿಯಿಂದ ನಡೆದುಕೊಳ್ಳಿ. ಕೊರೊನಾ ಹರಡಲು ಬಿಡಬೇಡಿ’ ಎಂದು ಮೀನಾ ಪೋಸ್ಟ್​ ಮಾಡಿದ್ದರು.

ಇದನ್ನೂ ಓದಿ: ‘ಐಫಾ 2022’ ಸಮಾರಂಭದಲ್ಲಿ ಎಸ್​ಪಿಬಿ, ಲತಾಜೀ, ಕೆಕೆ ನಿಧನದ ಬಗ್ಗೆ ಮಾತನಾಡಿದ ಎ.ಆರ್​. ರೆಹಮಾನ್​

Anekal Balaraj Death: ‘ಕರಿಯ’ ಸಿನಿಮಾ ನಿರ್ಮಾಪಕ ಆನೇಕಲ್​ ಬಾಲರಾಜ್​ ಇನ್ನಿಲ್ಲ; ಬೆಂಗಳೂರಿನಲ್ಲಿ ಅಪಘಾತದಿಂದ ನಿಧನ

Published On - 7:13 am, Wed, 29 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ