ಪಿಎಚ್​​ಡಿ ಕನಸು ನನಸು ಮಾಡಿಕೊಳ್ಳಲು ಮೊದಲ ಹೆಜ್ಜೆ ಇಟ್ಟ ನಟಿ ಪವಿತ್ರಾ ಲೋಕೇಶ್

| Updated By: ರಾಜೇಶ್ ದುಗ್ಗುಮನೆ

Updated on: Aug 04, 2023 | 2:26 PM

ನಟಿ ಪವಿತ್ರಾ ಲೋಕೇಶ್ ಅವರು ಭಾಷಾ ವಿಭಾಗದಡಿ ಬೆಳಗಾವಿ ವಿಸ್ತರಣಾ ಕೇಂದ್ರದಲ್ಲಿ ಸಂಶೋಧನೆ ಕೈಗೊಳ್ಳಲು ಪರೀಕ್ಷೆ ಬರೆದಿದ್ದರು. ಕಳೆದ ಮೇ 30ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆದಿತ್ತು.

ಪಿಎಚ್​​ಡಿ ಕನಸು ನನಸು ಮಾಡಿಕೊಳ್ಳಲು ಮೊದಲ ಹೆಜ್ಜೆ ಇಟ್ಟ ನಟಿ ಪವಿತ್ರಾ ಲೋಕೇಶ್
ಪವಿತ್ರಾ ಲೋಕೇಶ್
Follow us on

ನಟಿ ಪವಿತ್ರಾ ಲೋಕೇಶ್ (Pavitra Lokesh) ಅವರಿಗೆ ಪಿಎಚ್​​ಡಿ ಮಾಡಬೇಕು ಎಂಬ ಕನಸಿದೆ. ಇದನ್ನು ಅವರು ಅನೇಕ ಸುದ್ದಿಗೋಷ್ಠಿಗಳಲ್ಲಿ ಹೇಳಿಕೊಂಡಿದ್ದರು. ಈಗ ಕನ್ನಡ ವಿಶ್ವವಿದ್ಯಾಲಯದ ಪಿಎಚ್‌ಡಿ ಸಾಮಾನ್ಯ ಪ್ರವೇಶ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಪವಿತ್ರಾ ಲೋಕೇಶ್ ಸೇರಿದಂತೆ 259 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ನಟಿ ಪವಿತ್ರಾ ಲೋಕೇಶ್ ಅವರು ಭಾಷಾ ವಿಭಾಗದಡಿ ಬೆಳಗಾವಿ ವಿಸ್ತರಣಾ ಕೇಂದ್ರದಲ್ಲಿ ಸಂಶೋಧನೆ ಕೈಗೊಳ್ಳಲು ಪರೀಕ್ಷೆ ಬರೆದಿದ್ದರು. ಕಳೆದ ಮೇ 30ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆದಿತ್ತು. ಈಗ ಅವರು ಉತ್ತೀರ್ಣರಾಗಿದ್ದಾರೆ.

ಕನ್ನಡ ವಿವಿಯಲ್ಲಿ ವಿಜ್ಞಾನ ವಿಭಾಗದ ಹೊರತಾಗಿ ಭಾಷಾ ವಿಭಾಗ, ಸಮಾಜ ವಿಜ್ಞಾನ ಮತ್ತು ಲಲಿತಾ ಕಲೆ ವಿಭಾಗ ಸೇರಿ ವಿವಿಧ ವಿಭಾಗಗಳಡಿ ಸಂಶೋಧನೆಗೆ ಅವಕಾಶ ಕಲ್ಪಿಸಲಾಗುತ್ತದೆ. ಮೂರು ವಿಭಾಗಗಳ ಅಡಿ ಸಂಶೋಧನೆಗೆ ಆಸಕ್ತಿ ತೋರಿ 981 ಸ್ಪರ್ಧಿಗಳು ಸಾಮಾನ್ಯ ಪ್ರವೇಶ ಪರೀಕ್ಷೆ ಎದುರಿಸಿದ್ದರು. ಆ ಪೈಕಿ ಒಟ್ಟು 259 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಕನ್ನಡ ವಿವಿ ಕುಲಸಚಿವ ಡಾ.ಸುಬ್ಬಣ್ಣ ರೈ ಮಾಹಿತಿ ನೀಡಿದ್ದಾರೆ.

ಕನ್ನಡ ವಿವಿ ವ್ಯಾಪ್ತಿಯ ಅಧ್ಯಯನ ವಿಭಾಗ, ಮಾನ್ಯತಾ ಕೇಂದ್ರ ಹಾಗೂ ವಿಸ್ತರಣಾ ಕೇಂದ್ರಗಳಲ್ಲಿ ಲಭ್ಯವಿರುವ ಸ್ಥಾನ ಮತ್ತು ಮಾರ್ಗದರ್ಶಕರ ಸಂಖ್ಯೆಗೆ ಅನುಗುಣವಾಗಿ ಸೀಟು ಹಂಚಿಕೆ ಮಾಡಲಾಗುತ್ತದೆ ಎಂದು ಡಾ.ಸುಬ್ಬಣ್ಣ ರೈ ತಿಳಿಸಿದ್ದಾರೆ.

ಇದನ್ನೂ ಓದಿ: ‘ನನ್ನ ಖುಷಿಯಿಂದ ನೋಡಿಕೊಂಡ್ರೆ ಸಾಕು ಎಂದಿದ್ದೆ’; ನರೇಶ್ ಕೇಳಿದ್ದ ಮೊದಲ ಪ್ರಶ್ನೆಗೆ ಪವಿತ್ರಾ ಲೋಕೇಶ್ ಉತ್ತರ

ಪವಿತ್ರಾ ಲೋಕೇಶ್ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಟಾಲಿವುಡ್ ನಟ ನರೇಶ್ ಜೊತೆ ಅವರು ಮದುವೆ ಆಗಿದ್ದಾರೆ ಎಂದು ಸುದ್ದಿ ಆಗಿತ್ತು. ‘ಮನಸ್ಸಿನ ನಡುವೆ ನಡೆದ ವಿವಾಹ’ ಎಂದು ನರೇಶ್ ಹೇಳಿದ್ದರು. ಈ ಮೂಲಕ ಇಬ್ಬರೂ ಒಟ್ಟಿಗೆ ಇರುವ ವಿಚಾರವನ್ನು ಅಧಿಕೃತ ಮಾಡಿದ್ದರು. ತಮ್ಮದೇ ಜೀವನದ ಕಥೆ ಇಟ್ಟುಕೊಂಡು ‘ಮತ್ತೆ ಮದುವೆ’ ಸಿನಿಮಾನ ನಿರ್ಮಾಣ ಮಾಡಿದ್ದರು ನರೇಶ್. ಇವರ ಜೀವನದಲ್ಲಿ ನಡೆದ ಘಟನೆಗಳಿಗೆ, ಸಮಾಜಕ್ಕೆ ತಿಳಿದ ವಿಚಾರಗಳಿಗೆ ವಿಸ್ತಾರವಾಗಿ ವಿವರಣೆ ನೀಡಿದಂತೆ ಈ ಸಿನಿಮಾ ಮೂಡಿ ಬಂದಿದೆ. ಕನ್ನಡ ಹಾಗೂ ತೆಲುಗಿನಲ್ಲಿ ಸಿನಿಮಾ ರಿಲೀಸ್ ಆಗಿತ್ತು. ಮೊದಲು ಥಿಯೇಟರ್​ನಲ್ಲಿ ಬಿಡುಗಡೆ ಆದ ಈ ಚಿತ್ರ ಬಳಿಕ ಒಟಿಟಿ ಮೂಲಕ ರಿಲೀಸ್ ಆಗಿ ಯಶಸ್ಸು ಕಂಡಿತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:14 pm, Fri, 4 August 23