AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾಂಗ್​ ರೇಪ್​: ಹುಡುಗಿಯದ್ದೇ ತಪ್ಪು ಅನ್ನೋರಿಗೆ ರಮ್ಯಾ ಛೀಮಾರಿ; ಪರಿಸ್ಥಿತಿ ಬದಲಾಗ್ಬೇಕು ಎಂದ ನಟಿ

Ramya: ಮಹಿಳೆಯರ ಮೇಲೆ ಗಂಡಸರು ಅಪರಾಧ ಕೃತ್ಯ ನಡೆಸಿದಾದ ಅದನ್ನು ಸಮಾಜ ನೋಡುವ ದೃಷ್ಟಿಕೋನ ಸರಿಯಿಲ್ಲ ಎಂದು ರಮ್ಯಾ ಹೇಳಿದ್ದಾರೆ. ಈ ಬಗ್ಗೆ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಗ್ಯಾಂಗ್​ ರೇಪ್​: ಹುಡುಗಿಯದ್ದೇ ತಪ್ಪು ಅನ್ನೋರಿಗೆ ರಮ್ಯಾ ಛೀಮಾರಿ; ಪರಿಸ್ಥಿತಿ ಬದಲಾಗ್ಬೇಕು ಎಂದ ನಟಿ
ನಟಿ ರಮ್ಯಾ
Follow us
TV9 Web
| Updated By: shruti hegde

Updated on:Aug 27, 2021 | 12:40 PM

ಮೈಸೂರಿನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ (Mysore Gang rape) ಕುರಿತು ಅನೇಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ತಪ್ಪು ಯಾರದ್ದು ಎಂಬ ಬಗ್ಗೆ ತರಹೇವಾರಿ ಚರ್ಚೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಕೆಲವರು ಯುವತಿಯನ್ನು ದೂಷಿಸುತ್ತಿದ್ದಾರೆ. ಇದು ಅನೇಕರ ಅಸಮಾಧಾನಕ್ಕೆ ಕಾರಣ ಆಗಿದೆ. ಅತ್ಯಾಚಾರಿಗಳಿಗೆ ಶಿಕ್ಷೆ ಕೊಡಿಸುವ ಬದಲು ಯುವತಿಯದ್ದೇ ತಪ್ಪು ಎಂಬಂತೆ ಮಾತನಾಡುವವರ ವಿರುದ್ಧ ನಟಿ ರಮ್ಯಾ (Ramya Divya Spandana) ಗುಡುಗಿದ್ದಾರೆ. ನಿರ್ದಿಷ್ಟವಾಗಿ ಯಾವುದೇ ಪ್ರಕರಣದ ಬಗ್ಗೆ ಅವರು ಪ್ರಸ್ತಾಪಿಸಿಲ್ಲ. ಆದರೆ ಮಹಿಳೆಯರ ಮೇಲೆ ಶೋಷಣೆ ನಡೆದಾಗ ಮಹಿಳೆಯರದ್ದೇ ತಪ್ಪು ಎಂಬಂತೆ ವಾದ ಮಂಡಿಸುವವರಿಗೆ ರಮ್ಯಾ ಛೀಮಾರಿ ಹಾಕಿದ್ದಾರೆ. ತಮ್ಮ ಇನ್​​ಸ್ಟಾಗ್ರಾಮ್​ ಖಾತೆಯಲ್ಲಿ ಅವರು ದೀರ್ಘವಾಗಿ ಪೋಸ್ಟ್​ ಮಾಡಿದ್ದಾರೆ.

‘ಗಂಡಸರು ಮಹಿಳೆಯರ ಮೇಲೆ ಅಪರಾಧ ಎಸಗಿದಾಗೆಲ್ಲ ಮಹಿಳೆಯರನ್ನೇ ದೂಷಿಸಲಾಗುತ್ತದೆ. ಅದು ಅತ್ಯಾಚಾರ ಆಗಿರಬಹುದು, ದೈಹಿಕ ದೌರ್ಜನ್ಯ ಅಥವಾ ಮೌಖಿಕ ಶೋಷಣೆಯೇ ಆಗಿರಬಹುದು. ನಿನ್ನದೇ ತಪ್ಪು ಎಂದು ಮಹಿಳೆಗೆ ಹೇಳಲಾಗುತ್ತದೆ. ನೀನು ಹಾಗೆ ಹೇಳಬಾರದಿತ್ತು, ಅದನ್ನು ಮಾಡಬಾರದಿತ್ತು, ತುಂಬ ಬಿಗಿ ಆದಂತಹ, ತುಂಬ ಸಡಿಲ ಆಗಿರುವಂತಹ ಬಟ್ಟೆ ಧರಿಸಬಾರದಿತ್ತು, ತುಂಬ ರಾತ್ರಿ ಸಮಯದಲ್ಲಿ ಹೊರಗೆ ಹೋಗಬಾರದಿತ್ತು, ಮೇಕಪ್​ ಹಾಕಿಕೊಳ್ಳಬಾರದಿತ್ತು, ಕೆಂಪು ಲಿಪ್​ಸ್ಟಿಕ್​ ಯಾಕೆ? ಕಣ್ಣು ಮಿಟುಕಿಸಬಾರದಿತ್ತು ಎಂದೆಲ್ಲ ಹೇಳುತ್ತಾರೆ’ ಎಂದು ರಮ್ಯಾ ಪೋಸ್ಟ್​ ಮಾಡಿದ್ದಾರೆ.

‘ಗಂಡಸರು ಇರುವುದೇ ಹಾಗೆ ಎಂಬ ಕಾರಣಕ್ಕೆ ನಾವು ರಾಜಿ ಆಗಬೇಕು. ನಾವೇ ಬದಲಾಗಬೇಕು, ನಾವೇ ಹೊಂದಿಕೊಳ್ಳಬೇಕು. ಇಲ್ಲ.. ಇಂಥ ಅಸಂಬದ್ಧವೆಲ್ಲ ಕೊನೆಯಾಗಬೇಕು. ಪ್ರಾಮಾಣಿಕವಾಗಿ ಹೇಳಬೇಕೆಂದರೆ ದೂಷಣೆಯನ್ನು ಒಪ್ಪಿಕೊಳ್ಳುವ ತಪ್ಪನ್ನು ನಾನೂ ಮಾಡಿದ್ದೇನೆ. ಸ್ನೇಹಿತರಿಗೂ ಹೇಳಿದ್ದೇನೆ. ಆದರೆ ಇನ್ಮುಂದೆ ಸಾಧ್ಯವಿಲ್ಲ. ಮಹಿಳೆಯರ ವಿರುದ್ಧ ನಡೆಯುವ ಅಪರಾಧಗಳನ್ನು ನೋಡಿಕೊಂಡು ಸುಮ್ಮನಿರಬೇಡಿ. ಧ್ವನಿ ಎತ್ತಿ’ ಎಂದು ರಮ್ಯಾ ಮಾಡಿರುವ ಇನ್​ಸ್ಟಾಗ್ರಾಮ್​ ಪೋಸ್ಟ್​ ವೈರಲ್​ ಆಗುತ್ತಿದೆ.

ಸಂತ್ರಸ್ತ ಯುವತಿಗೆ ನ್ಯಾಯ ಸಿಗಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಅನೇಕ ಸೆಲೆಬ್ರಿಟಿಗಳು ಒತ್ತಾಯಿಸುತ್ತಿದ್ದಾರೆ. ಇತ್ತೀಚೆಗೆ ನಟ ಜಗ್ಗೇಶ್​ ಕೂಡ ಈ ಬಗ್ಗೆ ಟ್ಚೀಟ್​ ಮಾಡಿದ್ದರು. ‘ಎಂಥ ಕ್ರೂರಿಗಳು. ತಾಯಿ ಹೆಣ್ಣಲ್ಲವೆ? ಅಕ್ಕತಂಗಿ ಹೆಣ್ಣಲ್ಲವೆ? ಮಡದಿ ಹೆಣ್ಣಲ್ಲವೆ? ಹೆಣ್ಣು ಗೌರವಿಸದವರು ರಕ್ಕಸರು. ಈ ಕೃತ್ಯ ಎಸಗಿದ ಕ್ರೂರಿಗಳು ಗಲ್ಲು ಶಿಕ್ಷೆಗೆ ಅರ್ಹರು. ಈ ಕ್ರೂರ ಕೃತ್ಯಕ್ಕೆ ಖಂಡನೆ’ ಎಂದು ಜಗ್ಗೇಶ್​ ಪೋಸ್ಟ್​ ಮಾಡಿದ್ದರು.

ಇದನ್ನೂ ಓದಿ:

ಸಿನಿಮಾ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಬಂದ ಕೇಂದ್ರದ ವಿರುದ್ಧ ಕಿಡಿಕಾರಿದ ನಟಿ ರಮ್ಯಾ

ವಿದೇಶಕ್ಕೆ ಹೋದಾಗ ರಾಹುಲ್​ ಗಾಂಧಿ ವಿಚಾರದಲ್ಲಿ ಮಾಡಿದ್ದ ದೊಡ್ಡ ತಪ್ಪಿನ ಬಗ್ಗೆ ಬಾಯ್ಬಿಟ್ಟ ರಮ್ಯಾ

Published On - 12:36 pm, Fri, 27 August 21

ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ