AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಹಿಂದೂ ಟೆರರ್​ ಇದೆ ಎಂದವರಿಗೆ ನಟಿ ಪ್ರಣಿತಾ ಸುಭಾಷ್​ ತಿರುಗೇಟು; ನಿಮ್ಮ ಬಗ್ಗೆ ಹೆಮ್ಮೆ ಆಗ್ತಿದೆ ಎಂದ ಫ್ಯಾನ್ಸ್​

ಆರ್​ಎಸ್​ಎಸ್​ ಸಂಘಟನೆಗೆ ಸೇರಿದವರು ಬೇರೆ ಧರ್ಮದವರ ಮೇಲೆ ಹಿಂಸಾಚಾರ ನಡೆಸುತ್ತಿದ್ದಾರೆ. ಹೀಗಾಗಿ, ಭಾರತದಲ್ಲಿ ಹಿಂದೂ ಟೆರರ್ ಇದೆ. ತಾಲೀಬಾನಿಗಳಿಗೂ ಹಿಂದೂ ಟೆರರಿಸಮ್​ಗೂ ಹೆಚ್ಚು ವ್ಯತ್ಯಾಸವಿಲ್ಲ ಎಂಬಿತ್ಯಾದಿ ವಿಚಾರ ಮುನ್ನೆಲೆಗೆ ಬಂದಿತ್ತು.

ಭಾರತದಲ್ಲಿ ಹಿಂದೂ ಟೆರರ್​ ಇದೆ ಎಂದವರಿಗೆ ನಟಿ ಪ್ರಣಿತಾ ಸುಭಾಷ್​ ತಿರುಗೇಟು; ನಿಮ್ಮ ಬಗ್ಗೆ ಹೆಮ್ಮೆ ಆಗ್ತಿದೆ ಎಂದ ಫ್ಯಾನ್ಸ್​
ಭಾರತದಲ್ಲಿ ಹಿಂದೂ ಟೆರರ್​ ಇದೆ ಎಂದವರಿಗೆ ನಟಿ ಪ್ರಣಿತಾ ಸುಭಾಷ್​ ತಿರುಗೇಟು; ನಿಮ್ಮ ಬಗ್ಗೆ ಹೆಮ್ಮೆ ಆಗ್ತಿದೆ ಎಂದ ಫ್ಯಾನ್ಸ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Aug 18, 2021 | 8:53 PM

Share

ಅಪ್ಘಾನಿಸ್ತಾನವನ್ನು ತಾಲೀಬಾನ್​ ಉಗ್ರರು ವಶಕ್ಕೆ ಪಡೆದಿದ್ದಾರೆ. ಅಲ್ಲಿ ಹಿಂಸಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಇಡೀ ವಿಶ್ವ ಮರುಕ ವ್ಯಕ್ತಪಡಿಸುತ್ತಿದೆ. ಸಾಕಷ್ಟು ಜನರು ಅಪ್ಘಾನಿಸ್ತಾನದಿಂದ ಪಲಾಯನ ಮಾಡಲು ಎಲ್ಲಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಮತ್ತೊಂದು ಕಡೆ ತಾಲೀಬಾನಿಗಳ ಅಟ್ಟಹಾಸ ಜೋರಾಗಿದೆ. ಎಲ್ಲೆಂದರಲ್ಲಿ ಹಿಂಸೆ ನೀಡುತ್ತಿದ್ದಾರೆ. ಈ ವಿಚಾರ ಭಾರತದಲ್ಲೂ ಚರ್ಚೆ ಆಗುತ್ತಿದೆ. ಇದರ ಜತೆಗೆ ಹಿಂದೂ ಉಗ್ರರು ಎನ್ನುವ ವಿಚಾರ ಕೂಡ ಚರ್ಚೆಗೆ ಬಂದಿದೆ.

ಆರ್​ಎಸ್​ಎಸ್​ ಸಂಘಟನೆಗೆ ಸೇರಿದವರು ಬೇರೆ ಧರ್ಮದವರ ಮೇಲೆ ಹಿಂಸಾಚಾರ ನಡೆಸುತ್ತಿದ್ದಾರೆ. ಹೀಗಾಗಿ, ಭಾರತದಲ್ಲಿ ಹಿಂದೂ ಟೆರರ್ ಇದೆ. ತಾಲೀಬಾನಿಗಳಿಗೂ ಹಿಂದೂ ಟೆರರಿಸಮ್​ಗೂ ಹೆಚ್ಚು ವ್ಯತ್ಯಾಸವಿಲ್ಲ ಎಂಬಿತ್ಯಾದಿ ವಿಚಾರ ಮುನ್ನೆಲೆಗೆ ಬಂದಿತ್ತು. ಈ ಬಗ್ಗೆ ಅನೇಕ ಟ್ವೀಟ್​ಗಳನ್ನು ಕೂಡ ಮಾಡಲಾಗಿದೆ.  ಈ  ವಿಚಾರವಾಗಿ ಪ್ರಣಿತಾ ಪ್ರತಿಕ್ರಿಯಿಸಿದ್ದಾರೆ.

‘ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವುದನ್ನು ಮರೆ ಮಾಚಿ ತಮ್ಮನ್ನು ಸಮರ್ಥಿಸಿಕೊಳ್ಳುವುದಕ್ಕಾಗಿ ಕೆಲವರು ಹಿಂದೂ ಟೆರರ್ ಪದ ಬಳಸುತ್ತಿದ್ದಾರೆ. ಪರಿಕಲ್ಪನೆಯನ್ನು ನ್ಯಾಯಸಮ್ಮತಗೊಳಿಸುವ ಪ್ರಯತ್ನಗಳು ಅವರ ಕಲ್ಪನೆಯಾಗಿಯೇ ಉಳಿಯುತ್ತದೆ.  ಭಾರತಿಯರೇ ಎಚ್ಚರ, ಶತ್ರುಗಳು ನಮ್ಮ ಗಡಿಯಾಚೆ ಇರುವುದಿಲ್ಲ, ಅವರು ನಿಮ್ಮ ಸುತ್ತಲೂ ಇದ್ದಾರೆ’ ಎಂದು ಬರೆದುಕೊಂಡಿದ್ದಾರೆ.

ಈ ಟ್ವೀಟ್​ ನೋಡಿದ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ನೀವು ಪ್ರೌಡ್​ ಹಿಂದು. ನಿಮ್ಮ ಬಗ್ಗೆ ನಮಗೆ ನಿಜಕ್ಕೂ ಹೆಮ್ಮೆ ಆಗುತ್ತಿದೆ’ ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ. ಸದ್ಯ, ಈ ಟ್ವೀಟ್​ ಸಾಕಷ್ಟು ವೈರಲ್​ ಆಗುತ್ತಿದೆ.

2010ರಲ್ಲಿ ದರ್ಶನ್ ಜೊತೆ ‘ಪೊರ್ಕಿ’ ಸಿನಿಮಾದಲ್ಲಿ ನಟಿಸುವ ಮೂಲಕ ಬಣ್ಣದ ಲೋಕಕ್ಕೆ ಪ್ರಣಿತಾ ಕಾಲಿಟ್ಟರು. ಚೊಚ್ಚಲ ಚಿತ್ರದಲ್ಲಿಯೇ ದರ್ಶನ್​ಗೆ ನಾಯಕಿಯಾಗುವ ಅವಕಾಶ ಸಿಕ್ಕಿದ್ದರಿಂದ ಅವರಿಗೆ ದೊಡ್ಡಮಟ್ಟದ ಜನಪ್ರಿಯತೆ ಸಿಕ್ಕಿತ್ತು. ನಂತರ ತಮಿಳು ಮತ್ತು ತೆಲುಗಿನಲ್ಲಿಯೂ ಅವರು ಗುರುತಿಸಿಕೊಂಡರು. ಭೀಮ ತೀರದಲ್ಲಿ, ಬ್ರಹ್ಮ, ಮಾಸ್ ಲೀಡರ್ ಮುಂತಾದ ಸಿನಿಮಾಗಳಲ್ಲಿ ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡರು. ನಟನೆ ಮಾತ್ರವಲ್ಲದೇ ಅನೇಕ ಸಮಾಜಮುಖಿ ಕೆಲಸಗಳಲ್ಲೂ ಪ್ರಣಿತಾ ತೊಡಗಿಕೊಂಡಿದ್ದಾರೆ. ಆ ಮೂಲಕ ಅವರು ತಮ್ಮದೇ ಆದ ಅಭಿಮಾನಿ ಬಳಗವನ್ನು ಸೃಷ್ಟಿ ಮಾಡಿಕೊಂಡಿದ್ದಾರೆ.. ಇತ್ತೀಚೆಗೆ ಅವರು ಮದುವೆ ಆಗಿ ಅಭಿಮಾನಿಗಳಿಗೆ ಅಚ್ಚರಿ ನೀಡಿದ್ದರು.  ಉದ್ಯಮಿ ನಿತಿನ್​ ರಾಜು ಅವರನ್ನು ಪ್ರಣಿತಾ ವರಿಸಿದ್ದರು.

ಇದನ್ನೂ ಓದಿ: ಅಪ್ಘಾನಿಸ್ತಾನದಲ್ಲಿ ಯುದ್ಧ ಸನ್ನಿವೇಶ: ಸೈನ್ಯ ಹಿಂಪಡೆಯುವ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲವೆಂದ ಜೋ ಬೈಡನ್​

Pranitha Marriage: ಪ್ರಣಿತಾ ಮದುವೆ ಬಳಿಕ ರಮ್ಯಾ ಕಡೆಗೆ ಪ್ರಶ್ನೆ ಎಸೆದ ಅಭಿಮಾನಿಗಳು​; ಏನಿದು ಲಿಂಕ್​?

Published On - 7:04 pm, Wed, 18 August 21