Pranitha Subhash: ನಟಿ ಪ್ರಣಿತಾ ಸುಭಾಷ್​ಗೆ ಹೆಣ್ಣುಮಗು; ಇಲ್ಲಿದೆ ಫೋಟೋ

ಈ ವಿಚಾರವನ್ನು ಪ್ರಣಿತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಅಧಿಕೃತ ಮಾಡಿದ್ದಾರೆ. ಅಲ್ಲದೆ, ಮಗುವಿನ ಜತೆ ಇರುವ ಮುದ್ದಾದ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

Pranitha Subhash: ನಟಿ ಪ್ರಣಿತಾ ಸುಭಾಷ್​ಗೆ ಹೆಣ್ಣುಮಗು; ಇಲ್ಲಿದೆ ಫೋಟೋ
ಪ್ರಣಿತಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jun 10, 2022 | 8:31 PM

ಖ್ಯಾತ ನಟಿ ಪ್ರಣಿತಾ ಸುಭಾಷ್ (Pranitha Subhash)​ ಅವರು ಗುಡ್​ ನ್ಯೂಸ್​ ನೀಡಿದ್ದಾರೆ. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಅವರು ಇತ್ತೀಚೆಗೆ ಪ್ರೆಗ್ನೆಂಟ್ ಆಗಿರುವ ವಿಚಾರ ಹೇಳಿಕೊಂಡಿದ್ದರು. ಈಗ ಅವರ ಮನೆಗೆ ಹೆಣ್ಣು ಮಗುವಿನ ಆಗಮನ ಆಗಿದೆ. ಈ ವಿಚಾರವನ್ನು ಪ್ರಣಿತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಅಧಿಕೃತ ಮಾಡಿದ್ದಾರೆ. ಅಲ್ಲದೆ, ಮಗುವಿನ ಜತೆ ಇರುವ ಮುದ್ದಾದ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ತಾಯಿ-ಮಗಳು ಇಬ್ಬರೂ ಆರೋಗ್ಯವಾಗಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯಗಳು ಬರುತ್ತಿವೆ.

‘ನನ್ನ ತಾಯಿ ಸ್ತ್ರೀರೋಗ ತಜ್ಞೆ. ಹೀಗಾಗಿ, ಈ ವಿಚಾರದಲ್ಲಿ ನಾನು ಬಹಳ ಅದೃಷ್ಟವಂತೆ. ಹಾಗಾಗಿ ನನ್ನ ಡೆಲಿವರಿ ಯಾವುದೇ ಒತ್ತಡವಿಲ್ಲದೆ ಸರಾಗವಾಗಿ ಆಯಿತು. ಆದರೆ ನನ್ನ ತಾಯಿ ಪಾಲಿಗೆ ಇದು ಬಹಳ ಕಠಿಣ ಹಾಗೂ ಭಾವನಾತ್ಮಕ ಕ್ಷಣವಾಗಿತ್ತು. ನನ್ನ ಕಠಿಣ ಕ್ಷಣದಲ್ಲಿ ಸಾಥ್ ನೀಡಿದ ಪ್ರತಿಯೊಬ್ಬ ವೈದ್ಯರಿಗೂ ಧನ್ಯವಾದಗಳು’ ಎಂದು ಪ್ರಣಿತಾ ಬರೆದುಕೊಂಡಿದ್ದಾರೆ. ಅವರು ಹಂಚಿಕೊಂಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಇದನ್ನೂ ಓದಿ
Image
ಭಾರತದಲ್ಲಿ ಹಿಂದೂ ಟೆರರ್​ ಇದೆ ಎಂದವರಿಗೆ ನಟಿ ಪ್ರಣಿತಾ ಸುಭಾಷ್​ ತಿರುಗೇಟು; ನಿಮ್ಮ ಬಗ್ಗೆ ಹೆಮ್ಮೆ ಆಗ್ತಿದೆ ಎಂದ ಫ್ಯಾನ್ಸ್​
Image
Bhuj: ‘ದೇಶದ ಮಣ್ಣಿನ ಕಣಕ್ಕಿಂತ ಶ್ರೇಷ್ಠವಾದದ್ದು ಮತ್ತೊಂದಿಲ್ಲ’; ಮನಸೂರೆಗೊಳ್ಳುತ್ತಿದೆ ಭುಜ್ ಚಿತ್ರದ ದೇಶಭಕ್ತಿ ಗೀತೆ
Image
ಮದುವೆಯಾದ ಪ್ರಣಿತಾಗೆ ಶುಭಕೋರಿದ ಶಿಲ್ಪಾ ಶೆಟ್ಟಿ; ಇಬ್ಬರ ನಡುವೆ ಗೆಳೆತನ ಬೆಳೆದಿದ್ದು ಹೇಗೆ?
Image
Pranitha Marriage: ಪ್ರಣಿತಾ ಮದುವೆ ಬಳಿಕ ರಮ್ಯಾ ಕಡೆಗೆ ಪ್ರಶ್ನೆ ಎಸೆದ ಅಭಿಮಾನಿಗಳು​; ಏನಿದು ಲಿಂಕ್​?

2021ರ ಮೇ ತಿಂಗಳಲ್ಲಿ ಉದ್ಯಮಿ ನಿತಿನ್​ ರಾಜು ಜೊತೆ ಪ್ರಣಿತಾ ಹಸೆಮಣೆ ಏರಿದರು. ಕೊವಿಡ್​ ಮುಂಜಾಗ್ರತೆ ಕ್ರಮವಾಗಿ ಕೇವಲ ಆಪ್ತರ ಸಮ್ಮುಖದಲ್ಲಿ ಅವರ ಮದುವೆ ಸಮಾರಂಭ ನಡೆದಿತ್ತು. ಅವರದ್ದು ಲವ್​ ಕಮ್​ ಅರೇಂಜ್​ ಮ್ಯಾರೇಜ್​​. 2010ರಿಂದಲೂ ಪ್ರಣಿತಾ ಸುಭಾಷ್​ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.

ಕನ್ನಡದ ‘ಪೊರ್ಕಿ’ ಸಿನಿಮಾ ಮೂಲಕ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ಆ ಸಿನಿಮಾದಲ್ಲಿ ಅವರಿಗೆ ಭರ್ಜರಿ ಖ್ಯಾತಿ ಸಿಕ್ಕಿತು. ಅನೇಕ ಸ್ಟಾರ್​ ಹೀರೋಗಳ ಜೊತೆಗೆ ಅವರು ತೆರೆ ಹಂಚಿಕೊಂಡಿದ್ದಾರೆ. ಕನ್ನಡ ಮಾತ್ರವಲ್ಲದೇ ತಮಿಳು, ತೆಲುಗು, ಹಿಂದಿ ಸಿನಿಮಾಗಳಲ್ಲೂ ಪ್ರಣಿತಾ ಸುಭಾಷ್​ ನಟಿಸಿದ್ದಾರೆ. ಆ ಮೂಲಕ ಅವರು ದೇಶಾದ್ಯಂತ ಅಭಿಮಾನಿಗಳನ್ನು ಹೊಂದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:19 pm, Fri, 10 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ