Ragini Dwivedi Birthday: ರಾಗಿಣಿ ದ್ವಿವೇದಿ ಬರ್ತ್​​ಡೇಗೆ ಸಿಕ್ತು ಸಖತ್ ಗಿಫ್ಟ್​; ಫ್ಯಾನ್ಸ್ ಖುಷ್

ಪ್ರಸ್ತುತ ‘ಸಾರಿ (ಕರ್ಮ ರಿಟರ್ನ್ಸ್)’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಈ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

Ragini Dwivedi Birthday: ರಾಗಿಣಿ ದ್ವಿವೇದಿ ಬರ್ತ್​​ಡೇಗೆ ಸಿಕ್ತು ಸಖತ್ ಗಿಫ್ಟ್​; ಫ್ಯಾನ್ಸ್ ಖುಷ್
ರಾಗಿಣಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:May 24, 2022 | 6:37 PM

ನಟಿ ರಾಗಿಣಿ ದ್ವಿವೇದಿ ಅವರಿಗೆ (Ragini Dwivedi) ಇಂದು (ಮೇ 24) ಬರ್ತ್​ಡೇ ಸಂಭ್ರಮ. ಸ್ಯಾಂಡಲ್​ವುಡ್​ನಲ್ಲಿ ಹಲವು ಸಿನಿಮಾಗಳನ್ನು ಮಾಡಿ ಮನಗೆದ್ದಿರುವ ಅವರಿಗೆ ಅಭಿಮಾನಿಗಳಿಂದ ಹುಟ್ಟುಹಬ್ಬದ ಶುಭಾಶಯಗಳು ಬರುತ್ತಿವೆ. ಈವರೆಗೆ ಇಪ್ಪತ್ತೈದಕ್ಕೂ ಹೆಚ್ಚಿನ ಚಿತ್ರಗಳಲ್ಲಿ ಅಭಿನಯಿಸಿರುವ ಅವರು ಇತ್ತೀಚೆಗೆ ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಪ್ರಸ್ತುತ ‘ಸಾರಿ (ಕರ್ಮ ರಿಟರ್ನ್ಸ್)’ ಸಿನಿಮಾದಲ್ಲಿ (SORRY Karma Returns) ಅವರು ನಟಿಸುತ್ತಿದ್ದಾರೆ. ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಈ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಈ ಮೂಲಕ ಫ್ಯಾನ್ಸ್​ಗೆ ಗಿಫ್ಟ್​ ಸಿಕ್ಕಿದೆ.

ಮೋಷನ್ ಪೋಸ್ಟರ್ ರಿಲೀಸ್​ಗೆ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿತ್ತು. ಈ ವೇಳೆ ಸಿನಿಮಾ ಬಗ್ಗೆ ಮಾತನಾಡಿದ ರಾಗಿಣಿ, ‘ಪತ್ರಕರ್ತ ಅಫ್ಜಲ್ ನನ್ನನ್ನು ಭೇಟಿಯಾಗಿ ಈ ಚಿತ್ರದ ಕುರಿತು ಹೇಳಿದರು. ನನಗೆ ಇಷ್ಟವಾಯಿತು. ಈ ಚಿತ್ರದ ನಿರ್ದೇಶಕ ಬ್ರಹ್ಮ ಅವರ ಬಗ್ಗೆ ತಿಳಿದು ಆಶ್ಚರ್ಯವಾಯಿತು. ಅವರು ಅತ್ಯುತ್ತಮ ತಂತ್ರಜ್ಞರು. ನಾನು ಒಂದೇ ತರಹದ ಪಾತ್ರ ಮಾಡಲು ಇಷ್ಟ ಪಡುವುದಿಲ್ಲ. ಬೇರೆಬೇರೆ ಪಾತ್ರ ಮಾಡಬೇಕು ಎಂಬುದು ನನ್ನ ಆಸೆ. ಈ ಸಿನಿಮಾದಲ್ಲಿ ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ. ನಿಮ್ಮ ಹಾರೈಕೆ ಸದಾ ಇರಲಿ’ ಎಂದಿದ್ದಾರೆ.

ನಿರ್ದೇಶಕ ಬ್ರಹ್ಮ ಅವರು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ‘ನಾನು 2000ನೇ ಇಸವಿಯಿಂದಲೂ ಅನಿಮೇಷನ್‌ ಹಾಗೂ ವಿಎಫ್​ಎಕ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಈ ಕುರಿತು ಕೆಲವರಿಗೆ ತರಗತಿ ಕೂಡ ನೀಡುತ್ತಿದ್ದೇನೆ. ಹಿಂದೆ ‘ಸಿದ್ದಿ ಸೀರೆ’ ಎಂಬ ಚಿತ್ರ ನಿರ್ದೇಶಿಸಿದ್ದ ನನಗೆ ಇದು ಎರಡನೇ ಚಿತ್ರ. ಅಫ್ಜಲ್ ಅವರು ಹೇಳಿದ ಒಂದೆಳೆ ಕಥೆ ಇಷ್ಟವಾಯಿತು. ನಾನು ಅದನ್ನು ಮುಂದುವರಿಸಿದೆ. ಇದರಲ್ಲಿ ಮಾಟ-ಮಂತ್ರ, ಬ್ಲ್ಯಾಕ್ ಮ್ಯಾಜಿಕ್ ಏನೂ ಇಲ್ಲ. ಇದೊಂದು ಕ್ರೈಂ ಥ್ರಿಲ್ಲರ್. ಸೂಪರ್ ಹೀರೋ ಕಾನ್ಸೆಪ್ಟ್​​ನ ಚಿತ್ರ ಕೂಡ ಎನ್ನಬಹುದು’ ಎನ್ನುತ್ತಾರೆ ಬ್ರಹ್ಮ.

ಇದನ್ನೂ ಓದಿ
Image
‘ಮೊಬೈಲ್ ಸಂಖ್ಯೆ ಬದಲಿಸಿ ಈ ಮಹಾಮೋಸ ನಡೆದಿದೆ’; ಪತಿ ವಿರುದ್ಧ ಸುದ್ದಿಗೋಷ್ಠಿಯಲ್ಲಿ ನಟಿ ಚೈತ್ರಾ ಹಳ್ಳಿಕೇರಿ ಆರೋಪ
Image
ಟಾಟಾ ಕುಟುಂಬದ ಕುರಿತು ಬರಲಿದೆ ಬಯೋಪಿಕ್​; ಸಿಕ್ತು ಬ್ರೇಕಿಂಗ್ ನ್ಯೂಸ್
Image
‘ಮೇ 27ಕ್ಕೆ ‘ಕಿರಿಕ್ ಶಂಕರ್’ ಚಿತ್ರ ‘ಕಿರಿಕ್ ಪಾರ್ಟಿ’ ರೀತಿ ಹಿಟ್ ಆಗಲಿ’; ಲೂಸ್ ಮಾದನಿಗೆ ಆರ್. ಚಂದ್ರು ಹಾರೈಕೆ
Image
Ragini Dwivedi Birthday: ಹಲವು ಸಿನಿಮಾಗಳಲ್ಲಿ ಬ್ಯುಸಿಯಾದ ರಾಗಿಣಿ; ‘ತುಪ್ಪದ ಬೆಡಗಿ’ಯ ಗ್ಲಾಮರಸ್ ಫೋಟೋಗಳು ಇಲ್ಲಿವೆ

ಇದನ್ನೂ ಓದಿ: ಬೋಲ್ಡ್​​ ಲುಕ್​ನಲ್ಲಿ ರಾಗಿಣಿ ದ್ವಿವೇದಿ

ಸಿನಿಮಾ ಆರಂಭ ಆಗಿದ್ದು ಹೇಗೆ ಎನ್ನುವ ಬಗ್ಗೆ ಮಾತನಾಡಿದ್ದಾರೆ ಅಫ್ಜಲ್​. ‘ಸಮಾರಂಭವೊಂದರಲ್ಲಿ ಬ್ರಹ್ಮ ಅವರ ಬಳಿ ಈ ಸಿನಿಮಾ ವಿಷಯ ಹೇಳಿದೆ. ನಂತರ ರಾಗಿಣಿ ಅವರು ಈ ಪಾತ್ರಕ್ಕೆ ಸೂಕ್ತ ಎನಿಸಿತು. ಅವರ ಬಳಿ ಹೋಗಿ ನೀವು ಈ ಚಿತ್ರದಲ್ಲಿ ನಟಿಸಬೇಕು ಎಂದು ಕೇಳಿದಾಗ, ತಕ್ಷಣ ಒಪ್ಪಿಕೊಂಡರು. ಅವರಿಗೆ ಧನ್ಯವಾದ’ ಎಂದಿದ್ದಾರೆ ಕಾರ್ಯಕಾರಿ ನಿರ್ಮಾಪಕ ಅಫ್ಜಲ್.

ಕೆನಡಾ ನಿವಾಸಿ ನವೀನ್ ಕುಮಾರ್ ಈ ಚಿತ್ರದ ನಿರ್ಮಾಪಕರು. ಜೈ ಕೃಪ್ಲಾನಿ ಹಾಗೂ ಜೇನ್ ಜಾರ್ಜ್ ಸಹ ನಿರ್ಮಾಪಕರು. ಬೆಂಗಳೂರು, ಸಕಲೇಶಪುರದ ಸುತ್ತ ಚಿತ್ರೀಕರಣ ಮಾಡಲಾಗಿದೆ. ಮುಂದಿನ ಭಾಗದ ಚಿತ್ರೀಕರಣ ಹೈದರಾಬಾದ್​​ನಲ್ಲಿ ನಡೆಯಲಿದೆ. ರಾಜೀವ್ ಗಣೇಶನ್ ಛಾಯಾಗ್ರಹಣ ಚಿತ್ರಕ್ಕೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:11 pm, Tue, 24 May 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ