ಜಾಮೀನಿಗಾಗಿ ನಟಿಯರ ಸರ್ಕಸ್​: ಸುಪ್ರೀಂ ಮೆಟ್ಟಿಲೇರಿದ ರಾಗಿಣಿ, ಹೈಕೋರ್ಟ್​ ಮೊರೆಹೋದ ಸಂಜನಾ

ಸೆಪ್ಟೆಂಬರ್​ನಲ್ಲಿ ರಾಗಿಣಿ-ಸಂಜನಾ ಪರಪ್ಪನ ಅಗ್ರಹಾರ ಸೇರಿದ್ದು, ನವೆಂಬರ್​ 3ರಂದು ಹೈಕೋರ್ಟ್​ ಜಾಮೀನು ಅರ್ಜಿ ವಜಾಗೊಳಿಸಿತ್ತು. ಹೈಕೋರ್ಟ್​​ನಲ್ಲಿ ನಮಗೆ ಜಾಮೀನು ಸಿಕ್ಕೇ ಸಿಗುತ್ತದೆ ಎಂದು ತುಂಬ ನಿರೀಕ್ಷೆ ಇಟ್ಟುಕೊಂಡಿದ್ದ ನಟಿಯರಿಗೆ ತುಂಬ ನಿರಾಸೆಯಾಗಿತ್ತು.

ಜಾಮೀನಿಗಾಗಿ ನಟಿಯರ ಸರ್ಕಸ್​: ಸುಪ್ರೀಂ ಮೆಟ್ಟಿಲೇರಿದ ರಾಗಿಣಿ, ಹೈಕೋರ್ಟ್​ ಮೊರೆಹೋದ ಸಂಜನಾ
ರಾಗಿಣಿ ದ್ವಿವೇದಿ (ಎಡ); ಸಂಜನಾ ಗಲ್ರಾನಿ (ಬಲ)
Follow us
Lakshmi Hegde
| Updated By: ಸಾಧು ಶ್ರೀನಾಥ್​

Updated on:Nov 28, 2020 | 5:13 PM

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ನಂಟು​ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ 2 ತಿಂಗಳಿಂದ ಜೈಲಿನಲ್ಲಿರುವ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಗೆ ಜಾಮೀನು ವಿಚಾರದಲ್ಲಿ ಪ್ರತಿಬಾರಿಯೂ ನಿರೀಕ್ಷೆ ಸುಳ್ಳಾಗುತ್ತಿದೆ. ಹೀಗಿರುವಾಗ ರಾಗಿಣಿ ದ್ವಿವೇದಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು, ಸುಪ್ರೀಂಕೋರ್ಟ್​ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಸೆಪ್ಟೆಂಬರ್​ನಲ್ಲಿ ಇವರಿಬ್ಬರೂ ಪರಪ್ಪನ ಅಗ್ರಹಾರ ಸೇರಿದ್ದು, ನವೆಂಬರ್​ 3ರಂದು ಹೈಕೋರ್ಟ್​ ಜಾಮೀನು ಅರ್ಜಿ ವಜಾಗೊಳಿಸಿತ್ತು. ಹೈಕೋರ್ಟ್​​ನಲ್ಲಿ ನಮಗೆ ಜಾಮೀನು ಸಿಕ್ಕೇ ಸಿಗುತ್ತದೆ ಎಂದು ತುಂಬ ನಿರೀಕ್ಷೆ ಇಟ್ಟುಕೊಂಡಿದ್ದ ನಟಿಯರಿಗೆ ತುಂಬ ನಿರಾಸೆಯಾಗಿತ್ತು. ಇದೀಗ ರಾಗಿಣಿಯವರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ. ಡಿ.4ರಂದು ಇವರ ಅರ್ಜಿ ವಿಚಾರಣೆ ಆಗುವ ಸಾಧ್ಯತೆ ಇದೆ.

ಮತ್ತೆ ಹೈಕೋರ್ಟ್ ಮೊರೆ ಹೋದ ಸಂಜನಾ ಆದರೆ ಸಂಜನಾ ಸುಪ್ರೀಂಕೋರ್ಟ್​ಗೆ ಹೋಗುವ ಬದಲು  ಮತ್ತೊಮ್ಮೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನ. 3ರಂದು ಅರ್ಜಿ ವಜಾಗೊಂಡಿದ್ದರೂ ಈಗ ಮತ್ತೊಮ್ಮೆ ಅರ್ಜಿ ಸಲ್ಲಿಸಿ, ಜಾಮೀನಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಮ್ಯಾಟ್ರಿಮೋನಿಯಲ್ಲಿ ಯುವತಿಯರ ಪರಿಚಯ: ಲಕ್ಷಾಂತರ ಹಣ ಕಸಿದ ವಂಚಕ ದೆಹಲಿಯಲ್ಲಿ ಅರೆಸ್ಟ್

Published On - 4:42 pm, Sat, 28 November 20

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್