AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮ್ಯಾ ಜನ್ಮದಿನ; ‘ಸ್ಯಾಂಡಲ್​ವುಡ್​ ಕ್ವೀನ್​’ 39ನೇ ವರ್ಷದ ಹುಟ್ಟುಹಬ್ಬಕ್ಕೆ ಶುಭಾಶಯಗಳ ಸುರಿಮಳೆ

Ramya Birthday: ನಟಿ ರಮ್ಯಾ ಅವರಿಗೆ ಇಂದು (ನ.29) ಹುಟ್ಟುಹಬ್ಬದ ಸಂಭ್ರಮ. ಅವರ 39ನೇ ವರ್ಷದ ಜನ್ಮದಿನಕ್ಕೆ ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ಶುಭಾಶಯ ಕೋರುತ್ತಿದ್ದಾರೆ.

ರಮ್ಯಾ ಜನ್ಮದಿನ; ‘ಸ್ಯಾಂಡಲ್​ವುಡ್​ ಕ್ವೀನ್​’ 39ನೇ ವರ್ಷದ ಹುಟ್ಟುಹಬ್ಬಕ್ಕೆ ಶುಭಾಶಯಗಳ ಸುರಿಮಳೆ
ರಮ್ಯಾ ದಿವ್ಯಾ ಸ್ಪಂದನಾ
TV9 Web
| Edited By: |

Updated on: Nov 29, 2021 | 11:53 AM

Share

ಕನ್ನಡದ ಖ್ಯಾತ ನಟಿ ರಮ್ಯಾ (Ramya Divya Spandana) ಅವರು ಸದ್ಯಕ್ಕೆ ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ಆದರೂ ಕೂಡ ಅವರು ಅಭಿಮಾನಿಗಳ ಜತೆ ಸಂಪರ್ಕದಲ್ಲಿ ಇದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ತಮ್ಮ ದಿನಚರಿ ಬಗ್ಗೆ ಅಪ್​ಡೇಟ್​ ನೀಡುತ್ತಲೇ ಇರುತ್ತಾರೆ. ಇಂದು (ನ.29) ಅವರ ಜನ್ಮದಿನ. ‘ಸ್ಯಾಂಡಲ್​ವುಡ್​ ಕ್ವೀನ್​’  (Sandalwood Queen Ramya) ಹುಟ್ಟುಹಬ್ಬಕ್ಕೆ ಅವರ ಅಭಿಮಾನಿಗಳು ಶುಭ ಕೋರುತ್ತಿದ್ದಾರೆ. ಸೆಲೆಬ್ರಿಟಿಗಳು ಸಹ ರಮ್ಯಾಗೆ ವಿಶ್​ ಮಾಡಿದ್ದಾರೆ. ಎಲ್ಲರಿಂದಲೂ ಶುಭಾಶಯಗಳ ಮಳೆ ಸುರಿಸಲಾಗುತ್ತಿದೆ. ರಮ್ಯಾ ಅವರು ಸಿನಿಮಾಗಳಲ್ಲಿ ಕಾಣಿಸಿಕೊಳ್ಳದೇ ಹಲವು ವರ್ಷಗಳೇ ಕಳೆದಿದ್ದರೂ ಕೂಡ ಅವರ ಬಗ್ಗೆ ಅಭಿಮಾನಿಗಳಿಗೆ ಕ್ರೇಜ್​ ಕಮ್ಮಿ ಆಗಿಲ್ಲ. ಆದಷ್ಟು ಬೇಗ ರಮ್ಯಾ ಕಮ್​ಬ್ಯಾಕ್​ ಮಾಡಲಿ ಎಂದು ಎಲ್ಲರೂ ಬಯಸುತ್ತಿದ್ದಾರೆ.

ರಮ್ಯಾ ನಟಿಸಿದ ಮೊದಲ ಸಿನಿಮಾ ‘ಅಭಿ’. 2003ರಲ್ಲಿ ಆ ಚಿತ್ರ ಬಿಡುಗಡೆ ಆಗಿತ್ತು. ಆಗ ರಮ್ಯಾ ಅವರಿಗೆ 21 ವರ್ಷ ವಯಸ್ಸು. ಆ ಚಿತ್ರದಿಂದ ಸಿಕ್ಕ ಭಾರಿ ಯಶಸ್ಸಿನ ಬಳಿಕ ಅವರಿಗೆ ಸ್ಯಾಂಡಲ್​ವುಡ್​ನಲ್ಲಿ ಹೇರಳ ಅವಕಾಶಗಳು ಒಲಿದು ಬಂದವು. ‘ಅಭಿ’ ನಂತರ ಪುನೀತ್​ ರಾಜ್​ಕುಮಾರ್​ ಜತೆ ‘ಆಕಾಶ್​’ ಮತ್ತು ‘ಅರಸು’ ಸಿನಿಮಾಗಳನ್ನು ಅವರು ಮಾಡಿದರು. ಸ್ಯಾಂಡಲ್​ವುಡ್​ನ ಸ್ಟಾರ್​ ನಟರ ಸಿನಿಮಾಗಳಿಗೆ ಅವರು ಬಹುಬೇಡಿಕೆಯ ಕಲಾವಿದೆಯಾಗಿ ಗುರುತಿಸಿಕೊಡರು.

ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಅವಕಾಶಗಳು ಇರುವಾಗಲೇ ರಮ್ಯಾಗೆ ರಾಜಕೀಯದಿಂದ ಬುಲಾವ್​ ಬಂತು. ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಸದೆ ಆಗಿಯೂ ಗೆದ್ದು ಬೀಗಿದರು. ರಾಜಕೀಯದಲ್ಲಿ ಕಾಂಗ್ರೆಸ್​ ಪಕ್ಷದ ಜೊತೆ ಗುರುತಿಸಿಕೊಂಡ ಬಳಿಕ ಅವರು ಚಿತ್ರರಂಗದಿಂದ ಸಂಪೂರ್ಣ ದೂರ ಉಳಿದುಕೊಂಡು. ಅಲ್ಲಿಂದೀಚೆಗೆ ಅವರು ಯಾವುದೇ ಹೊಸ ಸಿನಿಮಾವನ್ನೂ ಒಪ್ಪಿಕೊಂಡಿಲ್ಲ.

ರಮ್ಯಾ ಆದಷ್ಟು ಬೇಗ ಕಮ್​ಬ್ಯಾಕ್​ ಮಾಡಲಿ ಎಂಬ ಆಸೆಯನ್ನು ಅಭಿಮಾನಗಳು ವ್ಯಕ್ತಪಡಿಸುತ್ತಲೇ ಇದ್ದಾರೆ. ಆದರೆ ಅದಕ್ಕೆ ಕಾಲ ಕೂಡಿಬಂದಿಲ್ಲ. ಪುನೀತ್​ ರಾಜ್​ಕುಮಾರ್​ ಜತೆಗಿನ ಸಿನಿಮಾ ಮೂಲಕವೇ ರಮ್ಯಾ ಕಮ್​ಬ್ಯಾಕ್​ ಮಾಡಲು ಬಯಸಿದ್ದರು. ಆ ಕುರಿತು ಪುನೀತ್​ ಜತೆ ಮಾತುಕತೆ ಕೂಡ ನಡೆಯುತ್ತಿತ್ತು. ಅಷ್ಟರಲ್ಲಾಗಲೇ ಅಪ್ಪು ಇಹಲೋಕ ತ್ಯಜಿಸಿದ್ದು ನೋವಿನ ಸಂಗತಿ. ಅಪ್ಪು ಅವರ ಅಂತಿಮ ದರ್ಶನಕ್ಕೆ ಬಂದಾಗ ಆ ಬಗ್ಗೆ ರಮ್ಯಾ ಭಾವುಕವಾಗಿ ಮಾತನಾಡಿದ್ದರು.

ಇದನ್ನೂ ಓದಿ:

ಹಿಂದುತ್ವ ಮತ್ತು ಹಿಂದೂಯಿಸಂ ನಡುವಿನ ವ್ಯತ್ಯಾಸ ತಿಳಿಸಿದ ರಮ್ಯಾ; ವಾಸ್ತವ ವಿವರಿಸಿ ಬೇಸರ ವ್ಯಕ್ತಪಡಿಸಿದ ನಟಿ

ವಯಸ್ಸಿನ ಬಗ್ಗೆ ರಮ್ಯಾ ಆಡಿದ ಮಾತಿಗೆ ಕಿಚ್ಚನ ಪ್ರತಿಕ್ರಿಯೆ; ‘ಕೋಟಿಗೊಬ್ಬ 3’ ಸುದ್ದಿಗೋಷ್ಠಿಯಲ್ಲಿ ಸುದೀಪ್​ ಹೇಳಿದ್ದೇನು?

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?