ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಇಬ್ಬರ ಬಂಧನ; ಉಳಿದವರಿಗೆ ಶುರುವಾಗಿದೆ ಭಯ
Ramya Divya Spandan: ನಟಿ ರಮ್ಯಾ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶಗಳು ಬಂದಿದ್ದವು. ಇದಕ್ಕೆ ಅವರು ದೂರು ಕೂಡ ದಾಖಲು ಮಾಡಿದ್ದರು. ಈಗ ಈ ದೂರಿನ ಮೇಲೆ ಸಿಸಿಬಿ ಸೈಬರ್ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.ಇದರಿಂದ ಅನೇಕರಿಗೆ ನಡುಕ ಶುರುವಾಗಿದೆ .

ನಟಿ ರಮ್ಯಾ (Ramya) ಅವರಿಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶಗಳು ಬಂದಿದ್ದವು. ಇವರೆಲ್ಲ ದರ್ಶನ್ ಅಭಿಮಾನಿಗಳು ಎಂದು ಹೇಳಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಮ್ಯಾ ಸೈಬರ್ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲು ಮಾಡಿದ್ದರು. ಈ ಪ್ರಕರಣದಲ್ಲಿ ತ್ವರಿತ ಕ್ರಮ ಕೈಗೊಂಡಿರೋ ಪೊಲೀಸ್ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದು, ಒಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಇದರಿಂದ ಉಳಿದವರಿಗೆ ಭಯ ಶುರುವಾಗಿದೆ.
ರಮ್ಯಾ ಅವರು ಇತ್ತೀಚೆಗೆ ರೇಣುಕಾಸ್ವಾಮಿ ಪರ ಮಾತನಾಡಿದ್ದರು. ಸುಪ್ರೀಂ ಕೋರ್ಟ್ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯುವಾಗ ‘ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗೋ ಭರವಸೆ ಇದೆ’ ಎಂದಿದ್ದರು. ಇದು ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣ ಆಗಿತ್ತು. ದರ್ಶನ್ ಫ್ಯಾನ್ಸ್ ರಮ್ಯಾ ಅವರ ಸೋಶಿಯಲ್ ಮೀಡಿಯಾ ಪೋಸ್ಟ್ಗಳ ಕಮೆಂಟ್ ಬಾಕ್ಸ್ನಲ್ಲಿ ಅಶ್ಲೀಲ ಕಮೆಂಟ್ಗಳನ್ನು ಮಾಡಿದ್ದರು.
ಇಷ್ಟಕ್ಕೆ ನಿಲ್ಲಿಸದೆ ರಮ್ಯಾಗೆ ಕೆಟ್ಟ ಕೆಟ್ಟ ಮೆಸೇಜ್ಗಳನ್ನು ಕಳುಹಿಸಿದ್ದರು. ಇದನ್ನು ಸಹಿಸಿಕೊಳ್ಳದ ರಮ್ಯಾ ಅವರು ಹೋಗಿ ಸೈಬರ್ ಠಾಣೆಗೆ ದೂರು ದಾಖಲು ಮಾಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ ಸಿಸಿಬಿ ಸೈಬರ್ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಓರ್ವ, ಚಿತ್ರದುರ್ಗ ಮೂಲದ ಓರ್ವನ ಬಂಧನ ಆಗಿದೆ.
ಇದನ್ನೂ ಓದಿ: ರಮ್ಯಾಗೆ ಅಶ್ಲೀಲ ಕಮೆಂಟ್, ನಟಿ ಅದಿತಿ ಪ್ರಭುದೇವ ಹೇಳಿದ್ದು ಹೀಗೆ
ಈ ಪ್ರಕರಣಕ್ಕೆ ಇಲ್ಲಿಗೆ ನಿಲ್ಲುವುದಿಲ್ಲ. ಈ ಪ್ರಕರಣದಲ್ಲಿ ಇನ್ನೂ ಹೆಸರು ದಾಖಲಾಗಿದೆ. ಅವರ ಹುಡುಕಾಟ ನಡೆಯುತ್ತಿದೆ. ಹೀಗಾಗಿ, ಅನೇಕರಿಗೆ ನಡುಕ ಶುರುವಾಗಿದೆ. ಈ ಪ್ರಕರಣದಲ್ಲಿ ಕೇಸ್ ಆದರೆ ಅಭಿಮಾನಿ ತೋರಿಸಲು ಹೋದವರು ಕೋರ್ಟ್ಗೆ ಅಲೆಯುವ ಪರಿಸ್ಥಿತಿ ನಿರ್ಮಾಣ ಆಗಲಿದೆ.
ನಟಿ ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ತಮಗೆ ಬಂದ ಅಶ್ಲೀಲ ಸಂದೇಶಗಳ ಬಗ್ಗೆ ಮಾಹಿತಿ ನೀಡಿದ್ದರು. ಅದರ ಸ್ಕ್ರಿನ್ಶಾಟ್ಗಳನ್ನು ಹಂಚಿಕೊಂಡಿದ್ದರು. ಇದಾದ ಬಳಿಕ ಶಿವರಾಜ್ಕುಮಾರ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ರಮ್ಯಾ ಪರ ಬ್ಯಾಟ್ ಬೀಸಿದ್ದರು. ಈಗ ಸೈಬರ್ ಪೊಲೀಸರು ಪ್ರಕರಣದಲ್ಲಿ ಸೂಕ್ತ ಕ್ರಮ ಕೈಗೊಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 9:25 am, Sat, 2 August 25








