ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಇಬ್ಬರ ಬಂಧನ; ಉಳಿದವರಿಗೆ ಶುರುವಾಗಿದೆ ಭಯ

Ramya Divya Spandan: ನಟಿ ರಮ್ಯಾ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶಗಳು ಬಂದಿದ್ದವು. ಇದಕ್ಕೆ ಅವರು ದೂರು ಕೂಡ ದಾಖಲು ಮಾಡಿದ್ದರು. ಈಗ ಈ ದೂರಿನ ಮೇಲೆ ಸಿಸಿಬಿ ಸೈಬರ್ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.ಇದರಿಂದ ಅನೇಕರಿಗೆ ನಡುಕ ಶುರುವಾಗಿದೆ .

ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಇಬ್ಬರ ಬಂಧನ; ಉಳಿದವರಿಗೆ ಶುರುವಾಗಿದೆ ಭಯ
ರಮ್ಯಾ

Updated on: Aug 02, 2025 | 9:56 AM

ನಟಿ ರಮ್ಯಾ (Ramya) ಅವರಿಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶಗಳು ಬಂದಿದ್ದವು. ಇವರೆಲ್ಲ ದರ್ಶನ್ ಅಭಿಮಾನಿಗಳು ಎಂದು ಹೇಳಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಮ್ಯಾ ಸೈಬರ್ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲು ಮಾಡಿದ್ದರು. ಈ ಪ್ರಕರಣದಲ್ಲಿ ತ್ವರಿತ ಕ್ರಮ ಕೈಗೊಂಡಿರೋ ಪೊಲೀಸ್ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದು, ಒಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಇದರಿಂದ ಉಳಿದವರಿಗೆ ಭಯ ಶುರುವಾಗಿದೆ.

ರಮ್ಯಾ ಅವರು ಇತ್ತೀಚೆಗೆ ರೇಣುಕಾಸ್ವಾಮಿ ಪರ ಮಾತನಾಡಿದ್ದರು. ಸುಪ್ರೀಂ ಕೋರ್ಟ್​​ನಲ್ಲಿ ದರ್ಶನ್ ಜಾಮೀನು  ಅರ್ಜಿ ವಿಚಾರಣೆ ನಡೆಯುವಾಗ ‘ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗೋ ಭರವಸೆ ಇದೆ’ ಎಂದಿದ್ದರು. ಇದು ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣ ಆಗಿತ್ತು. ದರ್ಶನ್ ಫ್ಯಾನ್ಸ್ ರಮ್ಯಾ ಅವರ ಸೋಶಿಯಲ್ ಮೀಡಿಯಾ ಪೋಸ್ಟ್​ಗಳ ಕಮೆಂಟ್ ಬಾಕ್ಸ್​​ನಲ್ಲಿ ಅಶ್ಲೀಲ ಕಮೆಂಟ್​ಗಳನ್ನು ಮಾಡಿದ್ದರು.

ಇಷ್ಟಕ್ಕೆ ನಿಲ್ಲಿಸದೆ ರಮ್ಯಾಗೆ ಕೆಟ್ಟ ಕೆಟ್ಟ ಮೆಸೇಜ್​ಗಳನ್ನು ಕಳುಹಿಸಿದ್ದರು. ಇದನ್ನು ಸಹಿಸಿಕೊಳ್ಳದ ರಮ್ಯಾ ಅವರು ಹೋಗಿ ಸೈಬರ್ ಠಾಣೆಗೆ ದೂರು ದಾಖಲು ಮಾಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ ಸಿಸಿಬಿ ಸೈಬರ್ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಓರ್ವ, ಚಿತ್ರದುರ್ಗ ಮೂಲದ ಓರ್ವನ ಬಂಧನ ಆಗಿದೆ.

ಇದನ್ನೂ ಓದಿ
ಸಮಂತಾ ಕೈಯಲ್ಲಿ ಹೊಸ ಉಂಗುರ; ಹುಟ್ಟಿತು ನಿಶ್ಚಿತಾರ್ಥದ ಚರ್ಚೆ
‘ಕೊತ್ತಲವಾಡಿ’ ಸಿನಿಮಾದ ಮೊದಲ ದಿನದ ಗಳಿಕೆ ಎಷ್ಟು?
ಗಂಟೆಗೆ 11 ಸಾವಿರ ಟಿಕೆಟ್ ಮಾರಿದ ಸು ಫ್ರಮ್ ಸೋ; ಶುಕ್ರವಾರ ದಾಖಲೆ ಕಲೆಕ್ಷನ್
‘ಸು ಫ್ರಮ್ ಸೋ’ ಗೆದ್ದ ಖುಷಿಯಲ್ಲಿ ಬಾವ ಹೇಳೋದೇನು? ಯಾರಿವರು?

ಇದನ್ನೂ ಓದಿ: ರಮ್ಯಾಗೆ ಅಶ್ಲೀಲ ಕಮೆಂಟ್, ನಟಿ ಅದಿತಿ ಪ್ರಭುದೇವ ಹೇಳಿದ್ದು ಹೀಗೆ

ಈ ಪ್ರಕರಣಕ್ಕೆ ಇಲ್ಲಿಗೆ ನಿಲ್ಲುವುದಿಲ್ಲ. ಈ ಪ್ರಕರಣದಲ್ಲಿ ಇನ್ನೂ ಹೆಸರು ದಾಖಲಾಗಿದೆ. ಅವರ ಹುಡುಕಾಟ ನಡೆಯುತ್ತಿದೆ. ಹೀಗಾಗಿ, ಅನೇಕರಿಗೆ ನಡುಕ ಶುರುವಾಗಿದೆ. ಈ ಪ್ರಕರಣದಲ್ಲಿ ಕೇಸ್ ಆದರೆ ಅಭಿಮಾನಿ ತೋರಿಸಲು ಹೋದವರು ಕೋರ್ಟ್​ಗೆ ಅಲೆಯುವ ಪರಿಸ್ಥಿತಿ ನಿರ್ಮಾಣ ಆಗಲಿದೆ.

ನಟಿ ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ತಮಗೆ ಬಂದ ಅಶ್ಲೀಲ ಸಂದೇಶಗಳ ಬಗ್ಗೆ ಮಾಹಿತಿ ನೀಡಿದ್ದರು. ಅದರ ಸ್ಕ್ರಿನ್​ಶಾಟ್​ಗಳನ್ನು ಹಂಚಿಕೊಂಡಿದ್ದರು. ಇದಾದ ಬಳಿಕ ಶಿವರಾಜ್​ಕುಮಾರ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ರಮ್ಯಾ ಪರ ಬ್ಯಾಟ್ ಬೀಸಿದ್ದರು. ಈಗ ಸೈಬರ್ ಪೊಲೀಸರು ಪ್ರಕರಣದಲ್ಲಿ ಸೂಕ್ತ ಕ್ರಮ ಕೈಗೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:25 am, Sat, 2 August 25