ಹೇಗಿದೆ ಸತೀಶ್​ ನೀನಾಸಂ ತಮಿಳು ಸಿನಿಮಾ ಲುಕ್​?; ರಮ್ಯಾ ರಿಲೀಸ್​ ಮಾಡಿದ್ರು ಪೋಸ್ಟರ್​

ನೀನಾಸಂ ಸತೀಶ್​ ಅವರ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಕೊವಿಡ್​ ಕಾರಣದಿಂದ ಕೆಲಸ ಸಿನಿಮಾಗಳ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ.

ಹೇಗಿದೆ ಸತೀಶ್​ ನೀನಾಸಂ ತಮಿಳು ಸಿನಿಮಾ ಲುಕ್​?; ರಮ್ಯಾ ರಿಲೀಸ್​ ಮಾಡಿದ್ರು ಪೋಸ್ಟರ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 08, 2021 | 5:35 PM

ನಟ ಸತೀಶ್​ ನೀನಾಸಂ ಅವರು ತಮಿಳಿನ ‘ಪಗೈವನುಕು ಅರುಳ್ಳಾಯ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಸತೀಶ್​ ಲುಕ್​ ಹೇಗಿದೆ ಎನ್ನುವ ಕುತೂಹಲ ಪ್ರೇಕ್ಷಕರಲ್ಲಿ ಮೂಡಿತ್ತು. ಇದಕ್ಕೆ, ನಟಿ ರಮ್ಯಾ ಉತ್ತರ ನೀಡಿದ್ದಾರೆ. ಅವರು ‘ಪಗೈವನುಕು ಅರುಳ್ಳಾಯ್’ ಪೋಸ್ಟರ್​ ರಿಲೀಸ್​ ಮಾಡಿದ್ದಾರೆ. ಹೊಸ ಪೋಸ್ಟರ್​ನಲ್ಲಿ ಸತೀಶ್​ ಲುಕ್​ ಸಾಕಷ್ಟು ಗಮನ ಸೆಳೆಯುತ್ತಿದೆ. ಅವರು ಕೈಯಲ್ಲಿ ಸಿಗಾರ್​ ಇಟ್ಟುಕೊಂಡು ಸೇದುತ್ತಿದ್ದಾರೆ. ಈ ಪೋಸ್ಟರ್​ ರಮ್ಯಾ ರಿಲೀಸ್​ ಮಾಡಿರುವುದರಿಂದ ಚಿತ್ರಕ್ಕೆ ಒಳ್ಳೆಯ ಮೈಲೇಜ್​ ಸಿಗುವ ಎಲ್ಲಾ ಲಕ್ಷಣ ಗೋಚರವಾಗಿದೆ.

ಮಧ್ಯಾಹ್ನ ಈ ಬಗ್ಗೆ ರಮ್ಯಾ ಬರೆದುಕೊಂಡಿದ್ದರು. ‘ಕನ್ನಡದ ನಮ್ಮ ಹೆಮ್ಮೆಯ ನಟ ಸತೀಶ್ ನೀನಾಸಂ ಅವರ ‘ಪಗೈವನುಕು ಅರುಳ್ಳಾಯ್’ ಚಿತ್ರದ ಪಾತ್ರದ ಪೋಸ್ಟರ್ ಇಂದು ಸಂಜೆ 5ಕ್ಕೆ ತುಂಬಾ ಉತ್ಸಾಹದಿಂದ ಲಾಂಚ್ ಮಾಡುತ್ತಿದ್ದೇನೆ. ಮೊದಲ ಬಾರಿಗೆ ಸತೀಶ್ ನೀನಾಸಂ ಅವರು ತಮಿಳಿನಲ್ಲಿ ನಟಿಸುತ್ತಿದ್ದಾರೆ. ನಮ್ಮ ನಟರು ಬೇರೆ ಭಾಷೆಯಲ್ಲಿ ಬೆಳೆಯುತ್ತಿರುವುದು ನಮ್ಮ ಹೆಮ್ಮೆ. ಮೊದಲ ನೋಟಕ್ಕೆ ಸಂಜೆವರೆಗೆ ಕಾಯುತ್ತಿರಿ’ ಎಂದಿದ್ದರು. ಅಂತೆಯೇ ರಮ್ಯಾ ಐದು ಗಂಟೆಗೆ ಫಸ್ಟ್​ ಲುಕ್​ ರಿಲೀಸ್​ ಮಾಡಿದ್ದಾರೆ.

ರಮ್ಯಾ ಇತ್ತೀಚೆಗೆ ಸಿನಿಮಾ ಕೆಲಸಗಳತ್ತ ಮುಖ ಮಾಡಿಲ್ಲ. ಅವರು ಈ ರೀತಿ ಪೋಸ್ಟರ್​ ರಿಲೀಸ್​ ಮಾಡಿದ ಉದಾಹರಣೆ ಇಲ್ಲ. ಆದರೆ, ಈಗ ಅವರು ಮತ್ತೆ ಸಿನಿಮಾ ಕೆಲಸಗಳಲ್ಲಿತಮ್ಮನ್ನು ತೊಡಗಿಸಿಕೊಂಡಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. ಅಲ್ಲದೆ, ಅವರು ಮತ್ತೇನಾದರೂ ಚಿತ್ರರಂಗಕ್ಕೆ ಮರಳುತ್ತಾರಾ ಎನ್ನುವ ಕೌತುಕ ಕೂಡ ಮೂಡಿದೆ.

ನೀನಾಸಂ ಸತೀಶ್​ ಅವರ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಕೊವಿಡ್​ ಕಾರಣದಿಂದ ಕೆಲಸ ಸಿನಿಮಾಗಳ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ. ಇನ್ನೂ ಕೆಲವು ಶೂಟಿಂಗ್​ ಹಂತದಲ್ಲಿವೆ.

ಇದನ್ನೂ ಓದಿ: ‘ನೀಚವಾಗಿ ಬೈಯ್ದು, ರಾಜಕೀಯ ಮಾಡುವವರ ಲೆವೆಲ್​ಗೆ ರಮ್ಯಾ ಇಳಿಯಲ್ಲ’: ಕವಿತಾ ಲಂಕೇಶ್​

‘ಮಾನಸಿಕವಾಗಿ ಆ ಬಾಲಕಿಗೆ ಎಷ್ಟು ಘಾಸಿ ಆಗಿರಬಹುದು’; ಚಿಕ್ಕಮಗಳೂರು ಘಟನೆ ಬಗ್ಗೆ ಬರೆದುಕೊಂಡ ರಮ್ಯಾ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ