AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಬಂದ ಕೇಂದ್ರದ ವಿರುದ್ಧ ಕಿಡಿಕಾರಿದ ನಟಿ ರಮ್ಯಾ

‘ಭಾರತೀಯ ಸಿನಿಮಾ ದಾಳಿಗೆ ಒಳಗಾಗಿದೆ’ ಎಂದು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾದ ಪೋಸ್ಟ್​​ಅನ್ನು ರಮ್ಯಾ ಇನ್​ಸ್ಟಾಗ್ರಾಂ ಸ್ಟೋರಿಯಲ್ಲಿ ಶೇರ್​ ಮಾಡಿಕೊಂಡು, ಆ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಸಿನಿಮಾ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಬಂದ ಕೇಂದ್ರದ ವಿರುದ್ಧ ಕಿಡಿಕಾರಿದ ನಟಿ ರಮ್ಯಾ
ರಮ್ಯಾ
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: Jul 01, 2021 | 4:45 PM

Share

ಸಿನಿಮಾಟೋಗ್ರಾಫ್​ ಕಾಯ್ದೆಗೆ ಕೆಲವು ತಿದ್ದುಪಡಿ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಸೆನ್ಸಾರ್​ಶಿಪ್​ನಲ್ಲಿ ಬದಲಾವಣೆ ತರುವುದು ಈ ನಿಯಮದ ಮುಖ್ಯ ಉದ್ದೇಶ. ಈ ಬಗ್ಗೆ ಸಲಹೆ ನೀಡಲು ಸಾರ್ವಜನಿಕರಿಗೆ ಕೇಂದ್ರ ಸರ್ಕಾರ ಮುಕ್ತ ಅವಕಾಶ ನೀಡಿದೆ. ಈಗ ನಟಿ, ರಾಜಕಾರಣಿ ರಮ್ಯಾ ಈ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

‘ಭಾರತೀಯ ಸಿನಿಮಾ ದಾಳಿಗೆ ಒಳಗಾಗಿದೆ’ ಎಂದು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾದ ಪೋಸ್ಟ್​​ಅನ್ನು ರಮ್ಯಾ ಇನ್​ಸ್ಟಾಗ್ರಾಂ ಸ್ಟೋರಿಯಲ್ಲಿ ಶೇರ್​ ಮಾಡಿಕೊಂಡು, ಆ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಅಲ್ಲದೆ, ಕೇಂದ್ರ ಸರ್ಕಾರ ಮಾಡಲು ಹೊರಟಿರುವ ಬದಲಾವಣೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

‘ನಾವು ನೋಡುವ ವಿಚಾರದ ಮೇಲೆ ಕೇಂದ್ರ ಸರ್ಕಾರ ಏಕೆ ಹಸ್ತಕ್ಷೇಪ ಮಾಡುತ್ತಿದೆ? ಕೇಂದ್ರದವರು ಎಲ್ಲಾ ಕಡೆಗಳಲ್ಲೂ ಇದ್ದಾರೆ. ನಮ್ಮ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದ್ದಾರೆ. ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್​​ಸಿ) ಈಗಾಗಲೇ ಎಲ್ಲವನ್ನೂ ರೆಗ್ಯೂಲೇಟ್​ ಮಾಡುತ್ತಿದೆ’ ಎಂದು ಹೇಳುವ ಮೂಲಕ ಸರ್ಕಾರದ ನಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಸದ್ಯದ ಕಾನೂನಿನ ಪ್ರಕಾರ, ಒಮ್ಮೆ ಸೆನ್ಸಾರ್​ ಮಂಡಳಿ ಸದಸ್ಯರು ಸಿನಿಮಾಗೆ ಸೆನ್ಸಾರ್​ ಪ್ರಮಾಣಪತ್ರ ನೀಡಿದ ಬಳಿಕ ಅದನ್ನು ಮತ್ತೆ ಪ್ರಶ್ನಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲ. ಆದರೆ ಸಿನಿಮಾಟೋಗ್ರಾಫ್​ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಆ ಅಧಿಕಾರವನ್ನು ಕೇಂದ್ರ ಸರ್ಕಾರ ಪಡೆದುಕೊಳ್ಳಲು ಆಲೋಚಿಸಿದೆ. ಒಮ್ಮೆ ಸೆನ್ಸಾರ್​ ಆದ ಚಿತ್ರವು ರಿಲೀಸ್​ ಆದ ಬಳಿಕ ಜನರಿಂದ ತೀವ್ರ ಆಕ್ಷೇಪಕ್ಕೆ ಗುರಿಯಾದರೆ ಅಂತಹ ಸಿನಿಮಾವನ್ನು ಮತ್ತೊಮ್ಮೆ ಮರು ಸೆನ್ಸಾರ್​ ಮಾಡಲು ಆದೇಶಿಸುವ ಅಧಿಕಾರವನ್ನು ಕೇಂದ್ರ ಸರ್ಕಾರ ಪಡೆದುಕೊಳ್ಳಲಿದೆ. ಇದರ ಜತೆಗೆ ವೀಕ್ಷಕರ ವಯಸ್ಸಿನ ಆಧಾರದ ಮೇಲೆ ಇನ್ನಷ್ಟು ವರ್ಗೀಕರಣ ಮಾಡಲು ಕೇಂದ್ರ ತೀರ್ಮಾನಿಸಿದೆ. ಈ ಬಗ್ಗೆ ಜನರಿಂದ ಪ್ರತಿಕ್ರಿಯೆ ಸ್ವೀಕರಿಸಲಾಗುತ್ತಿದೆ.

ಇದನ್ನೂ ಓದಿ: ವಿದೇಶಕ್ಕೆ ಹೋದಾಗ ರಾಹುಲ್​ ಗಾಂಧಿ ವಿಚಾರದಲ್ಲಿ ಮಾಡಿದ್ದ ದೊಡ್ಡ ತಪ್ಪಿನ ಬಗ್ಗೆ ಬಾಯ್ಬಿಟ್ಟ ರಮ್ಯಾ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ