ವಿದೇಶದಲ್ಲಿ ಬರ್ತ್​ಡೇ ಆಚರಿಸಿಕೊಂಡ ನಟಿ ರಮ್ಯಾ; ಹುಡುಗ ಯಾರು?

ನಟಿ ರಮ್ಯಾ ಅವರು ತಮ್ಮ ಜನ್ಮದಿನವನ್ನು ಕೀನ್ಯಾದ ಮಸಾಯಿ ಮಾರ ರಾಷ್ಟ್ರೀಯ ಮೀಸಲು ಪ್ರದೇಶದಲ್ಲಿ ಆಚರಿಸಿಕೊಂಡಿದ್ದಾರೆ. ಇತ್ತೀಚೆಗೆ ಅಭಿನಯದಿಂದ ದೂರ ಉಳಿದಿರುವ ರಮ್ಯಾ ಅವರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅವರ ಆಪ್ತ ಗೆಳೆಯ ಸಂಜೀವ್ ಮೋಹನ್ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ವಿದೇಶದಲ್ಲಿ ಬರ್ತ್​ಡೇ ಆಚರಿಸಿಕೊಂಡ ನಟಿ ರಮ್ಯಾ; ಹುಡುಗ ಯಾರು?
ದಿವ್ಯಾ ಸ್ಪಂದನ
Follow us
ರಾಜೇಶ್ ದುಗ್ಗುಮನೆ
|

Updated on: Nov 29, 2024 | 2:34 PM

ನಟಿ ರಮ್ಯಾ ಅವರು ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದಾರೆ. ನಟಿಯಾಗಿ ಕಂಬ್ಯಾಕ್ ಮಾಡಬೇಕು ಎಂದು ಅವರು ಅಂದುಕೊಳ್ಳುತ್ತಿದ್ದರೂ ಅದಕ್ಕೆ ಸಮಯ ಕೂಡಿ ಬರುತ್ತಿಲ್ಲ. ಅವರು ಯಾವುದೇ ಹೊಸ ಸಿನಿಮಾ ಕೂಡ ಘೋಷಣೆ ಮಾಡಿಲ್ಲ. ಈಗ ರಮ್ಯಾ ಅವರ ಕೆಲ ಫೋಟೋಗಳು ವೈರಲ್ ಆಗಿವೆ. ಕೀನ್ಯಾದ ಮಸಾಯಿ ಮಾರ ರಾಷ್ಟ್ರೀಯ ಮೀಸಲು ಭಾಗದಲ್ಲಿ ಅವರು ಜನ್ಮದಿನ ಆಚರಿಸಿಕೊಂಡಿದ್ದಾರೆ. ಗೆಳೆಯರ ಜೊತೆ ಈ ಭಾಗದಲ್ಲಿ ಸುತ್ತಾಟ ನಡೆಸಿದ್ದಾರೆ.

ರಮ್ಯಾಗೆ ಇಂದು (ನವೆಂಬರ್ 29) ಜನ್ಮದಿನ. ಪ್ರತಿ ಬಾರಿ ಜನ್ಮದಿನಕ್ಕೆ ಅವರು ನಾನಾ ಕಡೆಗಳಲ್ಲಿ ಸುತ್ತಾಟ ನಡೆಸುತ್ತಾರೆ. ಕೆಲವೊಮ್ಮೆ ಈ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ. ಇನ್ನೂ ಕೆಲವು ಸಂದರ್ಭಗಳಲ್ಲಿ ಅವರು ಫೋಟೋನ ಪೋಸ್ಟ್ ಮಾಡಲು ಇಚ್ಛಿಸುವುದಿಲ್ಲ. ಈಗಲೂ ರಮ್ಯಾ ಅವರು ಫೋಟೋನ ಪೋಸ್ಟ್ ಮಾಡಿಲ್ಲ. ಆದರೆ, ಅವರ ಗೆಳೆಯರಿಂದ ರಮ್ಯಾ ಅವರು ಕೀನ್ಯಾದಲ್ಲಿದ್ದಾರೆ ಎಂಬ ವಿಚಾರ ಗೊತ್ತಾಗಿದೆ.

ರಮ್ಯಾ ಅವರು ಆಪ್ತ ವಲಯದಲ್ಲಿರುವ ಸಂಜೀವ್ ಮೋಹನ್ ಎಂಬುವವರು ಅವರ ಫೋಟೋನ ಪೋಸ್ಟ್ ಮಾಡಿದ್ದಾರೆ. ರಮ್ಯಾ ಅವರಿಗೆ ಸಂಜೀವ್ ಜೊತೆ ಒಳ್ಳೆಯ ಗೆಳೆತನ ಇದೆ. ಈ ಮೊದಲಿನಿಂದಲೂ ಸಂಜೀವ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ರಮ್ಯಾ ಫೋಟೋಗಳನ್ನು ಹಂಚಿಕೊಳ್ಳುತ್ತಾ ಬರುತ್ತಿದ್ದಾರೆ. ಈಗ ಹಂಚಿಕೊಂಡಿರೋ ಫೋಟೋ ಗಮನ ಸೆಳೆದಿದೆ.

‘ಹ್ಯಾಪಿ ಬರ್ತ್​ಡೇ ದಿವು. ಯಾವಾಗಲೂ ಪ್ರೀತಿಸುತ್ತೇನೆ. ನಿಮ್ಮ ಜೊತೆ ಇರೋದು ಯಾವಾಗಲೂ ಸುಂದರವಾಗಿರುತ್ತದೆ’ ಎಂದು ಸಂಜೀವ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್​ಗೆ ಮಸಾಯಿ ಮಾರ, ಕೀನ್ಯಾ ಎಂದು ಲೊಕೇಶನ್ ನೀಡಿದ್ದಾರೆ. ಸದ್ಯ ಸಂಜೀವ್ ಅವರು ಕೀನ್ಯಾದಲ್ಲಿಯೇ ಇದ್ದಾರೆ. ಮಸಾಯಿ ಮಾರದಲ್ಲಿರುವ ಫೋಟೋಗಳನ್ನು ಸ್ಟೇಟಸ್​ನಲ್ಲಿ ಹಂಚಿಕೊಳ್ಳುತ್ತಾ ಇದ್ದಾರೆ.

ಇದನ್ನೂ ಓದಿ: ಮದುವೆ ವದಂತಿ ಬಗ್ಗೆ ಮೌನ ಮುರಿದ ರಮ್ಯಾ; ಸ್ಯಾಂಡಲ್​ವುಡ್​ ಕ್ವೀನ್​ ಹೇಳಿದ್ದೇನು?

ರಮ್ಯಾ ಅವರು ಇತ್ತೀಚೆಗೆ ನಟನೆಯಿಂದ ದೂರವೇ ಇದ್ದರು. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರ ಮಾಡಿದ್ದರು. ತಮ್ಮ ಒಪ್ಪಿಗೆ ಇಲ್ಲದೆ ದೃಶ್ಯಗಳನ್ನು ಬಳಕೆ ಮಾಡಲಾಗಿದೆ ಎಂದು ರಮ್ಯಾ ಆರೋಪಿಸಿ ಕೋರ್ಟ್ ಮೆಟ್ಟಿಲೇರಿದ್ದರು. ಧನಂಜಯ್ ನಟನೆಯ ‘ಉತ್ತರಕಾಂಡ’ ಸಿನಿಮಾದಲ್ಲಿ ಅವರು ನಾಯಕಿ ಆಗಿ ನಟಿಸಬೇಕಿತ್ತು. ಆದರೆ, ಈ ಚಿತ್ರದಿಂದ ಅವರು ಹೊರಕ್ಕೆ ಬಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್