‘ವಿಚಾರಣೆ ಮುಗಿದು, ಪ್ರಕರಣಕ್ಕೆ ತಾರ್ಕಿಕ ತೀರ್ಮಾನ ಸಿಕ್ಕರೆ ನ್ಯಾಯ ಸಿಕ್ಕಂತೆ’; ರಮ್ಯಾ

ನಟಿ ರಮ್ಯಾ ಅವರು ಸದ್ಯ ನಟನೆಯಿಂದ ದೂರವೇ ಇದ್ದಾರೆ. ಅವರು ‘ಉತ್ತರಕಾಂಡ’ ಸಿನಿಮಾದಲ್ಲಿ ಅವರು ನಟಿಸಬೇಕಿತ್ತು. ಆದರೆ, ಅವರು ಚಿತ್ರದಿಂದ ಹಿಂದೆ ಸರಿದಿದ್ದಾರೆ. ಸದ್ಯ ರಮ್ಯಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ವಿಚಾರಗಳ ಬಗ್ಗೆ ಮಾತನಾಡುತ್ತಿದ್ದಾರೆ. ಈಗ ರಮ್ಯಾ ಹೊಸ ಪೋಸ್ಟ್ ಹಾಕಿದ್ದಾರೆ.

‘ವಿಚಾರಣೆ ಮುಗಿದು, ಪ್ರಕರಣಕ್ಕೆ ತಾರ್ಕಿಕ ತೀರ್ಮಾನ ಸಿಕ್ಕರೆ ನ್ಯಾಯ ಸಿಕ್ಕಂತೆ’; ರಮ್ಯಾ
‘ವಿಚಾರಣೆ ಮುಗಿದು, ಪ್ರಕರಣಕ್ಕೆ ತಾರ್ಕಿಕ ತೀರ್ಮಾನ ಸಿಕ್ಕರೆ ನ್ಯಾಯ ಸಿಕ್ಕಂತೆ ಆಗುತ್ತದೆ’; ರಮ್ಯಾ
Follow us
ರಾಜೇಶ್ ದುಗ್ಗುಮನೆ
|

Updated on:Jun 22, 2024 | 12:38 PM

ಕರ್ನಾಟಕದಲ್ಲಿ ಹಲವು ರೀತಿಯ ಬೆಳವಣಿಗೆ ನಡೆಯುತ್ತಿದೆ. ಹಲವು ಸೆಲೆಬ್ರಿಟಿಗಳು ಬೇರೆ ಬೇರೆ ಪ್ರಕರಣದಲ್ಲಿ ಸಿಕ್ಕಿ ಬಿದ್ದಿದ್ದಾರೆ. ದರ್ಶನ್ (Darshan)​ ಕೊಲೆ ಕೇಸ್, ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆ, ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್, ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ಇದೆ. ಈ ಎಲ್ಲಾ ಪ್ರಕರಣಗಳ ಬಗ್ಗೆ ರಮ್ಯಾ ಅವರು ಟ್ವೀಟ್ ಮಾಡಿದ್ದಾರೆ.

ನಟಿ ರಮ್ಯಾ ಅವರು ಸದ್ಯ ನಟನೆಯಿಂದ ದೂರವೇ ಇದ್ದಾರೆ. ಅವರು ‘ಉತ್ತರಕಾಂಡ’ ಸಿನಿಮಾದಲ್ಲಿ ಅವರು ನಟಿಸಬೇಕಿತ್ತು. ಆದರೆ, ಅವರು ಚಿತ್ರದಿಂದ ಹಿಂದೆ ಸರಿದಿದ್ದಾರೆ. ಸದ್ಯ ರಮ್ಯಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ವಿಚಾರಗಳ ಬಗ್ಗೆ ಮಾತನಾಡುತ್ತಿದ್ದಾರೆ. ಈಗ ರಮ್ಯಾ ಹೊಸ ಪೋಸ್ಟ್ ಹಾಕಿದ್ದಾರೆ.

ಇದನ್ನೂ ಓದಿ: ‘ನನಗೂ ಕೆಟ್ಟ ಕಮೆಂಟ್ ಬಂದಿತ್ತು’: ದರ್ಶನ್​ ಕೇಸ್​ ಬಗ್ಗೆ ರಮ್ಯಾ ಖಡಕ್​ ಮಾತುಗಳು

‘ಸುದ್ದಿಯಲ್ಲಿರುವ ಕಾನೂನನ್ನು ಮುರಿಯುವವರು, ಶ್ರೀಮಂತರು ಮತ್ತು ಶಕ್ತಿಶಾಲಿಗಳು ಮತ್ತು ಅವರ ಹಿಂಸಾತ್ಮಕ ಕ್ರಿಯೆಗಳಿಂದ ತೊಂದರೆ ಅನುಭವಿಸಿದವರು ಬಡವರು, ಮಹಿಳೆಯರು ಮತ್ತು ಮಕ್ಕಳು ಹಾಗೂ ಕರ್ನಾಟಕದ ಜನಸಾಮಾನ್ಯರು. ಈ ಅಪರಾಧಗಳನ್ನು ಹೊರಗೆ ತಂದ ಪೊಲೀಸರಿಗೆ ಮತ್ತು ಮಾಧ್ಯಮಗಳಿಗೆ ಹ್ಯಾಟ್ಸ್ ಆಫ್. ವಿಚಾರಣೆ ಪೂರ್ಣಗೊಂಡು ಪ್ರಕರಣಕ್ಕೆ ತಾರ್ಕಿಕ ತೀರ್ಮಾನ ಸಿಕ್ಕರೆ ನ್ಯಾಯ ಸಿಕ್ಕಂತೆ ಆಗುತ್ತದೆ. ನ್ಯಾಯ ಸಿಗದಿದ್ದರೆ ಸಾರ್ವಜನಿಕರಿಗೆ ನಾವೇನು ​​ಸಂದೇಶ ನೀಡುತ್ತಿದ್ದೇವೆ?’ ಎಂದು ರಮ್ಯಾ ಹೇಳಿದ್ದಾರೆ. ಇದರ ಜೊತೆಗೆ ದರ್ಶನ್, ಯಡಿಯೂರಪ್ಪ, ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣ ಹ್ಯಾಶ್ ಟ್ಯಾಗ್ ಹಾಕಿದ್ದಾರೆ.

ಈ ಮೊದಲು ದರ್ಶನ್ ಬಗ್ಗೆ ಪೋಸ್ಟ್ ಮಾಡಿದ್ದ ರಮ್ಯಾ, ‘ಕಾನೂನಿಗಿಂತ ಯಾರೂ ಕೂಡ ದೊಡ್ಡವರಲ್ಲ. ಕಾನೂನನ್ನು ಯಾರೂ ತಮ್ಮ ಕೈಗೆ ತೆಗೆದುಕೊಳ್ಳಬಾರದು. ಜನರನ್ನು ನೀವು ಹೋಗಿ ಹೊಡೆದು ಕೊಲ್ಲುವುದಲ್ಲ. ಒಂದು ಸರಳವಾದ ದೂರು ಸಾಕು. ಈಗ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್​ ಅಧಿಕಾರಿಗಳಿಗೆ ನಾನು ಮೆಚ್ಚುಗೆ ಮತ್ತು ಗೌರವ ಸಲ್ಲಿಸುತ್ತೇನೆ. ಅವರದ್ದು ಕೃತಜ್ಞತೆ ಇಲ್ಲದ ಕೆಲಸ. ಅತ್ಯುತ್ತಮವಾಗಿ ಅವರು ಕೆಲಸ ಮಾಡುತ್ತಿದ್ದಾರೆ. ರಾಜಕೀಯ ಪಕ್ಷಗಳ ಒತ್ತಡಕ್ಕೆ ಅವರು ಮಣಿಯುವುದಿಲ್ಲ ಹಾಗೂ ಕಾನೂನಿನ ಮೇಲೆ ಜನರ ಭರವಸೆಯನ್ನು ಉಳಿಸುತ್ತಾರೆ ಅಂತ ನಾನು ನಂಬಿದ್ದೇನೆ’ಎಂದಿದ್ದರು ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:36 pm, Sat, 22 June 24

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್