AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನ ಕಳ್ಳಸಾಗಣೆ: ಮಾರ್ಚ್ 18ರವರೆಗೆ ನಟಿ ರನ್ಯಾ ರಾವ್​ಗೆ ನ್ಯಾಯಾಂಗ ಬಂಧನ

ಹಿರಿಯ ಪೊಲೀಸ್ ಆಧಿಕಾರಿ ಮಗಳು, ನಟಿ ರನ್ಯಾ ಅವರು ಈಗ ಜೈಲುಪಾಲಾಗಿದ್ದಾರೆ. ಚಿನ್ನ ಕಳ್ಳ ಸಾಗಣಿಕೆ ಮಾಡಿದ ಆರೋಪದಲ್ಲಿ ಅವರನ್ನು ಬಂಧಿಸಲಾಗಿದೆ. ಈಗ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ‘ಪಟಾಕಿ’, ‘ಮಾಣಿಕ್ಯ’ ಮುಂತಾದ ಸಿನಿಮಾಗಳಲ್ಲಿ ಅಭಿನಯಿಸಿದ ರನ್ಯಾ ಅವರು ಜೈಲುವಾಸ ಅನುಭವಿಸುಂತಾಗಿದೆ.

ಚಿನ್ನ ಕಳ್ಳಸಾಗಣೆ: ಮಾರ್ಚ್ 18ರವರೆಗೆ ನಟಿ ರನ್ಯಾ ರಾವ್​ಗೆ ನ್ಯಾಯಾಂಗ ಬಂಧನ
Ranya Rao
Follow us
ಮದನ್​ ಕುಮಾರ್​
|

Updated on:Mar 04, 2025 | 9:40 PM

ನಟಿ ರನ್ಯಾ ರಾವ್ (Ranya Rao) ಅವರಿಗೆ ಸಂಕಷ್ಟ ಹೆಚ್ಚಾಗಿದೆ. ದುಬೈನಿಂದ ಗೋಲ್ಡ್ ಸ್ಮಗ್ಲಿಂಗ್ ಮಾಡುತ್ತಿದ್ದ ಅವರು ಸಿಕ್ಕಿ ಬಿದ್ದಿದ್ದಾರೆ. ಇಂದು (ಮಾರ್ಚ್​ 4) ಸಂಜೆ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಮಾರ್ಚ್ 18ರವರೆಗೆ ರನ್ಯಾ ರಾವ್​ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ನ್ಯಾಯಾಧೀಶರು ಈ ಆದೇಶ ನೀಡಿದ್ದಾರೆ. ‘ಮಾಣಿಕ್ಯ’, ‘ಪಟಾಕಿ’ ಮುಂತಾದ ಸಿನಿಮಾಗಳಲ್ಲಿ ನಟಿಸಿರುವ ರನ್ಯಾ ಅವರು ಡಿಜಿಪಿ ಡಾ. ಕೆ ರಾಮಚಂದ್ರ ರಾವ್ ಅವರ ಮಲಮಗಳು.

ಕಳೆದ ರಾತ್ರಿ ದುಬೈನಿಂದ ಕೆಂಪೇಗೌಡ ಏರ್​ಪೋರ್ಟ್​ಗೆ ರನ್ಯಾ ಬಂದಿದ್ದರು. ಅಲ್ಲಿಯೇ ಅವರನ್ನು ಡಿಆರ್​ಐ ಅಧಿಕಾರಿಗಳು ಬಂಧಿಸಿದ್ದರು. ವಿಚಾರಣೆ ಸಲುವಾಗಿ ರನ್ಯಾ ಅವರನ್ನು ವಶಕ್ಕೆ ನೀಡುವಂತೆ ಡಿಆರ್​ಐ ಅಧಿಕಾರಿಗಳು ಕೇಳಿದ್ದಾರೆ. ಆದರೆ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಜಡ್ಜ್ ಆದೇಶಿಸಿದ್ದಾರೆ. ನ್ಯಾಯಾಂಗ ಬಂಧನಕ್ಕೆ ಒಳಪಡಿಸುವುದಕ್ಕೂ ಮುನ್ನ ನಟಿಯ ವೈದ್ಯಕೀಯ ಪರೀಕ್ಷೆ ಮಾಡಲಾಯಿತು. ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆದಿದೆ.

ಘಟನೆಯ ಹಿನ್ನೆಲೆ:

IPS ಅಧಿಕಾರಿ ರಾಮಚಂದ್ರ ರಾವ್ ಅವರ 2ನೇ ಹೆಂಡತಿಯ ಮೊದಲನೇ ಗಂಡನ ಮಗಳು ರನ್ಯಾ. ದೇಹದ ಒಳಗೆ ಚಿನ್ನದ ಬಿಲ್ಲೆಗಳನ್ನು ಇಟ್ಟುಕೊಂಡು ಬೆಂಗಳೂರಿಗೆ ಬಂದಿದ್ದರು. ಬಿಸ್ನೆಸ್ ಉದ್ದೇಶದಿಂದ ದುಬೈಗೆ ಹೋಗುತ್ತೇನೆ ಎಂದು ಹೇಳಿಕೊಂಡಿದ್ದರು. ಆದರೆ ದೆಹಲಿ ಡಿಆರ್​ಐ ಟೀಮ್​ಗೆ ರನ್ಯಾ ಸ್ಮಗ್ಲಿಂಗ್ ಬಗ್ಗೆ ಮಾಹಿತಿ ಇತ್ತು.

ಇದನ್ನೂ ಓದಿ
Image
‘ಸ್ಯಾಂಡಲ್​​ವುಡ್ ಸಣ್ಣ ಇಂಡಸ್ಟ್ರಿ ಆಗಿತ್ತು, ಈಗ ಹೇಗೆ ಬೆಳೆದಿದೆ ನೋಡಿ’
Image
ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಉಮಾಪತಿ ಹೇಳಿದ್ದೇನು?
Image
4 ಚಿತ್ರಮಂದಿರ, 23 ಸಿನಿಮಾ ಸ್ಕ್ರೀನ್​, ಡಿಸಿಎಂ ಡಿಕೆಶಿಯ ಸಿನಿಮಾ ನಂಟು
Image
‘ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆಶಿ

ಇದನ್ನೂ ಓದಿ: ‘ಮಾಣಿಕ್ಯ’ ಚಿತ್ರದ ನಟಿ ರನ್ಯಾ ಬಳಿ ಸಿಕ್ಕಿದ್ದು, ಒಂದಲ್ಲ ಎರಡಲ್ಲ ಬರೋಬ್ಬರಿ 14.8 ಕೆಜಿ ಚಿನ್ನ

ಹಾಗಾಗಿ, ಮಾರ್ಚ್​ 3ರಂದು ರನ್ಯಾ ಬರೋದಕ್ಕೂ 2 ಗಂಟೆ ಮೊದಲೇ ಡಿಆರ್​ಐ ಅಧಿಕಾರಿಗಳು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ದುಬೈನ ಎಮೆರೈಟ್ಸ್ ಫ್ಲೈಟ್​ನಲ್ಲಿ ರನ್ಯಾ ಬಂದರು. ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ಬೆಂಗಳೂರು ಏರ್ಪೋರ್ಟ್​ನಲ್ಲಿ ಅವರನ್ನು DRI ವಶಕ್ಕೆ ಪಡೆಯಲಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:18 pm, Tue, 4 March 25