AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಿಸೆಂಬರ್ ನನಗೆ ಲಕ್ಕಿ’; ತಿಂಗಳ ವಿಶೇಷತೆ ಬಗ್ಗೆ ಹೇಳಿಕೊಂಡ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ‘ಕಿರಿಕ್ ಪಾರ್ಟಿ’ ಚಿತ್ರದ ಮೂಲಕ ವೃತ್ತಿ ಬದುಕು ಆರಂಭಿಸಿದರು. ಈ ಚಿತ್ರ ರಿಲೀಸ್ ಆಗಿದ್ದು ಡಿಸೆಂಬರ್​ನಲ್ಲಿ (2016). ಸೂಪರ್ ಹಿಟ್ ಸಿನಿಮಾ ‘ಪುಷ್ಪ’ ಕೂಡ ಡಿಸೆಂಬರ್​ನಲ್ಲೇ (2021) ರಿಲೀಸ್ ಆಯಿತು. ಈ ಎರಡೂ ಚಿತ್ರಗಳು ರಶ್ಮಿಕಾ ವೃತ್ತಿ ಜೀವನದಲ್ಲಿ ಪ್ರಮುಖ ಎನಿಸಿಕೊಂಡಿದೆ.

‘ಡಿಸೆಂಬರ್ ನನಗೆ ಲಕ್ಕಿ’; ತಿಂಗಳ ವಿಶೇಷತೆ ಬಗ್ಗೆ ಹೇಳಿಕೊಂಡ ರಶ್ಮಿಕಾ ಮಂದಣ್ಣ
ರಶ್ಮಿಕಾ
ರಾಜೇಶ್ ದುಗ್ಗುಮನೆ
| Updated By: Digi Tech Desk|

Updated on:Aug 12, 2023 | 12:36 AM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಬೇಡಿಕೆ ಹೆಚ್ಚುತ್ತಲೇ ಇದೆ. ಸ್ಟಾರ್ ನಟಿ ಆಗಿರುವ ರಶ್ಮಿಕಾ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಈ ವರ್ಷದ ಆರಂಭದಲ್ಲೇ ಅವರ ನಟನೆಯ ‘ವಾರಿಸು’ (Varisu Movie) ಹಾಗೂ ‘ಮಿಷನ್ ಮಜ್ನು’ ಚಿತ್ರಗಳು ರಿಲೀಸ್ ಆಗಿ ಮೆಚ್ಚುಗೆ ಪಡೆದಿವೆ. ಈಗ ಅವರು ‘ಅನಿಮಲ್’ ಸಿನಿಮಾ ರಿಲೀಸ್​ಗಾಗಿ ಕಾಯುತ್ತಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ರಶ್ಮಿಕಾ ಪಾತ್ರದ ಬಗ್ಗೆ ಚಿತ್ರತಂಡ ಹೆಚ್ಚಿನ ಮಾಹಿತಿ ರಿವೀಲ್ ಮಾಡಿಲ್ಲ. ಈ ಸಿನಿಮಾ ಡಿಸೆಂಬರ್​ನಲ್ಲಿ ರಿಲೀಸ್ ಆಗುತ್ತಿರುವ ಬಗ್ಗೆ ಅವರಿಗೆ ಖುಷಿ ಇದೆ. ಈ ತಿಂಗಳು ಲಕ್ಕಿ ಎಂದು ರಶ್ಮಿಕಾ ಹೇಳಿಕೊಂಡಿದ್ದಾರೆ.

ರಶ್ಮಿಕಾ ಮಂದಣ್ಣ ‘ಕಿರಿಕ್ ಪಾರ್ಟಿ’ ಚಿತ್ರದ ಮೂಲಕ ವೃತ್ತಿ ಬದುಕು ಆರಂಭಿಸಿದರು. ಈ ಚಿತ್ರ ರಿಲೀಸ್ ಆಗಿದ್ದು ಡಿಸೆಂಬರ್​ನಲ್ಲಿ (2016). ಸೂಪರ್ ಹಿಟ್ ಸಿನಿಮಾ ‘ಪುಷ್ಪ’ ಕೂಡ ಡಿಸೆಂಬರ್​ನಲ್ಲೇ (2021) ರಿಲೀಸ್ ಆಯಿತು. ಈ ಎರಡೂ ಚಿತ್ರಗಳು ರಶ್ಮಿಕಾ ವೃತ್ತಿ ಜೀವನದಲ್ಲಿ ಪ್ರಮುಖ ಎನಿಸಿಕೊಂಡಿದೆ. ಇದರ ಜೊತೆ ಇನ್ನೂ ಕೆಲವು ಸಿನಿಮಾಗಳು ಡಿಸೆಂಬರ್​ನಲ್ಲಿ ರಿಲೀಸ್ ಆಗಿದೆ. ಈಗ ಬಹುನಿರೀಕ್ಷಿತ ‘ಅನಿಮಲ್’ ಸಿನಿಮ ಕೂಡ ಇದೇ ಸಂದರ್ಭದಲ್ಲಿ ರಿಲೀಸ್ ಆಗುತ್ತಿದೆ.

ಇಟೈಮ್ಸ್​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ರಶ್ಮಿಕಾ ಮಂದಣ್ಣ, ‘ಡಿಸೆಂಬರ್ ನನಗೆ ಯಾವಗಲೂ ಲಕ್ಕಿ ತಿಂಗಳು. ಕಿರಿಕ್ ಪಾರ್ಟಿ, ಚಮಕ್, ಅಂಜನಿಪುತ್ರ ಸೇರಿ ಅನೇಕ ಚಿತ್ರಗಳು ಇದೇ ತಿಂಗಳಲ್ಲಿ ರಿಲೀಸ್ ಆಗಿವೆ. ಈ ತಿಂಗಳಲ್ಲಿ ರಿಲೀಸ್ ಆದ ಚಿತ್ರಗಳು ಮೆಚ್ಚುಗೆ ಪಡೆದಿವೆ. ಡಿಸೆಂಬರ್​ನಲ್ಲಿ ರಿಲೀಸ್ ಆಗುತ್ತಿರುವ ನನ್ನ ಐದನೇ ಸಿನಿಮಾ ಅನಿಮಲ್. ನಾನು ಥ್ರಿಲ್ ಆಗಿದ್ದೇನೆ’ ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ‘ಅನಿಮಲ್​’ ಆಗಮನಕ್ಕೆ ಹೊಸ ದಿನಾಂಕ ನಿಗದಿ: ಡಿ.1ಕ್ಕೆ ಬರಲಿದೆ ರಶ್ಮಿಕಾ-ರಣಬೀರ್​ ಜೋಡಿಯ ಚಿತ್ರ

‘ಅನಿಮಲ್ ಚಿತ್ರದ ಬಗ್ಗೆ, ನನ್ನ ಪಾತ್ರದ ಬಗ್ಗೆ ಪ್ರೇಕ್ಷಕರು ಯಾವ ರೀತಿಯ ಪ್ರತಿಕ್ರಿಯೆ ಕೊಡುತ್ತಾರೆ ಎಂಬುದನ್ನು ತಿಳಿದುಕೊಳ್ಳಲು ಕಾದಿದ್ದೇನೆ. ನನಗೆ ಇದೊಂದು ಕಠಿಣ ಪಾತ್ರ ಆಗಿತ್ತು. ನಾನು ಈ ರೀತಿಯ ಪಾತ್ರ ಮಾಡುತ್ತೇನೆ ಎಂದು ಭಾವಿಸಿರಲಿಲ್ಲ’ ಎಂದಿದ್ದಾರೆ ಅವರು.

ರಶ್ಮಿಕಾ ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆಗೆ ‘ರೇನ್​ಬೋ’ ಮೊದಲಾದ ಸಿನಿಮಾ ಕೆಲಸಗಳಲ್ಲೂ ಅವರು ಬ್ಯುಸಿ ಇದ್ದಾರೆ. ಡೇಟ್ಸ್ ಹೊಂದಿಕೆ ಸಾಧ್ಯವಾಗದ ಕಾರಣ ಇತ್ತೀಚೆಗೆ ಅವರು ನೀತಿನ್ ಚಿತ್ರದಿಂದ ಹೊರ ಬಂದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:05 am, Sat, 12 August 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ