Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗೆ ಪ್ರಪೋಸ್ ಮಾಡೋದು ಹೇಳಿಕೊಟ್ಟ ನಟಿ ರಶ್ಮಿಕಾ ಮಂದಣ್ಣ; ವಿಡಿಯೋ ವೈರಲ್

ರಶ್ಮಿಕಾ ಮಂದಣ್ಣ ಅವರು ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಆಗ ಅಭಿಮಾನಿ ಓರ್ವ ರಶ್ಮಿಕಾ ಜತೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದ. ಈ ವೇಳೆ ಪಕ್ಕದಲ್ಲಿದ್ದ ಅಭಿಮಾನಿ ರಶ್ಮಿಕಾ ಜೊತೆ ಮಾತನಾಡಿದ್ದಾನೆ.

ಅಭಿಮಾನಿಗೆ ಪ್ರಪೋಸ್ ಮಾಡೋದು ಹೇಳಿಕೊಟ್ಟ ನಟಿ ರಶ್ಮಿಕಾ ಮಂದಣ್ಣ; ವಿಡಿಯೋ ವೈರಲ್
ರಶ್ಮಿಕಾ ಮಂದಣ್ಣ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Feb 06, 2023 | 7:07 AM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಬೇಡಿಕೆಯ ನಟಿ ಆಗಿದ್ದಾರೆ. ಕನ್ನಡದಿಂದ ಆರಂಭವಾದ ಅವರ ಸಿನಿಮಾ ಜರ್ನಿ ಬಾಲಿವುಡ್​ಗೆ ಬಂದು ನಿಂತಿದೆ. ಅವರ ಬಗ್ಗೆ ಅನೇಕರು ಒಳ್ಳೆಯ ಭಾವನೆ ಇಟ್ಟುಕೊಂಡಿದ್ದಾರೆ. ಇನ್ನೂ ಕೆಲವರು ರಶ್ಮಿಕಾ ಅವರನ್ನು ಟೀಕಿಸುವುದರಲ್ಲಿ ಬ್ಯುಸಿ ಆಗಿದ್ದಾರೆ. ಆದರೆ, ರಶ್ಮಿಕಾ ಮಂದಣ್ಣ ಮಾತ್ರ ಟ್ರೋಲ್​ಗಳಿಗೆ ಕಿವಿ ಕೊಡುವುದಿಲ್ಲ. ಅವರು ನೋವಾದರೂ ಅನೇಕ ಬಾರಿ ಮುಚ್ಚಿಟ್ಟುಕೊಳ್ಳುತ್ತಾರೆ. ಅವರು ಎಂದಿಗೂ ಫ್ಯಾನ್ಸ್​ನ ಪ್ರೀತಿಸೋದನ್ನು ನಿಲ್ಲಿಸಿಲ್ಲ. ಈಗ ಅವರ ಹೊಸ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ರಶ್ಮಿಕಾ ಮಂದಣ್ಣ ಅವರು ಅಭಿಮಾನಿಗೆ ಪ್ರಪೋಸ್ ಮಾಡೋದನ್ನು ಹೇಳಿಕೊಟ್ಟಿದ್ದಾರೆ. ಈ ವಿಡಿಯೋ ಫ್ಯಾನ್ಸ್ ವಲಯದಲ್ಲಿ ವೈರಲ್ ಆಗುತ್ತಿದೆ.

ನಡೆದಿದ್ದು ಏನು?

ರಶ್ಮಿಕಾ ಮಂದಣ್ಣ ಅವರು ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಆಗ ಅಭಿಮಾನಿ ಓರ್ವ ರಶ್ಮಿಕಾ ಜತೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದ. ಈ ವೇಳೆ ಪಕ್ಕದಲ್ಲಿದ್ದ ಅಭಿಮಾನಿ ರಶ್ಮಿಕಾ ಜೊತೆ ಮಾತನಾಡಿದ್ದಾನೆ. ‘ಯಾವುದಾದರೂ ಹುಡುಗಿಗೆ ಪ್ರಪೋಸ್ ಮಾಡಬೇಕು ಎಂದರೆ ತೆಲುಗಿನಲ್ಲಿ ಏನು ಹೇಳಬೇಕು’ ಎಂದು ರಶ್ಮಿಕಾಗೆ ಅಭಿಮಾನಿ ಕೇಳಿದ್ದಾನೆ. ಇದಕ್ಕೆ ಉತ್ತರಿಸುವಾಗ ರಶ್ಮಿಕಾ ‘ಯಾರಾದರೂ ಇದ್ದಾರಾ?’ ಎಂದು ನಗುತ್ತಲೇ ಕೇಳಿದ್ದಾರೆ.

ಇದನ್ನೂ ಓದಿ
Image
Mili Twitter Review: ಜಾನ್ವಿ ಕಪೂರ್​ ಅಭಿನಯಕ್ಕೆ ಕೇಳಿಬರ್ತಿದೆ ಮೆಚ್ಚುಗೆ; ‘ಮಿಲಿ’ ನೋಡಿ ವಿಮರ್ಶೆ ತಿಳಿಸಿದ ಸಿನಿಪ್ರಿಯರು
Image
Gandhada Gudi Twitter Review: ಹೇಗಿದೆ ‘ಗಂಧದ ಗುಡಿ’?; ಪ್ರೀಮಿಯರ್​ ಶೋ ಬಳಿಕ ಟ್ವಿಟರ್​ ಮೂಲಕ ವಿಮರ್ಶೆ ತಿಳಿಸಿದ ಫ್ಯಾನ್ಸ್​
Image
Ram Setu Twitter Review: ‘ರಾಮ್​ ಸೇತು’ ಟ್ವಿಟರ್​ ವಿಮರ್ಶೆ: ಅಕ್ಷಯ್​ ಕುಮಾರ್​ ಚಿತ್ರಕ್ಕೆ ಜನರಿಂದ ಸಿಕ್ತಾ ಪ್ರಶಂಸೆ?
Image
Goodbye Twitter Review: ರಶ್ಮಿಕಾ ಮೊದಲ ಹಿಂದಿ ಚಿತ್ರ ‘ಗುಡ್​ಬೈ’ ಹೇಗಿದೆ? ಜನರು ತಿಳಿಸಿದ ಟ್ವಿಟರ್ ವಿಮರ್ಶೆ ಇಲ್ಲಿದೆ ಓದಿ..

‘ಹೇಳಿ ಏನು ಹೇಳಬೇಕು’ ಎಂದು ಅಭಿಮಾನಿ ಮತ್ತೆ ದುಂಬಾಲು ಬಿದ್ದಿದ್ದಾನೆ. ಇದಕ್ಕೆ ಉತ್ತರಿಸಿದ ರಶ್ಮಿಕಾ ‘ನೀವು ಚೆನ್ನಾಗಿ ಕಾಣುತ್ತಿದ್ದೀರಿ. ಐ ಲವ್​ ಯೂ ಎಂದು ಹೇಳಬೇಕು’ ಎಂಬುದಾಗಿ ಟಿಪ್ಸ್ ನೀಡಿದ್ದಾರೆ ರಶ್ಮಿಕಾ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಟ್ರೋಲ್ ಪೇಜ್​ಗಳಲ್ಲಿ ಈ ವಿಡಿಯೋನ ಹಂಚಿಕೊಳ್ಳಲಾಗುತ್ತಿದೆ.

ರಶ್ಮಿಕಾ ಮಂದಣ್ಣಗೆ ಎರಡು ಯಶಸ್ಸು

ರಶ್ಮಿಕಾ ಮಂದಣ್ಣ ಅವರಿಗೆ ಜನವರಿ ತಿಂಗಳು ವಿಶೇವಾಗಿತ್ತು. ಇದಕ್ಕೆ ಕಾರಣ ಅವರಿಗೆ ಡಬಲ್ ಯಶಸ್ಸು ಸಿಕ್ಕಿರೋದು. ಅವರ ನಟನೆಯ ತಮಿಳು ಸಿನಿಮಾ ‘ವಾರಿಸು’ ಜನವರಿ 11ಕ್ಕೆ ರಿಲೀಸ್ ಆಯಿತು. ಈ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ 100 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿತು. ಇದಾದ ಬಳಿಕ ನೆಟ್​​ಫ್ಲಿಕ್ಸ್​​ನಲ್ಲಿ ರಶ್ಮಿಕಾ ಮಂದಣ್ಣ ಅಭಿನಯದ ‘ಮಿಷನ್ ಮಜ್ನು’ ತೆರೆಗೆ ಬಂತು. ಈ ಚಿತ್ರ ಕೂಡ ಮೆಚ್ಚುಗೆ ಪಡೆಯಿತು.

ರಶ್ಮಿಕಾ ಕೈಯಲ್ಲಿರುವ ಸಿನಿಮಾಗಳು

ರಶ್ಮಿಕಾ ಮಂದಣ್ಣ ಅವರ ಕೈಯಲ್ಲಿ ಹಲವು ಸಿನಿಮಾಗಳು ಇವೆ. ‘ಪುಷ್ಪ 2’ ಚಿತ್ರದ ಕೆಲಸಗಳು ಇನ್ನಷ್ಟೇ ಆರಂಭ ಆಗಬೇಕಿದೆ. ಅಲ್ಲು ಅರ್ಜುನ್ ನಟನೆಯ ಈ ಚಿತ್ರಕ್ಕೆ ಸುಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಇದರ ಜತೆಗೆ ಬಾಲಿವುಡ್​ನಲ್ಲಿ ‘ಅನಿಮಲ್’ ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಇದರ ಜತೆಗೆ ಹೊಸ ಹೊಸ ಆಫರ್​ಗಳು ಅವರನ್ನು ಹುಡುಕಿ ಬರುತ್ತಿವೆ.

ಶ್ರೀಲಕ್ಷ್ಮಿ ಎಚ್​.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:58 pm, Fri, 3 February 23

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ