Savi Madappa: ನಟಿ ಸವಿ ಮಾದಪ್ಪ ಸಾವಿನ ಸತ್ಯ ಬಯಲು; ಪೊಲೀಸರ ಕೈ ಸೇರಿದ ಮರಣೋತ್ತರ ಪರೀಕ್ಷೆ ವರದಿ

ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ನಟಿ ಸವಿ ಮಾದಪ್ಪ ಅವರು ಡೆತ್​ ನೋಟ್​ ಬರೆದಿಟ್ಟಿದ್ದರು. ಆ ಪತ್ರದಲ್ಲಿ ಗೆಳೆಯ ವಿವೇಕ್​ಗೆ ಅವರು ಕ್ಷಮೆ ಕೇಳಿದ್ದರು.

Savi Madappa: ನಟಿ ಸವಿ ಮಾದಪ್ಪ ಸಾವಿನ ಸತ್ಯ ಬಯಲು; ಪೊಲೀಸರ ಕೈ ಸೇರಿದ ಮರಣೋತ್ತರ ಪರೀಕ್ಷೆ ವರದಿ
ಸವಿ ಮಾದಪ್ಪ
Follow us
TV9 Web
| Updated By: ಮದನ್​ ಕುಮಾರ್​

Updated on:Oct 18, 2021 | 9:47 AM

ಕನ್ನಡ ಚಿತ್ರರಂಗದಲ್ಲಿ ಆಗತಾನೇ ಗುರುತಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ನಟಿ ಸವಿ ಮಾದಪ್ಪ ಅವರು ಸೆ.30ರಂದು ಅನುಮಾನಾಸ್ಪದವಾಗಿ ಸಾವನ್ನಪಿದರು. ದೊಡ್ಡಬೆಲೆ ಗ್ರಾಮದ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆ ಆಗಿತ್ತು. ಸವಿ ಮಾದಪ್ಪ ನಿಧನದ ನಂತರ ಅವರ ಪೋಷಕರು ಕೆಲವು ಅನುಮಾನ ವ್ಯಕ್ತಪಡಿಸಿದ್ದರು. ಗೆಳೆಯ ವಿವೇಕ್​ ಸೇರಿ ಅನೇಕರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಸವಿ ಮಾದಪ್ಪ ಅವರದ್ದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಶಂಕೆ ಮೂಡಿತ್ತು. ಅದಕ್ಕೀಗ ಮರಣೋತ್ತರ ಪರೀಕ್ಷೆಯಲ್ಲಿ ಉತ್ತರ ಸಿಕ್ಕಿದೆ.

ನಟಿಯ ಸಾವಿನ ಪ್ರಕರಣವನ್ನು ಕುಂಬಳಗೋಡು ಪೊಲೀಸರು ತನಿಖೆ ನಡೆಸಿದ್ದಾರೆ. ಸವಿ ಮಾದಪ್ಪ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ಈಗ ಅದರ ವರದಿ ಪೊಲೀಸರ ಕೈ ಸೇರಿದೆ. ಅದರ ಪ್ರಕಾರ, ಸವಿ ಮಾದಪ್ಪ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ಫ್ಯಾನ್​ಗೆ ಸ್ವತಃ ನೇಣು ಬಿಗಿದುಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡರು ಎಂದು ಮರಣೋತ್ತರ ಪರೀಕ್ಷೆಯ ವರದಿ ಹೇಳುತ್ತಿದೆ.

ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಸವಿ ಮಾದಪ್ಪ ಅವರು ಡೆತ್​ ನೋಟ್​ ಬರೆದಿಟ್ಟಿದ್ದರು. ಆ ಪತ್ರದಲ್ಲಿ ಗೆಳೆಯ ವಿವೇಕ್​ಗೆ ಅವರು ಕ್ಷಮೆ ಕೇಳಿದ್ದರು. ಜೀವನದಲ್ಲಿ ಅಂದುಕೊಂಡಿದ್ದು ಆಗಲಿಲ್ಲ. ಕೆಲಸದ ವಿಚಾರದಲ್ಲಿ ಯಶಸ್ಸು ಸಿಗಲಿಲ್ಲ. ಹಣಕಾಸಿನ ಸಮಸ್ಯೆಯಿಂದ ಸಾಲ ಮಾಡಿಕೊಳ್ಳುವಂತಾಯಿತು. ಹೆಣ್ಣುಮಕ್ಕಳಿಗೆ ಆಗುವು ದೈಹಿಕ ಸಮಸ್ಯೆಯಿಂದಲೂ ಸಾಕಷ್ಟು ನೋವು ಅನುಭವಿಸಬೇಕಾಯಿತು. ಈ ಎಲ್ಲ ಕಾರಣದಿಂದ ಡಿಪ್ರೆಷನ್​ ಮೂಡಿತು. ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್​ ನೋಟ್​ನಲ್ಲಿ ಸವಿ ಮಾದಪ್ಪ ಬರೆದಿದ್ದರು. ತಮ್ಮ ಎಲ್ಲ ಸಮಸ್ಯೆಗಳನ್ನು 5 ಪುಟಗಳ ಡೆತ್ ​ನೋಟ್​ನಲ್ಲಿ ಅವರು ವಿವರಿಸಿದ್ದರು.

ಸಾಯುವುದಕ್ಕೂ ಒಂದು ದಿನ ಮುಂಚೆ ಇನ್​ಸ್ಟಾಗ್ರಾಮ್​ನಲ್ಲಿ ಅವರು ಕೆಲವೊಂದು ಪೋಸ್ಟ್​ಗಳನ್ನು ಮಾಡಿದ್ದರು. ‘ಯಾರನ್ನೂ ಕೀಳಾಗಿ ಕಾಣಬೇಡಿ. ನಗುತ್ತಾ ಇರುವ ವ್ಯಕ್ತಿಗಳ ಹಿಂದೆಯೂ ಸಾಕಷ್ಟು ನೋವಿರುತ್ತದೆ, ಆ ಬಗ್ಗೆ ಯಾರಿಗೂ ಗೊತ್ತಿರುವುದಿಲ್ಲ’ ಎಂದು ಸವಿ ಬರೆದುಕೊಂಡಿದ್ದರು. ಮತ್ತೊಂದು ಪೋಸ್ಟ್​ನಲ್ಲಿ ತಮ್ಮದೇ ಫೋಟೋ ಹಾಕಿ ‘happiness, Sadness’ ಹ್ಯಾಶ್​ ಟ್ಯಾಗ್​ ಬಳಸಿದ್ದರು. ಇದರ ಜತೆಗೆ ಗೆಳೆಯರು ಹಾಗೂ ಸಹೋದರರ ಫೋಟೋ ಹಾಕಿ ಅವರಿಗೆ ಧನ್ಯವಾದ ಹೇಳಿದ್ದರು.

ಇದನ್ನೂ ಓದಿ:

ಅಂತಿಮ‌ಸಂಸ್ಕಾರದ ವೇಳೆ ಸವಿ ಮಾದಪ್ಪಗೆ ಮದುವೆ ಶಾಸ್ತ್ರ

ನಟಿ ಸವಿ ಮಾದಪ್ಪ ಆತ್ಮಹತ್ಯೆ ಪ್ರಕರಣ: ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ಏನು?

Published On - 8:32 am, Mon, 18 October 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ