AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ವಿರುದ್ಧ ಹೆಚ್ಚುವರಿ ಚಾರ್ಜ್​ಶೀಟ್ ಸಲ್ಲಿಕೆ, ಫೋಟೊದಿಂದ ಹೆಚ್ಚಾಯ್ತು ಕಂಟಕ

Darshan Thoogudeepa: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಹಾಗೂ ಇತರೆ ಕೆಲ ಆರೋಪಿಗಳ ವಿರುದ್ಧ ಪ್ರಕರಣದ ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ಅವರು ಹೆಚ್ಚುವರಿ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಕೆಲವು ಮಹತ್ವದ ಸಾಕ್ಷ್ಯಗಳು ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ಹೆಚ್ಚುವರಿ ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ.

ದರ್ಶನ್ ವಿರುದ್ಧ ಹೆಚ್ಚುವರಿ ಚಾರ್ಜ್​ಶೀಟ್ ಸಲ್ಲಿಕೆ, ಫೋಟೊದಿಂದ ಹೆಚ್ಚಾಯ್ತು ಕಂಟಕ
Darshan Renuka
ಮಂಜುನಾಥ ಸಿ.
|

Updated on:May 21, 2025 | 11:20 AM

Share

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ. ನಿನ್ನೆ ನಡೆದ ವಿಚಾರಣೆಗೆ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಹಾಗೂ ಇತರೆ ಆರೋಪಿಗಳು ಹಾಜರಾಗಿದ್ದರು. ಪ್ರಕರಣದ ತನಿಖೆಯನ್ನು ಎಸಿಪಿ ಚಂದನ್ ಕುಮಾರ್ ನಡೆಸುತ್ತಿದ್ದು, ನಿನ್ನೆ (ಮೇ 20) ದರ್ಶನ್ ಹಾಗೂ ಇತರರ ವಿರುದ್ಧ ಹೆಚ್ಚುವರಿ ಆರೋಪ ಪಟ್ಟಿಯನ್ನು ತನಿಖಾಧಿಕಾರಿ, ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಈ ಹೆಚ್ಚುವರಿ ಚಾರ್ಜ್​ಶೀಟ್​ ಇಂದಾಗಿ ದರ್ಶನ್ ಹಾಗೂ ಇತರೆ ಆರೋಪಿಗಳಿಗೆ ಇನ್ನಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

132 ಪುಟಗಳ ಹೆಚ್ಚುವರಿ ಚಾರ್ಜ್ ಶೀಟ್ ಅನ್ನು ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಈ ಚಾರ್ಜ್​ಶೀಟ್​ನಲ್ಲಿ ಕೆಲ ಮಹತ್ವದ ಸಾಕ್ಷ್ಯಗಳ ಉಲ್ಲೇಖ ಮಾಡಲಾಗಿದೆ. ಜೊತೆಗೆ ಕೆಲ ಸಾಕ್ಷ್ಯಗಳ ಹೇಳಿಕೆಗಳನ್ನು ದಾಖಲಿಸಲಾಗಿದೆ. ಶೆಡ್​ನಲ್ಲಿ ರೇಣುಕಾ ಸ್ವಾಮಿಯ ಕೊಲೆ ಆದ ದಿನ ದರ್ಶನ್ ಅಲ್ಲಿದ್ದ ಕೆಲ ಆರೋಪಿಗಳ ಜೊತೆಗೆ ಫೋಟೊ ತೆಗೆಸಿಕೊಂಡಿದ್ದರು, ಇದೀಗ ಆ ಫೋಟೊವನ್ನು ರಿಟ್ರೀವ್ ಮಾಡಿರುವ ಪೊಲೀಸರು, ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ದರ್ಶನ್ ಜತೆ ಪುನೀತ್, ರವಿಶಂಕರ್, ಅನುಕುಮಾರ್, ಜಗದೀಶ್ ಫೋಟೋ ತೆಗೆಸಿಕೊಂಡಿದ್ದರು. ಆದರೆ ಆ ನಂತರ ಆ ಫೋಟೊ ಅನ್ನು ಡಿಲೀಟ್ ಮಾಡಲಾಗಿತ್ತು. ಪುನೀತ್ ಮೊಬೈಲ್​ನಲ್ಲಿ ಆ ಫೋಟೊ ಇತ್ತು. ಪುನೀತ್ ಮೊಬೈಲ್​ ಅನ್ನು ಎಫ್​ಎಸ್​ಎಲ್​ಗೆ ಕಳಿಸಿದ್ದ ಪೊಲೀಸರು ಬಳಿಕ ಫೋಟೊ ರಿಟ್ರೀವ್ ಮಾಡಿದ್ದಾರೆ.

ಇದನ್ನೂ ಓದಿ:ದರ್ಶನ್ ಮೇಕಪ್ ಆರ್ಟಿಸ್ಟ್ ಹೊನ್ನೆ ಗೌಡ ನಿಧನ; ಸಂತಾಪ ಸೂಚಿಸಿದ ಡಿ ಬಾಸ್

ದರ್ಶನ್​ ಜಾಮೀನು ಅರ್ಜಿ ವಿಚಾರಣೆ ವೇಳೆ ಅವರ ಪರ ವಕೀಲರು, ಘಟನೆ ನಡೆದಾಗ ದರ್ಶನ್ ಸ್ಥಳದಲ್ಲಿ ಇರಲೇ ಇಲ್ಲ ಎಂಬಂತೆ ವಾದ ಮಂಡಿಸಿದ್ದರು. ಆದರೆ ಈಗ ಈ ಫೋಟೊ ಬಹಿರಂಗವಾದ ಬಳಿಕ ದರ್ಶನ್ ಸ್ಥಳದಲ್ಲಿ ಇದ್ದರು ಎಂಬುದಕ್ಕೆ ಇನ್ನಷ್ಟು ಪುಷ್ಠಿ ದೊರೆತಿದೆ. ಇದು ಮುಂದಿನ ದಿನಗಳಲ್ಲಿ ದರ್ಶನ್​ಗೆ ಕಂಟಕವಾಗಿ ಪರಿಣಮಿಸಬಹುದು ಎನ್ನಲಾಗುತ್ತಿದೆ.

ಇದರ ನಡುವೆ ಕೃತ್ಯ ನಡೆದ ಬಳಿಕ ಪೊಲೀಸರು ಕೆಲ ಮೊಬೈಲ್, ವಾಹನಗಳು ಇನ್ನಿತರೆ ಕೆಲ ವಸ್ತುಗಳನ್ನು ಸೀಜ್ ಮಾಡಿದ್ದರು. ಅವುಗಳಲ್ಲಿ ಕೆಲವನ್ನು ಇದೀಗ ಮರಳಿಸಿದ್ದಾರೆ. ಕೆಲ ಕಾರುಗಳು, ಮೊಬೈಲ್​ಗಳನ್ನು ಆರೋಪಿಗಳ ಮನವಿ ಮೇರೆಗೆ ಮರಳಲಿಸಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:51 am, Wed, 21 May 25

ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ