Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhas: ಕನ್ನಡ ನಿರ್ಮಾಪಕರ ಜತೆ ಹೊಸ ಸಿನಿಮಾಗೆ ಸಹಿ ಮಾಡಿದ ಪ್ರಭಾಸ್​; ಸೋಲಿನ ಬಳಿಕವೂ ಭಾರಿ ಡಿಮ್ಯಾಂಡ್​

Prabhas Next Movie: ಸ್ಯಾಂಡಲ್​ವುಡ್​ನ ನಿರ್ಮಾಣ ಸಂಸ್ಥೆ ಮೂಲಕ ಸಿದ್ಧವಾಗಲಿರುವ ಹೊಸ ಸಿನಿಮಾದಲ್ಲಿ ನಟಿಸಲು ಪ್ರಭಾಸ್​ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಚಿತ್ರ ಕೂಡ ಪ್ಯಾನ್​​ ಇಂಡಿಯಾ ಮಟ್ಟದಲ್ಲಿ ಮೂಡಿಬರಲಿದೆ.

Prabhas: ಕನ್ನಡ ನಿರ್ಮಾಪಕರ ಜತೆ ಹೊಸ ಸಿನಿಮಾಗೆ ಸಹಿ ಮಾಡಿದ ಪ್ರಭಾಸ್​; ಸೋಲಿನ ಬಳಿಕವೂ ಭಾರಿ ಡಿಮ್ಯಾಂಡ್​
ಪ್ರಭಾಸ್​
Follow us
ಮದನ್​ ಕುಮಾರ್​
|

Updated on: Jun 26, 2023 | 8:24 PM

ನಟ ಪ್ರಭಾಸ್​ ಅವರು ಈ ವರ್ಷ ‘ಆದಿಪುರುಷ್​’ ಸಿನಿಮಾ (Adipurush Movie) ಮೂಲಕ ಭರ್ಜರಿ ಗೆಲುವಿನ ನಿರೀಕ್ಷೆಯಲ್ಲಿ ಇದ್ದರು. ಆದರೆ ಅಂದುಕೊಂಡಂತೆ ಎನೂ ಆಗಲಿಲ್ಲ. ಜೂನ್​ 16ರಂದು ರಿಲೀಸ್​ ಆದ ‘ಆದಿಪುರುಷ್​’ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಮಾಡಲಿಲ್ಲ. ಜನರು ಈ ಚಿತ್ರವನ್ನು ಹೊಗಳಿದ್ದಕ್ಕಿಂತಲೂ ಟ್ರೋಲ್​ ಮಾಡಿದ್ದೇ ಜಾಸ್ತಿ. ಹಾಗಂತ ಪ್ರಭಾಸ್​ (Prabhas) ಅವರಿಗೆ ಇರುವ ಡಿಮ್ಯಾಂಡ್​ ಕಡಿಮೆ ಆಗಿಲ್ಲ. ಈಗಲೂ ಅವರಿಗೆ ಹೊಸ ಹೊಸ ಆಫರ್​ಗಳು ಹರಿದು ಬರುತ್ತಿವೆ. ಮೂಲಗಳ ಪ್ರಕಾರ, ಪ್ರಭಾಸ್​ ಅವರು ಈಗ ಕನ್ನಡದ ‘ಕೆವಿಎನ್​ ಪ್ರೊಡಕ್ಷನ್ಸ್​’ (KVN Productions) ಸಂಸ್ಥೆ ಜೊತೆ ಕೈ ಜೋಡಿಸಿದ್ದಾರೆ. ಈ ಬ್ಯಾನರ್​ನಲ್ಲಿ ಅವರೊಂದು ಪ್ಯಾನ್​ ಇಂಡಿಯಾ ಸಿನಿಮಾ ಮಾಡುತ್ತಾರೆ ಎಂದು ಸುದ್ದಿ ಹರಡಿದೆ. ಆದರೆ ಈ ಬಗ್ಗೆ ಇನ್ನಷ್ಟೇ ಆಧಿಕೃತ ಮಾಹಿತಿ ಸಿಗಬೇಕಿದೆ.

ಕನ್ನಡ ಚಿತ್ರರಂಗದಲ್ಲಿ ‘ಕೆವಿಎನ್​ ಪ್ರೊಡಕ್ಷನ್ಸ್​’ ಸಂಸ್ಥೆ ಭದ್ರವಾಗಿ ನೆಲೆ ಕಂಡುಕೊಳ್ಳುತ್ತಿದೆ. ಪರಭಾಷೆಯ ದೊಡ್ಡ ದೊಡ್ಡ ಸಿನಿಮಾಗಳನ್ನು ಕರುನಾಡಿನಲ್ಲಿ ವಿತರಣೆ ಮಾಡಿದ ಹೆಗ್ಗಳಿಕೆಯೂ ಈ ಸಂಸ್ಥೆಗೆ ಸಲ್ಲುತ್ತದೆ. ಈಗ ಈ ಬ್ಯಾನರ್​ನ ಅಡಿಯಲ್ಲಿ ನಿರ್ಮಾಣ ಆಗಲಿರುವ ಹೊಸ ಸಿನಿಮಾದಲ್ಲಿ ನಟಿಸಲು ಪ್ರಭಾಸ್​ ಒಪ್ಪಿಕೊಂಡಿದ್ದಾರೆ ಎಂದು ಗಾಸಿಪ್​ ಹಬ್ಬಿದೆ. ಚಿತ್ರತಂಡದ ಕಡೆಯಿಂದಲೇ ಸ್ಪಷ್ಟನೆ ಸಿಗಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ಇದನ್ನೂ ಓದಿ: ಪ್ರಾಜೆಕ್ಟ್ ಕೆ ಸೇರಿಕೊಂಡ ಕಮಲ್ ಹಾಸನ್: ಪ್ರಭಾಸ್ ಎದುರು ಗುದ್ದಾಡೋಕೆ ರೆಡಿ

ಪ್ರಭಾಸ್​ ಕೈಯಲ್ಲಿ ಹಲವು ಪ್ರಾಜೆಕ್ಟ್​ಗಳಿವೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಬಹುದೊಡ್ಡ ಯಶಸ್ಸಿನ ಬಳಿಕ ಪ್ರಶಾಂತ್​ ನೀಲ್​ ನಿರ್ದೇಶನದ ಮಾಡುತ್ತಿರುವ ‘ಸಲಾರ್​’ ಸಿನಿಮಾದಲ್ಲಿ ಪ್ರಭಾಸ್​ ನಟಿಸುತ್ತಿದ್ದಾರೆ. ಆ ಸಿನಿಮಾ ಮೇಲೆ ಅಭಿಮಾನಿಗಳಿಗೆ ಬೆಟ್ಟದಷ್ಟು ನಿರೀಕ್ಷೆ ಇದೆ. ಅದರ ಜೊತೆಗೆ ‘ಪ್ರಾಜೆಕ್ಟ್​ ಕೆ’ ಸಿನಿಮಾದ ಕೆಲಸಗಳು ಕೂಡ ಭರದಿಂದ ಸಾಗುತ್ತಿವೆ. ಈ ಸಿನಿಮಾದಲ್ಲಿ ಕಮಲ್​ ಹಾಸನ್​, ಅಮಿತಾಭ್​ ಬಚ್ಚನ್​ ಅವರಂತಹ ಘಟಾನುಘಟಿ ನಟರು ಅಭಿನಯಿಸುತ್ತಿರುವುದು ವಿಶೇಷ.

ಇದನ್ನೂ ಓದಿ: ಇಟಲಿಯಲ್ಲಿ ವಿಲ್ಲಾ ಹೊಂದಿದ್ದಾರೆ ಪ್ರಭಾಸ್; ತಿಂಗಳಿಗೆ ಇದರಿಂದ ಬರುವ ಆದಾಯ ಇಷ್ಟೊಂದಾ?

‘ಬಾಹುಬಲಿ 2’ ಬಳಿಕ ಪ್ರಭಾಸ್​ ಅವರ ಬೇರೆ ಯಾವುದೇ ಸಿನಿಮಾ ಗೆದ್ದಿಲ್ಲ. ‘ಸಾಹೋ’, ‘ರಾಧೆ ಶ್ಯಾಮ್​’, ‘ಆದಿಪುರುಷ್​’ ಸಿನಿಮಾಗಳ ಮೂಲಕ ಅವರು ಬ್ಯಾಕ್​ ಟು ಬ್ಯಾಕ್​ ಸೋಲು ಕಂಡಿದ್ದಾರೆ. ಮುಂದಿನ ಸಿನಿಮಾಗಳಾದರೂ ಗೆಲ್ಲಲಿ ಎಂದು ಅವರ ಫ್ಯಾನ್ಸ್​ ಹಾರೈಸುತ್ತಿದ್ದಾರೆ. ಸೈನ್ಸ್​ ಫಿಕ್ಷನ್​ ಪ್ರಕಾರದಲ್ಲಿ ‘ಪ್ರಾಜೆಕ್ಟ್​ ಕೆ’ ಸಿನಿಮಾ ಮೂಡಿಬರುತ್ತಿದೆ. ಆ ಸಿನಿಮಾಗಾಗಿ ಫ್ಯಾನ್ಸ್​ ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​