AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

666 ಆಪರೇಷನ್ ಡ್ರೀಮ್ ಥಿಯೇಟರ್: ಏಜೆಂಟ್ ಕಾವೇರಿ ಪಾತ್ರದಲ್ಲಿ ಅದಿತಿ ಬಾಲನ್

ನಟಿ ಅದಿತಿ ಬಾಲನ್ ಅವರು ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರತಂಡಕ್ಕೆ ಎಂಟ್ರಿ ನೀಡಿದ್ದಾರೆ. ಏಜೆಂಟ್ ಕಾವೇರಿ ಎಂಬ ಪಾತ್ರಕ್ಕೆ ಅವರು ಬಣ್ಣ ಹಚ್ಚಿದ್ದು, ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಆಗಿದೆ. ಈ ರೀತಿ ಪಾತ್ರಗಳ ಮೂಲಕ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾ ಕುತೂಹಲ ಸೃಷ್ಟಿಸಿದೆ.

666 ಆಪರೇಷನ್ ಡ್ರೀಮ್ ಥಿಯೇಟರ್: ಏಜೆಂಟ್ ಕಾವೇರಿ ಪಾತ್ರದಲ್ಲಿ ಅದಿತಿ ಬಾಲನ್
Aditi Balan
ಮದನ್​ ಕುಮಾರ್​
|

Updated on: Mar 11, 2026 | 7:24 PM

Share

‘666 ಆಪರೇಷನ್ ಡ್ರೀಮ್ ಥಿಯೇಟರ್’ (666 Operation Dream Theatre) ಸಿನಿಮಾದ ಪ್ರತಿ ಪಾತ್ರಗಳು ಕೂಡ ಕೌತುಕ ಮೂಡಿಸಿವೆ. ಶಿವರಾಜ್​ಕುಮಾರ್, ಡಾಲಿ ಧನಂಜಯ, ಪ್ರಿಯಾಂಕಾ ಮೋಹನ್, ಅದಿತಿ ಬಾಲನ್ ಮುಂತಾದವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಹೇಮಂತ್ ರಾವ್ ಅವರು ನಿರ್ದೇಶನ ಮಾಡುತ್ತಿರುವ ಈ ಚಿತ್ರದಲ್ಲಿ ಅದಿತಿ ಬಾಲನ್ (Aditi Balan) ಅವರು ಏಜೆಂಟ್ ಕಾವೇರಿ ಎಂಬ ಪಾತ್ರ ಮಾಡುತ್ತಿದ್ದಾರೆ ಎಂಬ ಚಿತ್ರತಂಡ ಮಾಹಿತಿ ನೀಡಿದೆ. ಈ ಪಾತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಅವರು ಏಜೆಂಟ್ ಪ್ರಕಾಶ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಈ ಪಾತ್ರವನ್ನು ‘ಆಪರೇಷನ್ ಡೈಮಂಡ್ ರಾಕೆಟ್’ ಸಿನಿಮಾದ ಅಣ್ಣಾವ್ರ ಪಾತ್ರಕ್ಕೆ ಜನರು ಹೋಲಿಸುತ್ತಿದ್ದಾರೆ. ಡಾಲಿ ಧನಂಜಯ ಅವರು ಏಜೆಂಟ್ ಶಂಕರ್ ಆಗಿ ನಟಿಸುತ್ತಿದ್ದಾರೆ. ಈಗ ತಮಿಳಿನ ನಟಿ ಅದಿತಿ ಬಾಲನ್ ಅವರು ಏಜೆಂಟ್ ಕಾವೇರಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬುದನ್ನು ಚಿತ್ರತಂಡ ತಿಳಿಸಿದೆ.

ತಮಿಳುನಾಡಿನ ರಾಜ್ಯ ಪ್ರಶಸ್ತಿ ಪಡೆದಿರುವ ಅದಿತಿ ಬಾಲನ್ ಅವರು ಈ ಸಿನಿಮಾದಲ್ಲಿ ನಟಿಸಿರುವುದರಿಂದ ನಿರೀಕ್ಷೆ ಮೂಡಿದೆ. ‘ಅರುವಿ’ ಸಿನಿಮಾದ ಮೂಲಕ ಅವರು ಎಲ್ಲರ ಗಮನ ಸೆಳೆದಿದ್ದರು. ‘ಕ್ಯಾಪ್ಟನ್ ಮಿಲ್ಲರ್’, ‘ಪಡವೆಟ್ಟು’ ಮುಂತಾದ ಚಿತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದರು. ಈಗ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾಗೆ ಐದನೇ ಹಂತದ ಚಿತ್ರೀಕರಣ ಮಗಿದಿದೆ. ಪೋಸ್ಟ್ ಪ್ರೊಡಕ್ಷನ್ ಹಂತಕ್ಕೆ ಕಾಲಿಡುತ್ತಿದೆ. ಈ ಚಿತ್ರವನ್ನು ಡಾ. ವೈಶಾಖ್ ಜೆ. ಗೌಡ ಅವರು ‘ವೈಶಾಖ್ ಜೆ. ಫಿಲ್ಮ್ಸ್’ ಲಾಂಛನದಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾಗೆ ಚರಣ್ ರಾಜ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಅದ್ವೈತ ಗುರುಮೂರ್ತಿ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಆಪರೇಷನ್ ಡ್ರೀಮ್ ಥಿಯೇಟರ್’ ಸೇರಿದ ನಟಿ ಪ್ರಿಯಾಂಕಾ

ವಿಶ್ವಾಸ್ ಕಶ್ಯಪ್ ಅವರ ಪ್ರೊಡಕ್ಷನ್ ವಿನ್ಯಾಸ ಇರುವ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾಗೆ ಇಂಚರಾ ಸುರೇಶ್ ವಸ್ತ್ರ ವಿನ್ಯಾಸ ಮಾಡಿದ್ದಾರೆ. ಈ ಸಿನಿಮಾದಲ್ಲಿ ಆ್ಯಕ್ಷನ್ ಮತ್ತು ಥ್ರಿಲ್ಲರ್ ಕಹಾನಿ ಇರಲಿದ್ದು, ಪ್ರೇಕ್ಷಕರಿಗೆ ಭಿನ್ನವಾದ ಅನುಭವ ಸಿಗಲಿದೆ ಎಂದು ಚಿತ್ರತಂಡ ಹೇಳಿದೆ. ಇದೇ ವರ್ಷ ಸಿನಿಮಾ ರಿಲೀಸ್ ಮಾಡಲು ಪ್ಲ್ಯಾನ್ ಹಾಕಿಕೊಳ್ಳಲಾಗಿದೆ. ತೆಲುಗಿನಲ್ಲೂ ಈ ಸಿನಿಮಾ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು