AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aditi Prabhudeva Marriage: ಯಶಸ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಅದಿತಿ ಪ್ರಭುದೇವ

ಇಂದು ಅದಿತಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅದ್ದೂರಿ ಸಮಾರಂಭದಲ್ಲಿ ಯಶಸ್​ ಅವರನ್ನು ಅದಿತಿ ವರಿಸಿದ್ದಾರೆ.

Aditi Prabhudeva Marriage: ಯಶಸ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಅದಿತಿ ಪ್ರಭುದೇವ
ಅದಿತಿ-ಯಶಸ್
TV9 Web
| Edited By: |

Updated on: Nov 28, 2022 | 11:31 AM

Share

ನಟಿ ಅದಿತಿ ಪ್ರಭುದೇವ (Aditi Prabhudeva) ಅವರು ಯಶಸ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು (ನವೆಂಬರ್ 28) ಬೆಂಗಳೂರಿನ (Bangalore) ಪ್ಯಾಲೇಸ್ ಗ್ರೌಂಡ್ಸ್​​ನ ಗಾಯತ್ರಿ ವಿಹಾರ ಗ್ರ್ಯಾಂಡ್​ನಲ್ಲಿ ಈ ಜೋಡಿ ಮದುವೆ ಆಗಿದೆ. ಹಲವು ಸೆಲೆಬ್ರಿಟಿಗಳು, ಕುಟುಂಬದವರು, ಗೆಳೆಯರ ಸಮ್ಮುಖದಲ್ಲಿ ಈ ವಿವಾಹ ಕಾರ್ಯ ನೆರವೇರಿದೆ. ಅದಿತಿ ಪ್ರಭುದೇವ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ಶುಭಾಶಯ ತಿಳಿಸುತ್ತಿದ್ದಾರೆ.

ನವೆಂಬರ್ 26ರಂದು ಅರಿಶಿಣ ಶಾಸ್ತ್ರಗಳು ನಡೆದವು. ನವೆಂಬರ್ 27ರಂದು ಪ್ಯಾಲೇಸ್​ಗ್ರೌಂಡ್​ನಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆದಿದೆ. ಯಶ್, ರಾಧಿಕಾ ಪಂಡಿತ್, ಶ್ರೀನಗರ ಕಿಟ್ಟಿ, ಮೇಘಾ ಶೆಟ್ಟಿ, ರಂಜನಿ ರಾಘವನ್ ಸೇರಿ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ನವದಂಪತಿಗೆ ಶುಭಾಶಯ ಕೋರಿದರು. ಇಂದು ಅದಿತಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅದ್ದೂರಿ ಸಮಾರಂಭದಲ್ಲಿ ಯಶಸ್​ ಅವರನ್ನು ಅದಿತಿ ವರಿಸಿದ್ದಾರೆ.

ಇಂದು ಬೆಳಗ್ಗೆ 9.30ರಿಂದ 10.32ರ ಮುಹೂರ್ತದಲ್ಲಿ ಅದಿತಿ ಮದುವೆ ಆಗಿದ್ದಾರೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯಗಳನ್ನು ತಿಳಿಸಲಾಗುತ್ತಿದೆ. ಅದಿತಿ ಪ್ರಭುದೇವ ನಟನೆಯ ‘ತ್ರಿಬಲ್ ರೈಡಿಂಗ್’ ಸಿನಿಮಾ ಕಳೆದ ವಾರ (ನವೆಂಬರ್ 25) ರಿಲೀಸ್ ಆಗಿ ಮೆಚ್ಚುಗೆ ಪಡೆದುಕೊಂಡಿದೆ.

ಇದನ್ನೂ ಓದಿ: ಅದಿತಿ ಪ್ರಭುದೇವ-ಯಶಸ್ವಿ ಮದುವೆಗೆ ಹೇಗಿತ್ತು ನೋಡಿ ರಾಕಿಂಗ್ ಸ್ಟಾರ್ ಎಂಟ್ರಿ

ಆರತಕ್ಷತೆಯ ವಿಡಿಯೋ ಹಾಗೂ ಫೋಟೋಗಳನ್ನು ಅದಿತಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮದುವೆ ಆದ ಫೋಟೋಗಳನ್ನು ಅವರು ಹಂಚಿಕೊಳ್ಳಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಅದಿತಿ ಪ್ರಭುದೇವ ಅವರು ಯಶಸ್ಸಿನ ಒಂದೊಂದೇ ಮೆಟ್ಟಿಲು ಏರುತ್ತಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆಯುತ್ತಿರುವಾಗಲೇ ಅವರು ಯಶಸ್ ಜತೆ ನಿಶ್ಚಿತಾರ್ಥ ಮಾಡಿಕೊಂಡರು. ಎಂಗೇಜ್​​ಮೆಂಟ್ ಫೋಟೋಗಳನ್ನು ಹಂಚಿಕೊಂಡು ಅದಿತಿ ಅವರು ಈ ವಿಚಾರ ಅಧಿಕೃತ ಮಾಡಿದರು. ಅದಿತಿ ನಿರ್ಧಾರ ಅನೇಕರಿಗೆ ಅಚ್ಚರಿ ಮೂಡಿಸಿತ್ತು. ಈಗ ಅದಿತಿ ಮದುವೆ ನಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ