ತಾಯಿಯಾದ ಅದಿತಿ ಪ್ರಭುದೇವ; ಹೆಣ್ಣು ಮಗುವಿನ ಫೋಟೋ ಹಂಚಿಕೊಂಡ ನಟಿ

ನಟಿ ಅದಿತಿ ಪ್ರಭುದೇವ ಅವರಿಗೆ ಏಪ್ರಿಲ್​ 4ರಂದು ಹೆಣ್ಣು ಮಗು ಜನಿಸಿದೆ. ‘ನಮ್ಮನೆ ಮಹಾಲಕ್ಷ್ಮಿ’ ಎನ್ನುವ ಕ್ಯಾಪ್ಷನ್​ನೊಂದಿಗೆ ಅವರು ಮಗುವಿನ ಫೋಟೋ ಹಂಚಿಕೊಂಡಿದ್ದಾರೆ. ಅವರ ಬದುಕಿನಲ್ಲೀಗ ಹೊಸ ಅಧ್ಯಾಯ ಆರಂಭ ಆಗಿದೆ. ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ಅದಿತಿ ಪ್ರಭುದೇವ-ಯಶಸ್ ಪಾಟ್ಲಾ​ ದಂಪತಿಗೆ ಅಭಿನಂದನೆ ತಿಳಿಸುತ್ತಿದ್ದಾರೆ.

ತಾಯಿಯಾದ ಅದಿತಿ ಪ್ರಭುದೇವ; ಹೆಣ್ಣು ಮಗುವಿನ ಫೋಟೋ ಹಂಚಿಕೊಂಡ ನಟಿ
ಅದಿತಿ ಪ್ರಭುದೇವ
Follow us
ಮದನ್​ ಕುಮಾರ್​
|

Updated on: Apr 09, 2024 | 3:36 PM

ಕನ್ನಡ ಚಿತ್ರರಂಗದ ಖ್ಯಾತ ನಟಿ ಅದಿತಿ ಪ್ರಭುದೇವ (Aditi Prabhudeva) ಅವರು ತಾಯಿಯಾಗಿದ್ದಾರೆ. ಹೆಣ್ಣು ಮಗುವಿಗೆ ಅವರು ಜನ್ಮ ನೀಡಿದ್ದಾರೆ. ಈ ವಿಚಾರವನ್ನು ಸ್ವತಃ ಅತಿದಿ ಪ್ರಭುದೇವ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಹೆಣ್ಣು ಮಗುವಿನ (Baby Girl) ಫೋಟೋವನ್ನು ಅದಿತಿ ಅವರು ಶೇರ್​ ಮಾಡಿಕೊಂಡಿದ್ದಾರೆ. ಆದರೆ ಇದರಲ್ಲಿ ಅವರು ಮಗುವಿನ ಮುಖ ತೋರಿಸಿಲ್ಲ. ಯಶಸ್​ ಪಾಟ್ಲಾ (Yashas Patla) ಹಾಗೂ ಅದಿತಿ ಪ್ರಭುದೇವ ದಂಪತಿಗೆ ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ಶುಭಾಶಯ ಕೋರುತ್ತಿದ್ದಾರೆ.

2022ರ ನವೆಂಬರ್​ನಲ್ಲಿ ಅದಿತಿ ಪ್ರಭುದೇವ ಹಾಗೂ ಯಶಸ್​ ಪಾಟ್ಲಾ ಅವರ ಮದುವೆ ನೆರವೇರಿತ್ತು. 2024ರ ಜನವರಿ 1ರಂದು ಅದಿತಿ ಪ್ರಭುದೇವ ಅವರು ಸಿಹಿ ಸುದ್ದಿ ನೀಡಿದ್ದರು. ತಾವು ತಾಯಿ ಆಗುತ್ತಿರುವ ವಿಷಯವನ್ನು ಅವರು ಬಹಿರಂಗ ಪಡಿಸಿದ್ದರು. ಈಗ ಅವರು ಹೆಣ್ಣು ಮಗುವಿನ ಆಗಮನದಿಂದ ಖುಷಿ ಆಗಿದ್ದಾರೆ. ಅವರ ಬಾಳಿನಲ್ಲಿ ಹೊಸ ಅಧ್ಯಾಯ ಪ್ರಾರಂಭ ಆದಂತಾಗಿದೆ.

ಇದನ್ನೂ ಓದಿ: ಕೊನೆಗೂ ಈಡೇರಿದ ನನ್ನ ಪುಟ್ಟ ಆಸೆ ಎಂದ ಅದಿತಿ

ಅದಿತಿ ಪ್ರಭುದೇವ ಅವರಿಗೆ ಏಪ್ರಿಲ್​ 4ರಂದು ಹೆಣ್ಣು ಮಗು ಜನಿಸಿದೆ. ‘4.4.2024 ನಮ್ಮನೆ ಮಹಾಲಕ್ಷ್ಮಿ. ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು’ ಎಂಬ ಕ್ಯಾಪ್ಷನ್​ನೊಂದಿಗೆ ಅದಿತಿ ಪ್ರಭುದೇವ ಅವರು ಖುಷಿಯ ಸಮಾಚಾರ ತಿಳಿಸಿದ್ದಾರೆ. ‘ನನ್ನ ಜೀವದ ಗೆಳತಿ ಅದಿತಿ. ನಿನ್ನ ಹಾಗೆಯೇ ನಮ್ಮ ಮಗಳು’ ಎಂದು ಯಶಸ್​ ಪಾಟ್ಲಾ ಅವರು ಈ ಪೋಸ್ಟ್​ಗೆ ಕಮೆಂಟ್​ ಮಾಡಿದ್ದಾರೆ.

ಅದಿತಿ ಪ್ರಭುದೇವ ಅವರು ಚಿತ್ರರಂಗಕ್ಕೆ ಕಾಲಿಟ್ಟು ಕೆಲವು ವರ್ಷಗಳು ಕಳೆದಿವೆ. 2017ರಲ್ಲಿ ಬಂದ ‘ಧೈರ್ಯ’ ಅವರು ನಟಿಸಿದ ಮೊದಲ ಸಿನಿಮಾ. ಆ ಬಳಿಕ ಸಾಲು ಸಾಲು ಸಿನಿಮಾಗಳಲ್ಲಿ ಅವರು ನಟಿಸಿದರು. ಇತ್ತೀಚೆಗೆ ಅವರು ಸಂಸಾರದ ಕಡೆಗೆ ಹೆಚ್ಚು ಗಮನ ಹರಿಸಿದ್ದಾರೆ. ಈಗ ಮಗುವಿನ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಮತ್ತೆ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಲಿ ಎಂದು ಅಭಿಮಾನಿಗಳು ಬಯಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು