ನಟಿ ಅದಿತಿ ಪ್ರಭುದೇವ (Aditi Prabhudeva) ಅವರು ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಆ ಪೈಕಿ ‘ಅಲೆಕ್ಸಾ’ ಸಿನಿಮಾ ಕೂಡ ಕೌತುಕ ಮೂಡಿಸಿದೆ. ಈ ಸಿನಿಮಾವನ್ನು ವಿ. ಚಂದ್ರು ನಿರ್ಮಾಣ ಮಾಡಿದ್ದಾರೆ. ಜೀವ ಅವರು ನಿರ್ದೇಶನ ಮಾಡಿದ್ದಾರೆ. ಅದಿತಿ ಪ್ರಭುದೇವ ಮತ್ತು ಪವನ್ ತೇಜ್ ಅವರು ನಾಯಕಿ-ನಾಯಕನಾಗಿ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾದ ಕೆಲಸಗಳು ಕೊನೇ ಹಂತದಲ್ಲಿವೆ. ‘ಅಲೆಕ್ಸಾ’ (Alexa) ಚಿತ್ರದ ಬಿಡುಗಡೆಗೆ ತಯಾರಿ ನಡೆಯುತ್ತಿದೆ. 2024ರ ಜನವರಿ 26ರಂದು ಗಣರಾಜ್ಯೋತ್ಸವದ ಪ್ರಯುಕ್ತ ಈ ಸಿನಿಮಾ ರಿಲೀಸ್ ಆಗಲಿದೆ.
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಅಲೆಕ್ಸಾ’ ಸಿನಿಮಾವನ್ನು ಡಿಸೆಂಬರ್ 29ರಂದು ರಿಲೀಸ್ ಮಾಡಬೇಕು ಎಂದು ಚಿತ್ರತಂಡ ನಿರ್ಧರಿಸಿತ್ತು. ಆದರೆ ಡಿ.29ಕ್ಕೆ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ನಟನೆಯ ಹೈವೋಲ್ಟೇಜ್ ಸಿನಿಮಾ ‘ಕಾಟೇರ’ ಬಿಡುಗಡೆ ಆಗಿದ್ದರಿಂದ ‘ಅಲೆಕ್ಸಾ’ ಸಿನಿಮಾವನ್ನು ಮುಂದೂಡುವುದು ಅನಿವಾರ್ಯ ಆಯಿತು. ಹಾಗಾಗಿ ‘ಅಲೆಕ್ಸಾ’ ಸಿನಿಮಾ ರಿಲೀಸ್ ಜನವರಿ 26ಕ್ಕೆ ಮಂದೂಡಿಕೆ ಆಗಿದೆ.
ಇದನ್ನೂ ಓದಿ: ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ..
‘ಅಲೆಕ್ಸಾ’ ಸಿನಿಮಾದಲ್ಲಿ ಕ್ರೈಂ, ಥ್ರಿಲ್ಲರ್ ಕಥಾಹಂದರ ಇದೆ. ಈ ಸಿನಿಮಾಗೆ ನಿರ್ದೇಶಕ ಜೀವ ಅವರು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಈ ಚಿತ್ರದ ಹಾಡುಗಳನ್ನು ಡಾ. ವಿ. ನಾಗೇಂದ್ರ ಪ್ರಸಾದ್ ಬರೆದಿದ್ದಾರೆ. ಎ.ಪಿ.ಒ. ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಸಾಯಿ ಸತೀಶ್ ಅವರ ಛಾಯಾಗ್ರಹಣ, ಉಮೇಶ್ ಅವರ ಸಂಕಲನ ಈ ಚಿತ್ರಕ್ಕಿದೆ.
ಇದನ್ನೂ ಓದಿ: ಗಮನ ಸೆಳೆಯುತ್ತಿದೆ ಅಲೆಕ್ಸಾ; ಟೀಸರ್: ಖಡಕ್ ಪಾತ್ರದಲ್ಲಿ ಅದಿತಿ ಪ್ರಭುದೇವ
ಅದಿತಿ ಪ್ರಭುದೇವ ಅವರು ವಿಶೇಷ ತನಿಖಾ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಪವನ್ ತೇಜ್ ಹೀರೋ ಆಗಿ ನಟಿಸಿದ್ದಾರೆ. ನಾಗಾರ್ಜುನ್, ಹನುಮಂತೇಗೌಡ, ಮೇಘಾಶ್ರೀ, ಮಿಮಿಕ್ರಿ ಗೋಪಿ, ಚಂದ್ರಕಲಾ ಮೋಹನ್, ಮನಮೋಹನ್, ಮೈಸೂರು ಮಲ್ಲೇಶ್ ಮುಂತಾದವರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಚಂದ್ರು, ರಾಮು, ಕಲೈ ಅವರು ‘ಅಲೆಕ್ಸಾ’ ಸಿನಿಮಾಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ರವಿವರ್ಮ, ವಿಕ್ರಮ್ ಮೋರ್, ಮಾಸ್ ಮಾದ ಅವರ ಸಾಹಸ ನಿರ್ದೇಶನ ಈ ಸಿನಿಮಾಗಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.