ಆದಿ ನಟನೆಯ ‘ಕಾಂಗರೂ’ ಸಿನಿಮಾ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ ಶಿವಣ್ಣ
Kangaroo: ‘ಡೆಡ್ಲಿ ಸೋಮ’ ಖ್ಯಾತಿಯ ಆದಿತ್ಯ ನಟನೆಯ ‘ಕಾಂಗರೂ’ ಸಿನಿಮಾದ ಮೋಷನ್ ಪೋಸ್ಟರ್ ಅನ್ನು ನಟ ಶಿವರಾಜ್ ಕುಮಾರ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ.
‘ಡೆಡ್ಲಿ ಸೋಮ’ ಖ್ಯಾತಿಯ ಆದಿತ್ಯ (Aditya) ನಾಯಕರಾಗಿ ನಟಿಸಿರುವ ಹಾಗೂ ಕಿಶೋರ್ ಮೇಗಳಮನೆ ನಿರ್ದೇಶನದ ‘ಕಾಂಗರೂ’ ಚಿತ್ರದ ಮೋಷನ್ ಪೋಸ್ಟರ್ ಎ2 ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ (Shiva Rajkumar) ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಆದಿತ್ಯ ಅವರ ಅಭಿಮಾನಿಗಳು ಮೋಷನ್ ಪೋಸ್ಟರ್ ಗೆ ಫಿದಾ ಆಗಿದ್ದಾರೆ. ಚಿತ್ರದ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ.
” ಮೋಷನ್ ಪೋಸ್ಟರ್ ತುಂಬಾ ಚೆನ್ನಾಗಿದೆ. ನೋಡಿದಾಗ ಸಸ್ಪೆನ್ಸ್ ಥ್ರಿಲ್ಲರ್ ಕಥೆ ಎಂದಿನಿಸುತ್ತದೆ. ಆದಿತ್ಯ ಅವರಿಗೆ ಹಾಗೂ ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ” ಎಂದು ಶಿವಣ್ಣ ಹಾರೈಸಿದ್ದಾರೆ. ಕನ್ನಡ, ತೆಲುಗು, ತಮಿಳು ಹಾಗೂ ಮಲೆಯಾಳಂ ಭಾಷೆಗಳಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ನಿರ್ಮಾಣವಾಗುತ್ತಿದೆ. ಆದಿತ್ಯ ಅವರು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ನಾಯಕಿಯಾಗಿ ರಂಜನಿ ರಾಘವನ್ ಅಭಿನಯಿಸಿದ್ದು, ಸೈಕಿಯಾಟ್ರಿಸ್ಟ್ ಡಾಕ್ಟರ್ ಪಾತ್ರ ನಿರ್ವಹಿಸಿದ್ದಾರೆ. ಶಿವಮಣಿ, ಕರಿಸುಬ್ಬು, ನಾಗೇಂದ್ರ ಅರಸ್ ಮುಂತಾದವರು ತಾರಾಬಳಗದಲ್ಲಿದ್ದಾರೆ.
ಇದನ್ನೂ ಓದಿ:ಶಿವರಾಜ್ ಕುಮಾರ್-ರಾಮ್ ಚರಣ್ ಸಿನಿಮಾಕ್ಕೆ ಎಆರ್ ರೆಹಮಾನ್ ಸಂಗೀತ
ಆರೋಹ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚನ್ನಕೇಶವ ಬಿ.ಸಿ, ಕುಣಿಗಲ್, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್ ಬಂಡೆ, ಸ್ವಾಮಿ ಚಕ್ರಭಾವಿ, ರವಿ ಕೀಲರ ಮಂಡ್ಯ ಹಾಗೂ ಕೆ ಜಿ ಆರ್ ಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ನಿರ್ದೇಶಕ ಕಿಶೋರ್ ಮೇಗಳಮನೆ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಬರೆದಿದ್ದಾರೆ, ಸಾಧುಕೋಕಿಲ ಸಂಗೀತ ನೀಡಿದ್ದಾರೆ. ಉದಯ್ ಲೀಲ ಛಾಯಾಗ್ರಹಣ ಹಾಗೂ ಅರ್ಜುನ್ ಕಿಟ್ಟು ಸಂಕಲನ ಈ ಚಿತ್ರಕ್ಕಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ