‘ಅಕ್ಟೋಬರ್​ಗೆ ಬಂದೇ ಬರ್ತೀನಿ’; ದರ್ಶನ್​ ಹಳೆಯ ವಿಡಿಯೋ ವೈರಲ್

ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ. ಆರೋಗ್ಯ ಸಮಸ್ಯೆಗಳಿಂದಾಗಿ ಅವರಿಗೆ ಆರು ವಾರಗಳ ವೈದ್ಯಕೀಯ ರಜೆ ನೀಡಲಾಗಿದೆ. ಈ ಸಂದರ್ಭದಲ್ಲಿ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ. ಅದರಲ್ಲಿ ಅವರು ಅಕ್ಟೋಬರ್​ಗೆ ಬರೋದಾಗಿ ಹೇಳಿದ್ದರು.

‘ಅಕ್ಟೋಬರ್​ಗೆ ಬಂದೇ ಬರ್ತೀನಿ’; ದರ್ಶನ್​ ಹಳೆಯ ವಿಡಿಯೋ ವೈರಲ್
ದರ್ಶನ್
Follow us
ರಾಜೇಶ್ ದುಗ್ಗುಮನೆ
|

Updated on:Oct 31, 2024 | 7:43 AM

ನಟ ದರ್ಶನ್ ಅವರು ಸದ್ಯ ಜಾಮೀನು ಪಡೆದು ಹೊರ ಬಂದಿದ್ದಾರೆ. ಅನಾರೋಗ್ಯದ ಕಾರಣ ನೀಡಿ ಅವರಿಗೆ ಆರು ವಾರ ಕೋರ್ಟ್ ರಿಲೀಫ್ ನೀಡಿದೆ. ಅವರಿಗೆ ಬೆನ್ನು ನೋವು ಉಲ್ಬಣಿಸಿರುವುದರಿಂದ ಚಿಕಿತ್ಸೆ ಪಡೆಯೋದು ಅನಿವಾರ್ಯ ಆಗಿದೆ. ದರ್ಶನ್ ಯಾವಾಗ ಬರುತ್ತಾರೆ ಎಂಬ ವಿಚಾರದಲ್ಲಿ ಅನೇಕರು ಭವಿಷ್ಯ ನುಡಿದಿದ್ದರು. ಈ ಪೈಕಿ ಕೆಲವು ಸತ್ಯ ಆದರೆ, ಇನ್ನೂ ಕೆಲವು ಸುಳ್ಳಾಗಿದೆ. ಹೀಗಿರುವಾಗಲೇ ದರ್ಶನ್ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ. ಆ ವಿಡಿಯೋದಲ್ಲಿ ‘ಅಕ್ಟೋಬರ್​ಗೆ ಬಂದೇ ಬರ್ತೀನಿ’ ಎಂದು ಹೇಳಿದ್ದರು. ಈ ವಿಡಿಯೋನ ಫ್ಯಾನ್ಸ್​ ವೈರಲ್ ಮಾಡುತ್ತಿದ್ದಾರೆ.

ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೂನ್ 11ರಂದು ಬಂಧನಕ್ಕೆ ಒಳಗಾದರು. ಆರಂಭದಲ್ಲಿ ಎರಡು ವಾರ ಪೊಲೀಸ್ ಕಸ್ಟಡಿಯಲ್ಲಿ ಇದ್ದ ಅವರು ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆಒಪ್ಪಿಸಲಾಯಿತು. ಬೆಂಗಳೂರು ಜೈಲಿನಲ್ಲಿ ಐಷಾರಾಮಿ ಸವಲತ್ತು ಪಡೆಯುತ್ತಿದ್ದ ಆರೋಪದ ಮೇಲೆ ಎರಡೇ ತಿಂಗಳಲ್ಲಿ ಅವರನ್ನು ಬಳ್ಳಾರಿಗೆ ಜೈಲಿಗೆ ಶಿಫ್ಟ್ ಮಾಡಲಾಯಿತು. ಆಗ ಅಭಿಮಾನಿಗಳು ‘ನಮ್ಮ ಬಾಸ್ 70 ದಿನಗಳ ಮೇಲೆ ಯಾರಿಗೂ ಕಾಲ್​ಶೀಟ್ ಕೊಡಲ್ಲ’ ಎಂದರು.

ಈಗ ದರ್ಶನ್ ಬಳ್ಳಾರಿ ಜೈಲಿನಿಂದ ಬಿಡುಗಡೆ ಹೊಂದಿದ್ದಾರೆ. ಈ ವೇಳೆ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ. ದರ್ಶನ್ ಅವರು ಚಿತ್ರರಂಗಕ್ಕೆ ಬಂದು 25 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಅದನ್ನು ಆಚರಿಸಲಾಗಿತ್ತು. ಈ ವೇಳೆ ದರ್ಶನ್ ಮಾತನಾಡಿದ್ದರು.

‘ಅಕ್ಟೋಬರ್​​ಗೆ ಬಂದೇ ಬರ್ತೀನಿ ಚಿನ್ನಾ. ಬಂದೇ ಬರ್ತೀವಿ. ದಮ್ ಕಟ್ಟಾದ್ರೂ ದುಡಿದು ಬಿಡೋಣ’ ಎಂದು ದರ್ಶನ್ ಹೇಳಿದ್ದರು. ಈ ವಿಡಿಯೋನ ಅವರ ಫ್ಯಾನ್ಸ್ ಈಗ ವೈರಲ್ ಮಾಡುತ್ತಿದ್ದಾರೆ. ‘ಅವತ್ತೇ ಹೇಳಿದ್ವಿ ಅಕ್ಟೋಬರ್​ಗೆ ಬಂದೇ ಬರ್ತೀವಿ ಅಂತ’ ಎಂದು ಫ್ಯಾನ್ಸ್ ಬರೆದುಕೊಳ್ಳುತ್ತಾ ಇದ್ದಾರೆ.

ಇದನ್ನೂ ಓದಿ: ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ರಿಲ್ಯಾಕ್ಸ್ ಆದ ದರ್ಶನ್; ಮಗನ ಬರ್ತ್​ಡೇ ಆಚರಣೆ

ದರ್ಶನ್ ಅವರು ವೈದ್ಯಕೀಯ ವರದಿಗಳನ್ನು ನೀಡಿ ಜಾಮೀನು ಪಡೆದಿದ್ದಾರೆ. ಅವರು ಆರು ವಾರವನ್ನು ಸಂಪೂರ್ಣವಾಗಿ ಚಿಕಿತ್ಸೆಗೆ ಬಳಕೆ ಮಾಡಿಕೊಳ್ಳಬೇಕಿದೆ. ಸದ್ಯ ಅವರು ಪತ್ನಿ ನಿವಾಸದಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:32 am, Thu, 31 October 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ