AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ ಫೋಟೋ ವೈರಲ್ ಬೆನ್ನಲ್ಲೇ ಪರಪ್ಪನ ಅಗ್ರಹಾರದ ಏಳು ಅಧಿಕಾರಿಗಳು ಸಸ್ಪೆಂಡ್

ನಟ ದರ್ಶನ್ ಅವರಿಗೆ ಜೈಲಲ್ಲಿ ಎಲ್ಲಾ ಸೌಲಭ್ಯ ಸಿಗುತ್ತಿದೆಯೇ ಎನ್ನುವ ಪ್ರಶ್ನೆ ಮೂಡಿಸುವಂತ ಫೋಟೋ ಒಂದು ವೈರಲ್ ಆಗಿದೆ. ದರ್ಶನ್ ಇದರಲ್ಲಿ ಕಾಫಿ ಕುಡಿಯುತ್ತಾ, ಸಿಗರೇಟ್ ಸೇದುತ್ತಿರುವ ಫೋಟೋ ಇದೆ. ಆರೋಪಿ ದರ್ಶನ್​ಗೆ ಪರಪ್ಪನ ಅಗ್ರಹಾರ ಜೈಲಿನಲ್ಲೇ ಎಲ್ಲಾ ಸೌಲಭ್ಯ ಸಿಗುತ್ತಿದೆ ಎನ್ನಲಾಗಿದೆ. ಈ ಪ್ರಕರಣದಲ್ಲಿ ಏಳು ಜನರನ್ನು ಸಸ್ಪೆಂಡ್ ಮಾಡಲಾಗಿದೆ.

ದರ್ಶನ್​ ಫೋಟೋ ವೈರಲ್ ಬೆನ್ನಲ್ಲೇ ಪರಪ್ಪನ ಅಗ್ರಹಾರದ ಏಳು ಅಧಿಕಾರಿಗಳು ಸಸ್ಪೆಂಡ್
ರಾಜೇಶ್ ದುಗ್ಗುಮನೆ
|

Updated on:Aug 26, 2024 | 11:38 AM

Share

ನಟ ದರ್ಶನ್ ಅವರು ಕೇಂದ್ರ ಕಾರಾಗೃಹದಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಜೈಲಿನಲ್ಲಿ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಾ ಇದ್ದರು. ಈ ಫೋಟೋ ವೈರಲ್ ಆಗಿತ್ತು. ಇದರ ಜೊತೆಗೆ ದರ್ಶನ್ ಅವರು ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಈ ಬಗ್ಗೆ ಗೃಹಸಚಿವ ಜಿ. ಪರಮೇಶ್ವರ್ ಮಾತನಾಡಿದ್ದಾರೆ. ಜೈಲಿನ ಏಳು ಅಧಿಕಾರಿಗಳನ್ನು ಅವರು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.

‘ಈ ಪ್ರಕರಣದಲ್ಲಿ ಏಳು ಅಧಿಕಾರಿಗಳನ್ನು ನಾವು ಸಸ್ಪೆಂಡ್ ಮಾಡಿದ್ದೇವೆ. ನಾನು ವರದಿಯನ್ನು ಕೇಳಿದ್ದೇನೆ. ಈ ರೀತಿಯ ಘಟನೆ ನಡೆಯಬಾರದು. ಕೆಲವರನ್ನು ಸಸ್ಪೆಂಡ್ ಮಾಡಿದ್ದು, ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಮೇಲಧಿಕಾರಿಗಳನ್ನು ಟ್ರಾನ್ಸ್​ಫಾರ್​​ ಮಾಡ್ತೇನೆ. ಪದೇ ಪದೇ ಈ ರೀತಿ ಆಗಬಾರದು. ಎಲ್ಲಾ ಬಂಧಿಕಾನೆಗಳಲ್ಲಿ ಸಿಸಿಟಿವ ಹಾಕುತ್ತಿದ್ದೇವೆ. ಜಾಮರ್ ಹಾಕಲಾಗುತ್ತಿದೆ. ಆದಾಗ್ಯೂ ಈ ರೀತಿಯ ಘಟನೆ ನಡೆಯುತ್ತಿದೆ’ ಎಂದು ಪರಮೇಶ್ವರ್ ಬೇಸರ ಹೊರಹಾಕಿದ್ದಾರೆ.

‘ಮೇಲಧಿಕಾರಿಗಳು ಈ ಪ್ರಕರಣದಲ್ಲಿ ನೇರವಾಗಿ ಭಾಗಿ ಆಗಿದ್ದರೆ ಅವರನ್ನು ತೆಗೆದು ಹಾಕುತ್ತೇವೆ. ವರದಿ ಬಂದ ನಂತರ ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ’ ಎಂದು ಪರಮೇಶ್ವರ್ ಅವರು ಭರವಸೆ ನೀಡಿದ್ದಾರೆ. ಊಟದ ವಿಚಾರ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ದರ್ಶನ್​ಗೆ ಚಿಕನ್ ಬಿರಿಯಾನಿ ಕೊಟ್ಟಿಲ್ಲ. ಜೈಲಿನ ನಿಯಮದಂತೆ ನಡೆಯಲಾಗುತ್ತಿದೆ. ಈಗ ನಡೆದ ಘಟನೆ ಸಮರ್ಥಿಸಿಕೊಳ್ಳುತ್ತಿಲ್ಲ’ ಎಂದಿದ್ದಾರೆ ಪರಮೇಶ್ವರ್.

ಜೈಲಿನಲ್ಲಿ ಜಾಮರ್ ಹಾಕಿ ಹೈ ಪ್ರೀಕ್ವೆನ್ಸಿ ಇಡಲಾಗಿತ್ತಂತೆ. ಇದರಿಂದ ಪಕ್ಕದ ಏರಿಯಾಗಳಿಗೆ ತೊಂದರೆ ಆಗಿತ್ತು. ಹೀಗಾಗಿ, ಸದ್ಯ ಪ್ರೀಕ್ವೆನ್ಸಿ ಕಡಿಮೆ ಮಾಡಲಾಗಿದೆ. ‘ಫೋಟೋ ಯಾರು ತೆಗೆದರು? ಯಾರ ಮೊಬೈಲ್​ನಲ್ಲಿ ತೆಗದಿದ್ದಾರೆ ಅನ್ನೋದು ಮುಖ್ಯ ಆಗುತ್ತದೆ’ ಎಂದು ಪರಮೇಶ್ವರ್ ಹೇಳಿದ್ದಾರೆ.

ಇದನ್ನೂ ಓದಿ: ದರ್ಶನ್​ಗೆ ಸಿಗರೇಟ್ ಮಾತ್ರವಲ್ಲ, ಸಿಗ್ತಿದೆ ಶಿವಾಜಿ ಮಿಲ್ಟ್ರಿ ಹೋಟೆಲ್ ಬಿರಿಯಾನಿ, ಕಿಕ್ಕೇರಿಸೋ ಎಣ್ಣೆ

ಸಸ್ಪೆಂಡ್ ಆದವರು ಯಾರು?

ಜೈಲರ್​​​ಗಳಾದ ಶರಣಬಸವ ಅಮೀನ್​​ಗಢ, ಖಂಡೇವಾಲ್, ಸಹಾಯಕ ಜೈಲರ್​ಗಳಾದ ಪುಟ್ಟಸ್ವಾಮಿ, ಶ್ರೀಕಾಂತ್​ ತಲವಾರ್​, ಜೈಲಿನ ಹೆಡ್​​ ವಾರ್ಡರ್​ಗಳಾದ ವೆಂಕಪ್ಪ, ಸಂಪತ್, ವಾರ್ಡರ್​​​ ಬಸಪ್ಪ ಅವರನ್ನು ಅಮಾನತುಗೊಂಡವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:28 am, Mon, 26 August 24

ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ